Homeಮುಖಪುಟಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ

ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -
- Advertisement -

ಕಾರ್ಪೋರೇಟ್ ಫಂಡಿಂಗ್‍ಗೆ ನಿಷೇಧ, ರಾಷ್ಟ್ರೀಯ ಚುನಾವಣಾ ನಿಧಿ ಸ್ಥಾಪನೆಗೆ ಒತ್ತಾಯ: ಮಾಜಿ ಮುಖ್ಯ ಚುನಾವಣಾ ಆಯುಕ್ತರೊಬ್ಬರ ಆಗ್ರಹ
 
ದೇಶದಲ್ಲಿ ಚುನಾವಣಾ ಸುಧಾರಣೆಗಳನ್ನು ತ್ವರಿತವಾಗಿ ಜಾರಿ ಮಾಡಬೇಕಿದೆ ಎಂದಿರುವ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಈ ಕೃಷ್ಣಮೂರ್ತಿ, ರಾಷ್ಟ್ರೀಯ ಚುನಾವಣಾ ನಿದಿಯೊಂದನ್ನು ಸ್ಥಾಪಿಸಬೇಕು ಮತ್ತು ಕಾರ್ಪೋರೇಟ್‍ಗಳು ಪಕ್ಷಗಳಿಗೆ ನೀಡುವ ಫಂಡಿಂಗ್‍ಗೆ ನಿಷೇಧ ಹಾಕಬೇಕು ಎಂದು ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ ಎಂದು ಪಿಟಿಐ ವರದಿ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಂಗಳವಾರ ಹೈದರಾಬಾದಿನಲ್ಲಿ ಮಾತನಾಡಿದ ಅವರು, ‘ಈ ರಾಷ್ಟ್ರೀಯ ನಿಧಿಗೆ ಜನರಿಂದ ಪಾರದರ್ಶಕವಾಗಿ ದೇಣಿಗೆ ಪಡೆಯಬೇಕು. ಚುನಾವಣಾ ಆಯೋಗವು ಎಲ್ಲ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ನಿಧಿಯನ್ನು ಚುನಾವಣಾ ಕಾರ್ಯಕ್ಕೆ ಹೇಗೆ ಬಳಸಬಹುದು ಎಂದು ನಿಯಮ ರೂಪಿಸಬೇಕು. ಕಾರ್ಪೋರೇಟ್ ಕಂಪನಿಗಳು ಈಗ ಪಕ್ಷಗಳಿಗೆ ನೀಡುತ್ತಿರುವ ಬೃಹತ್ ನಿಧಿಗಳು ಗೌಪ್ಯವಾಗಿದ್ದು ಇದು ಭ್ರಷ್ಟಾಚಾರಕ್ಕೆ ಆಸ್ಪದ ನೀಡುತ್ತಿದೆ ಎಂದಿದ್ದಾರೆ.

2004ರಲ್ಲಿ ಚುನಾವಣಾ ನಿರ್ವಹಣೆ ಜವಾಬ್ದಾರಿ ನಿರ್ವಹಿಸಿದ್ದ ಕೃಷ್ಣಮೂರ್ತಿ, ಈ ಸಲದ ಚುನಾವಣೆಯಲ್ಲಿ 60 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚಾಗಿದೆ ಎಂಬ ಚಿಂತಕರ ಕೂಟವೊಂದರ ವರದಿಯ ಬಗ್ಗೆ ನೇರ ಉತ್ತರ ನೀಡಲು ನಿರಾಕರಿಸದರು. ‘ಪಕ್ಷಗಳು ಮತ್ತು ಅಭ್ಯರ್ಥಿಗಳು ಹೆಚ್ಚಾಗಿರುವವುದರಿಂದ ಚುನಾವಣಾ ವೆಚ್ಚವೂ ಏರಿರಬಹುದು’ ಎಂದು ಅವರು ಅಭಿಪ್ರಾಯ ಪಟ್ಟರು.

ಇದಕ್ಕಿಂತ ಕಳವಳಕಾರಿ ಸಂಗತಿ ಎಂದರೆ ಕಾರ್ಪೋರೇಟ್ ಕಂಪನಿಗಳಿಂದ ನೀಡಲ್ಪಡುವ ಅಪಾರದರ್ಶಿಕ ದೇಣಿಗೆಗಳು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಯಾವೊಂದು ಪಕ್ಷವೂ ಚುನಾವಣಾ ಸುಧಾರಣೆಗಳ ಬಗ್ಗೆ ಗಂಭೀರ ನಿಲುವನ್ನೇ ಹೊಂದಿಲ್ಲದಿರುವುದು ಆತಂಕದ ವಿಷಯ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ಈ ಚುನಾವಣಾ ವ್ಯವಸ್ಥೆಯ ಬಗ್ಗೇ ಅವರಿಗೆ (ರಾಜಕಾರಣಿಗಳಿಗೆ) ವೈಯಕ್ತಿಕವಾದ ಸಂತೋಷವಿಲ್ಲ. ಆದರೆ ಒಟ್ಟಾಗಿ, ಈಗಿರುವ ಯಥಾಸ್ಥಿತಿಯೇ ಮುಂದುವರೆಯಲೆಂದು ಅವರೆಲ್ಲ ಬಯಸಿದ್ದಾರೆ’ ಎಂದೂ ಕೃಷ್ಣಮೂರ್ತಿ ಟೀಕಿಸಿದರು. ವಿ.ವಿ ಪ್ಯಾಟ್‍ಗಳಿಲ್ಲದೆಯೂ ಇವಿಯಂಗಳು ವಿಶ್ವಾಸಾರ್ಹ ಎಂದು ತಮ್ಮ ಹಿಂದಿನ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...