Homeಕರ್ನಾಟಕಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

ಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

- Advertisement -
- Advertisement -

ಕಲಬುರಗಿ ನಗರದ ಸಂಗಮ ಕಾಂಪ್ಲೆಕ್ಸ್‌ನಲ್ಲಿ ಇರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ.

ನಗರ ಪೊಲೀಸ್ ‌ಕಮಿಷನರ್ ಚೇತನ್ ಆರ್. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಯುವತಿ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕೆಲವರು ಪರಾರಿ ಆಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಮೂರು ತಿಂಗಳಿಂದ ಸಕ್ರಿಯವಾಗಿ ಈ ಕಾಲ್ ಸೆಂಟರ್‌ ಮತದಾರರಿಗೆ ನಿರಂತರವಾಗಿ ಕರೆ ಮಾಡಿ ಬಿಜೆಪಿಗೆ ಮತ ಹಾಕುವಂತೆ ಮನವೊಲಿಕೆ ಮಾಡುತ್ತಿತ್ತು. ಮತದಾನದ ದಿನವಾದ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಯುವತಿಯರನ್ನು ಸೆಂಟರ್‌ಗೆ ಕರೆ ತಂದು ಅವರಿಂದ ಮತದಾರರಿಗೆ ಕರೆ ಮಾಡಿಸಲಾಗಿದೆ. ಕಾಂಗ್ರೆಸ್‌ಗೆ ಮತ ಹಾಕುವುದನ್ನು ತಪ್ಪಿಸುವುದನ್ನೇ ಟಾರ್ಗೆಟ್ ಮಾಡಿಕೊಂಡು ಮನವೊಲಿಕೆ ಮಾಡಲಾಗುತ್ತಿತ್ತು ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರು ಮತದಾನದ ಕಾರಣ ಕೆಲಸಕ್ಕೆ ಬರಲು ಹಿಂದೇಟು ಹಾಕಿ, ಮತಚಲಾಯಿಸಲು ಹೋಗುವುದಾಗಿ ಹೇಳಿದ್ದರು. ಕಾಲ್ ಸೆಂಟರ್‌ನಲ್ಲಿಯೇ ಮತ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ನಂಬಿಸಿ ಕರೆ ತರಲಾಗಿತ್ತು. ಆ ಬಳಿಕ‌‌‌ ಅವರಿಂದ ಕರೆ ಮಾಡಿಸಿದ್ದಾರೆ ಎಂದು‌ ಕಾಂಗ್ರೆಸ್ಸಿಗರು ದೂರಿದ್ದಾರೆ.

ಮೇಲುಕೋಟೆ ಕ್ಷೇತ್ರದಲ್ಲಿ ಮಾತಿನ ಘರ್ಷಣೆ

ಮಂಡ್ಯ ಜಿಲ್ಲೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿರುವ ಮೇಲುಕೋಟೆಯಲ್ಲಿ ರೈತ ಸಂಘ ಮತ್ತು ಜೆಡಿಎಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನಾರಾಯಣಪುರ ಮತಗಟ್ಟೆಯಲ್ಲಿ ರೈತಸಂಘದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಹಿರಿಯ ನಾಗರಿಕರನ್ನು ಕರೆತಂದು ಮತ ಹಾಕಿಸುವ ವಿಚಾರಕ್ಕೆ ಗಲಾಟೆಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲೇ ಘಟನೆ ನಡಿದಿದ್ದು, ವಿಡಿಯೊ ಮಾಡುತ್ತಿದ್ದ ಇಬ್ಬರು ಯುವಕರಿಗೆ ಸಿ.ಎಸ್.ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದಾರೆ.

ಪುಟ್ಟರಾಜು ವಿರುದ್ಧ ರೈತಸಂಘದ ಸದಸ್ಯರು ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಇತ್ತು. ಸ್ಥಳಕ್ಕೆ ಬಂದ ಪೊಲೀಸರು ಗುಂಪು‌ ಚದುರಿಸಿದ್ದಾರೆ.

ಗಂಗಾವತಿ: ಕೆಆರ್‌ಪಿಪಿ- ಬಿಜೆಪಿ ಕಾರ್ಯಕರ್ತರ ನಡುವೆ ಜಗಳ

ಗಂಗಾವತಿ ನಗರದ ಎಪಿಎಂಸಿಯ 159 ಹಾಗೂ160 ಮತಗಟ್ಟೆ ಬಳಿ ಬುಧವಾರ ಕೆಆರ್‌ಪಿಪಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಬುಧವಾರ ಮತದಾನ ಸಮಯದಲ್ಲಿ ಮಾತಿನ ಚಕಮಕಿ ನಡೆದಿದೆ.

ಮತಗಟ್ಟೆಯಲ್ಲಿ ಕೆಆರ್‌ಪಿಪಿ ಪಕ್ಷದ ಮಹಿಳಾ ಏಜೆಂಟ್ ತಮ್ಮ ಸೀರೆಗೆ ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್ ಧರಿಸಿದ್ದಾರೆ ಎಂದು ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಪರವಾನಗಿ ಪಡೆದು ಧರಿಸಲಾಗಿದೆ ಎಂದು ಏಜೆಂಟ್ ತಿಳಿಸಿದ್ದಾರೆ. ಈ ಕಾರಣಕ್ಕೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...