Homeರಾಷ್ಟ್ರೀಯಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಭಾರತದ ಅತಿದೊಡ್ಡ ಪತ್ರಕರ್ತರ ಸಂಘ PCI ಚುನಾವಣೆ; ಎಡಪಂಥೀಯ ವಿಚಾರಧಾರೆಯ ಸದಸ್ಯರ ಪಾಲು

ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಚುನಾಯಿತ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ನಿರಂತರ ಕುಸಿತದಲ್ಲಿರುವಾಗ ಮತ್ತು ಮೋದಿ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಭಾರತದ ಅತೀದೊಡ್ಡ ಪತ್ರಕರ್ತರ ಸಂಘವಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (PCI) ದ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 21 ಸ್ಥಾನಗಳನ್ನು ಎಡಪಂಥೀಯ ವಿಚಾರಧಾರೆಯ ಸದಸ್ಯರು ಗೆದ್ದಿದ್ದಾರೆ.

ಫಲಿತಾಂಶದ ಪ್ರಕಾರ, ಹಿರಿಯ ಪತ್ರಕರ್ತ ಉಮಾಕಾಂತ್ ಲಖೇರಾ ನೇತೃತ್ವದ ಎಡಪಂಥೀಯ ವಿಚಾರಧಾರೆಯ ಸಮಿತಿಯು ತೀವ್ರ ಹೋರಾಟದ ನಂತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡಿರುವ ಎಲ್ಲಾ 21 ಸ್ಥಾನಗಳನ್ನು ಗೆದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಮನೋರಂಜನ್ ಭಾರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸ್ವಾತಿ ಮಾಥುರ್ ಮತ್ತು ಖಜಾಂಚಿ ಸ್ಥಾನಕ್ಕೆ ಚಂದರ್ ಶೇಖರ್ ಲೂತ್ರಾ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಅಧ್ಯಕ್ಷರಾಗಿ ಆಯ್ಕೆಯಾದ ಲಖೇರಾ, ಮಾಧ್ಯಮಗಳ ಮೇಲಿನ ಬಲಪಂಥೀಯ ದಾಳಿಯ ವಿರುದ್ಧ ನಿಂತಿದ್ದಕ್ಕಾಗಿ ಮಾಧ್ಯಮ ಭ್ರಾತೃತ್ವಕ್ಕೆ ಧನ್ಯವಾದ ಹೇಳಿದ್ದಾರೆ.

“ಎಲ್ಲಾ ಸಂಸ್ಥೆಗಳು ಕುಸಿದಿಲ್ಲ ಎಂಬುದನ್ನು ಈ ಗೆಲುವು ತೋರಿಸುತ್ತದೆ. ಮಾಧ್ಯಮ ಸ್ವಾತಂತ್ರ್ಯದ ದಮನ, ಅವರ ಘನತೆ ಮತ್ತು ಸಂಸ್ಥೆಯ ಮೇಲೆ ಸರ್ಕಾರದ ದಾಳಿಯ ವಿರುದ್ಧ ಪತ್ರಕರ್ತರು ಮೌಲ್ಯಗಳಿಗಾಗಿ ಹೋರಾಡಿದರು” ಎಂದು ಅವರು ಹೇಳಿದ್ದಾರೆ.

“ಕಳೆದ 8 ವರ್ಷಗಳಲ್ಲಿ ಅನೇಕ ಪತ್ರಕರ್ತರನ್ನು ಜೈಲಿಗೆ ಹಾಕಲಾಯಿತು, ಸರ್ಕಾರದ ವಿರುದ್ಧ ಬರೆದಿದ್ದಕ್ಕಾಗಿ ಅನೇಕರಿಗೆ ಕಿರುಕುಳ ನೀಡಲಾಯಿತು … ಸರ್ಕಾರವು ಮಾಧ್ಯಮಗಳಿಗೆ ಸಂಸತ್ತು, ಸಚಿವಾಲಯಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಿ ಪತ್ರಕರ್ತರನ್ನು ವರದಿ ಮಾಡುವುದನ್ನು ತಡೆಯಲು ಪ್ರಯತ್ನಿಸಿದೆ” ಎಂದು ಲಖೇರಾ ಹೇಳಿದ್ದಾರೆ.

“ಪತ್ರಕರ್ತರ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಲಾಗುತ್ತಿರುವಾಗ ಮೋದಿ ಸರ್ಕಾರವು ಮೌನ ವಹಿಸಿತ್ತು” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಚುನಾವಣೆಯಲ್ಲಿ ಬಲಪಂಥೀಯ ಸಮಿತಿಯನ್ನು ಆಯ್ಕೆ ಮಾಡುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಕೂಡಾ ಪ್ರಚಾರ ಮಾಡಿದ್ದರು. ಹೀಗಾಗಿ ಈ ಫಲಿತಾಂಶವು ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದವು.

ಸಂಜಯ್ ಬಸಾಕ್ ನೇತೃತ್ವದ ಬಲಪಂಥೀಯ ಸಮಿತಿಯು ಚುನಾವಣೆಯಲ್ಲಿ ಗೆಲ್ಲಿಸುವಂತೆ ಕೆಲವು ಬಿಜೆಪಿ ನಾಯಕರು ಮತ್ತು ವಕ್ತಾರರು ಸಹ ಪ್ರಚಾರ ಮಾಡಿದ್ದರು. ಬಸಕ್ ಸಮಿತಿಯ ಪರವಾಗಿ ಬಿಜೆಪಿ ವಕ್ತಾರರು ಟ್ವೀಟ್ ಮಾಡಿ, ನಂತರ ಅದನ್ನು ಡಿಲಿಟ್‌ ಮಾಡಿದ್ದಾರೆ.

ಗಮನೀಯ ಅಂಶವೆಂದರೆ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಎಡ ಒಲವಿನ ಸಮಿತಿಯು ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. 2021 ರಲ್ಲಿ, ಲಖೇರಾ ನೇತೃತ್ವದ ಸಮಿತಿಯು ಭಾರಿ ಅಂತರದಿಂದ ಗೆದ್ದಿತ್ತು. ಉಮಾಕಾಂತ ಲಖೇರಾ ಅಧ್ಯಕ್ಷರಾಗಿ ಆಯ್ಕೆಯಾದರೆ, ಶಾಹಿದ್ ಅಬ್ಬಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಚಂದರ್ ಶೇಖರ್ ಲೂತ್ರಾ ಅವರು ಆಯ್ಕೆಯಾಗಿದ್ದರು. ಸುಧಿ ರಂಜನ್ ಸೇನ್ ಅವರು ಖಜಾಂಚಿ ಹುದ್ದೆಯನ್ನು ಗೆದ್ದಿದ್ದರು.

ಇದನ್ನೂ ಓದಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

1957 ರಲ್ಲಿ ದುರ್ಗಾ ದಾಸ್ ಸ್ಥಾಪಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ. ದೇಶದ ಈ ರೀತಿಯ ಹಳೆಯ ಸಂಸ್ಥೆಗಳಲ್ಲಿ ಒಂದಾದ PCI ಅನ್ನು ವಾರ್ಷಿಕವಾಗಿ ಚುನಾಯಿತ ಕಾರ್ಯನಿರ್ವಾಹಕ ಸಂಸ್ಥೆಯು ನೇತೃತ್ವ ವಹಿಸುತ್ತದೆ. ಇದು ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ-ಜನರಲ್, ಜಂಟಿ ಕಾರ್ಯದರ್ಶಿ ಮತ್ತು ಖಜಾಂಚಿ ಮತ್ತು ವ್ಯವಸ್ಥಾಪಕ ಸಮಿತಿಯ 16 ಸದಸ್ಯರನ್ನು ಒಳಗೊಂಡಿರುತ್ತದೆ.

2021 ರ ಹೊತ್ತಿಗೆ, ಇದು ಸುಮಾರು 4,200 ಸಕ್ರಿಯ ಸದಸ್ಯರು, 900 ಸಹವರ್ತಿ ಸದಸ್ಯರು ಮತ್ತು ಕೆಲವು ಡಜನ್ ಕಾರ್ಪೊರೇಟ್ ಸದಸ್ಯರನ್ನು ಹೊಂದಿದ್ದು, ಇದು ಭಾರತದಲ್ಲಿನ ಅತಿದೊಡ್ಡ ಪತ್ರಕರ್ತರ ಸಂಸ್ಥೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...