ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಎರಡೂ ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.
ಬೆಳಿಗ್ಗೆ 9.20ರ ಹೊತ್ತಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 45 ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿ ಮುನ್ನಡೆ ಸಾಧಿಸಿತ್ತು. ಬಿಜೆಪಿ 30 ಸ್ಥಾನಗಳಲ್ಲಿ, ಪಿಡಿಪಿ 7 ಹಾಗೂ ಇತರೆ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು.
ಜಮ್ಮು ಕಾಶ್ಮೀರದ ವಿಧಾನಭೆಯ 90 ಚುನಾಯಿತ ಸ್ಥಾನಗಳ ಪೈಕಿ ಬಹುಮತಕ್ಕೆ 46 ಸ್ಥಾನಗಳನ್ನು ಪಡೆಯಬೇಕಿದೆ.
ಹರಿಯಾಣದಲ್ಲಿ ಕಾಂಗ್ರೆಸ್ 50+ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 30, ಐಎನ್‌ಎಲ್‌ಡಿ ಪಕ್ಷ 3 ಮತ್ತು ಇತರೆ 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು.
ಹರಿಯಾಣ ವಿಧಾನಸಭೆಯ 90 ಸ್ಥಾನಗಳ ಪೈಕಿ ಬಹುಮತಕ್ಕೆ 46ಸ್ಥಾನಗಳ ಅಗತ್ಯವಿದೆ. ಪ್ರಸ್ತುತ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿ ಭಾರೀ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ : ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ


