Homeಮುಖಪುಟಚುನಾವಣಾ ನೀತಿ ಬದಲಾವಣೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಿರುವ ಕಾಂಗ್ರೆಸ್

ಚುನಾವಣಾ ನೀತಿ ಬದಲಾವಣೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಿರುವ ಕಾಂಗ್ರೆಸ್

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ನಿಯಮವನ್ನೆ ಬದಲಾಯಿಸಿದ್ದ ಕೇಂದ್ರ ಸರ್ಕಾರ

- Advertisement -
- Advertisement -

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಪಂಜಾಬ್ – ಹರಿಯಾಣ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಚುನಾವಣಾ ನೀತಿಯನ್ನೆ ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದೆ. ಇತ್ತಿಚಿನ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲರೊಬ್ಬರಿಗೆ ಒದಗಿಸುವಂತೆ ಸೂಚಿಸಿದ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ಈ ಬದಲಾವಣೆ ಮಾಡಿತ್ತು. ಚುನಾವಣಾ ನೀತಿ ಬದಲಾವಣೆ

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಜವಾಬ್ದಾರಿ ಹೊಂದಿರುವ ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಸಾರ್ವಜನಿಕ ಸಮಾಲೋಚನೆ ಇಲ್ಲದೆ ಪ್ರಮುಖ ನಿಯಮಗಳನ್ನು “ಏಕಪಕ್ಷೀಯವಾಗಿ ಮತ್ತು ನಿರ್ಲಜ್ಜವಾಗಿ” ತಿದ್ದುಪಡಿ ಮಾಡಲು ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ಪಕ್ಷದ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ವಿಶೇಷವಾಗಿ ಆ ತಿದ್ದುಪಡಿಯಿಂದ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಜವಾಬ್ದಾರಿಯುತವಾಗಿಸುವ ಅಗತ್ಯ ಮಾಹಿತಿಯ ಸಾರ್ವಜನಿಕರಿಗೆ ಲಭ್ಯವಿಲ್ಲದೆಂತೆ ಆಗುತ್ತದೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣಾ ಪ್ರಕ್ರಿಯೆಯು ಕುಸಿಯುತ್ತಿರುವ ವೇಳೆ ಅದರ ಸಮಗ್ರತೆಯನ್ನು ಪುನಃಸ್ಥಾಪಿಸಲು ಸುಪ್ರೀಂ ಕೋರ್ಟ್ ಸಹಾಯ ಮಾಡುತ್ತದೆ ಎಂಬ ಭರವಸೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1961 ರ ಚುನಾವಣಾ ನಿಯಮಗಳ ಹಿಂದಿನ ನಿಯಮ 93 (2) (ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತದೆ” ಎಂದು ಇತ್ತು. ಇದೀಗ ಕೇಂದ್ರ ಸರ್ಕಾರ ಇದನ್ನು ಬದಲಾಯಿಸಿ, “ಚುನಾವಣೆಗೆ ಸಂಬಂಧಿಸಿದ ಈ ‘ನಿಯಮಾವಳಿಗಳಲ್ಲಿ ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ನಿಯಮ ತಂದಿದೆ. ಚುನಾವಣಾ ನೀತಿ ಬದಲಾವಣೆ

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಈ ಬದಲಾವಣೆಗೆ ಸೂಚನೆ ನೀಡಿದ್ದು, ಹಾಗಾಗಿ ಸಾರ್ವಜನಿಕರಿಂದ ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲು ಇನ್ನು ಮುಂದೆ ಸಾಧ್ಯವಾಗುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದು. ಹಾಗಾಗಿ, ಸಾರ್ವಜನಿಕರಿಗೆ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಒದಗಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಲು ನ್ಯಾಯಾಲಯಗಳಿಗೆ ಸಾಧ್ಯವಾಗುವುದಿಲ್ಲ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡಿಸೆಂಬರ್ 9 ರಂದು ಚುನಾವಣಾ ಆಯೋಗಕ್ಕೆ ವೀಡಿಯೋಗ್ರಫಿ, ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳು ಮತ್ತು ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲ ಮೆಹಮೂದ್ ಪ್ರಾಚಾಗೆ ಒದಗಿಸುವಂತೆ ಸೂಚಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ನಿಯಮಗಳನ್ನು ಬದಲಾಯಿಸಿದೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಈ ತಿದ್ದುಪಡಿಯನ್ನು ಟೀಕಿಸಿದ್ದು, ಇದು ಚುನಾವಣಾ ಪ್ರಕ್ರಿಯೆಯಲ್ಲಿ “ಪಾರದರ್ಶಕತೆಯನ್ನು ಕೊಲ್ಲುವ” ಉದ್ದೇಶವನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...