- Advertisement -
- Advertisement -
ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿ ಮತ್ತು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಬೆಳಿಗ್ಗೆ 11.30ರ ಹೊತ್ತಿಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್ ) 41, ಬಿಜೆಪಿ 26, ಕಾಂಗ್ರೆಸ್ 10, ಪಕ್ಷೇತರರು 6, ಪಿಡಿಪಿ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.
ಹರಿಯಾಣದಲ್ಲಿ ಬಿಜೆಪಿ 50, ಕಾಂಗ್ರೆಸ್ 34, ಸ್ವತಂತ್ರ ಅಭ್ಯರ್ಥಿಗಳು 4, ಐಎನ್‌ಎಲ್‌ಡಿ 1, ಬಿಎಸ್‌ಪಿ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿತ್ತು.
ಬೆಳಿಗ್ಗೆ ಮತ ಎಣಿಕೆ ಆರಂಭಗೊಂಡಾಗ ಹರಿಯಾಣದಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿತ್ತು. ಮ್ಯಾಜಿಕ್ ನಂಬರ್ ದಾಟಿ ಮುನ್ನುಗ್ಗಿತ್ತು. ಆದರೆ, ಈಗ ಟ್ರೆಂಡ್ ಬದಲಾಗಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.


