Homeಮುಖಪುಟಚುನಾವಣಾ ಫಲಿತಾಂಶ; ಗುಜರಾತ್‌ನಲ್ಲಿ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ

ಚುನಾವಣಾ ಫಲಿತಾಂಶ; ಗುಜರಾತ್‌ನಲ್ಲಿ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಬಹುನಿರೀಕ್ಷಿತ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ. ಸದ್ಯದ ಮಾಹಿತಿಯ ಪ್ರಕಾರ ಗುಜರಾತ್‌ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಲ್ಪ ಮುನ್ನಡೆ ಕಾಯ್ದುಕೊಂಡಿದೆ.

ಗುಜರಾತ್

ಆರಂಭಿಕ ಮತ ಎಣಿಕೆಯ ಪ್ರಕಾರ ಬಿಜೆಪಿ 152 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಆಪ್ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಕಾಂಗ್ರೆಸ್ 77 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು.

ಹಿಮಾಚಲ ಪ್ರದೇಶ

ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಜೆಪಿ ಕೂಡ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ತುರುಸಿನ ಪೈಪೋಟಿ ನೀಡಿದೆ. ಆಪ್ ಯಾವ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಲು ಸಾಧ್ಯವಾಗಿಲ್ಲ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಲ್ಲಿ ಸರಳ ಬಹುಮತಕ್ಕೆ 35 ಸ್ಥಾನಗಳ ಅಗತ್ಯವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿತ್ತು. 21 ಸ್ಥಾನ ಪಡೆದ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿ ಕೂತಿತ್ತು.

ಇದನ್ನೂ ಓದಿ; ಎನ್‌ಡಿಟಿವಿ: ಬಂಡವಾಳಶಾಹಿ ಪಿತೂರಿಗೆ ಬಾಗಿದ ಬಿರುಗಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...