Homeಕರ್ನಾಟಕವಿಪಕ್ಷ ನಾಯಕನ ಆಯ್ಕೆ ವಿಳಂಬ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಗೆ ಲೀಗಲ್ ನೋಟಿಸ್

ವಿಪಕ್ಷ ನಾಯಕನ ಆಯ್ಕೆ ವಿಳಂಬ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಗೆ ಲೀಗಲ್ ನೋಟಿಸ್

- Advertisement -
- Advertisement -

ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ವಿಳಂಬ ಮಾಡುತ್ತಿರುವ ಹಿನ್ನೆಲೆ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವಕೀಲ ಎನ್.ಪಿ. ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಮೂರು ತಿಂಗಳು ಕಳೆದರೂ ಈವರೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದರಿಂದ ಹಲವು ನೇಮಕಗಳು ವಿಳಂಬವಾಗಿವೆ. ಮಾನವ ಹಕ್ಕುಗಳ ಆಯೋಗ, ಉಪಲೋಕಾಯುಕ್ತ, ಕೆಪಿಎಸ್‌ಸಿ ಸೇರಿದಂತೆ ಹಲವು ನೇಮಕಗಳಾಗುತ್ತಿಲ್ಲ. ”ಕಾನೂನಿನಂತೆ ಕೆಲ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲು ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ, ಮುಖ್ಯ ನ್ಯಾಯಮೂರ್ತಿಗಳ ಸಮಾಲೋಚನೆಯ ಅಗತ್ಯವಿದೆ” ಎಂದು ವಕೀಲ ಎನ್.ಪಿ. ಅಮೃತೇಶ್ ಹೇಳಿದ್ದಾರೆ.

”ವಿರೋಧ ಪಕ್ಷದ ನಾಯಕನಿಲ್ಲದ್ದರಿಂದ ಈ ನೇಮಕಗಳು ನಡೆಯುತ್ತಿಲ್ಲ, ಅಲ್ಲದೇ ಸರ್ಕಾರ ಎಡವಿದಾಗ ಎಚ್ಚರಿಸಲು, ಜನರ ಪರವಾಗಿ ಸಮರ್ಥ ದನಿಯಾಗಲು ವಿರೋಧಪಕ್ಷದ ನಾಯಕನ ಅಗತ್ಯವಿದೆ. ಭಾರತದ ಪ್ರಜೆಯಾಗಿ, ಮತದಾರನಾಗಿ ವಿರೋಧಪಕ್ಷದ ನಾಯಕನನ್ನು ನೇಮಿಸುವಂತೆ ಕೋರಿಕೊಳ್ಳುವ ಹಕ್ಕು ನನಗಿದೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುತ್ತೇನೆ” ಎಂದು ಅಮೃತೇಶ್ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ. ಜೆ.ಪಿ. ನಡ್ಡಾ ಮಾತ್ರವಲ್ಲದೇ,‌ ನಳಿನ್ ಕುಮಾರ್ ಕಟೀಲ್, ಸ್ಪೀಕರ್, ರಾಜ್ಯಪಾಲರಿಗೂ ನೋಟಿಸ್​ನ ಪ್ರತಿಯನ್ನು ಕಳುಹಿಸಲಾಗಿದೆ.

ಈ ವಿಚಾರವಾಗಿ ಹಾವೇರಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ”ವಿಪಕ್ಷ ನಾಯಕರ ಆಯ್ಕೆ ಏಕೆ ವಿಳಂಬ ಆಗುತ್ತಿದೆ ಎನ್ನುವುದು ನನಗೂ ಗೊತ್ತಿಲ್ಲ. ವಿಪಕ್ಷ ನಾಯಕರ, ರಾಜ್ಯಾಧ್ಯಕ್ಷರನ್ನು ಒಟ್ಟಿಗೆ ಆಯ್ಕೆ ಮಾಡಬಹುದು. ಈ ಕಾರಣಕ್ಕೆ ವಿಳಂಬವಾಗಿದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

ರಾಜ್ಯ ರಾಜಕಾರಣದ ಇತಿಹಾಸದಲ್ಲಿ 30ವರ್ಷದಲ್ಲಿ ಇದೇ ಮೊದಲ ಬಾರಿ ವಿಪಕ್ಷ ನಾಯಕನಿಲ್ಲದೇ ವಿಧಾನಸಭೆಯಲ್ಲಿ ಕಾರ್ಯಕಲಾಪಗಳು ನಡೆದಿವೆ. ಬಿಜೆಪಿಗೆ ವಿಪಕ್ಷ ನಾಯಕ ಇಲ್ಲದಿರುವುದು ಕಾಂಗ್ರೆಸ್‌ಗೆ ದಾಳವಾಗಿದ್ದು, ಟೀಕೆ ಮಾಡುತ್ತಿದೆ. ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕುಂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಬ್ಬನೇ ಒಬ್ಬ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ ಇಲ್ಲವೇ? ಎಂದು ಇತ್ತೀಚೆಗೆ ಪ್ರಶ್ನೆ ಮಾಡಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...