Homeಮುಖಪುಟಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

ಚುನಾವಣಾ ಸಮೀಕ್ಷೆಗಳು ನಿಜ ಹೇಳುತ್ತಿಲ್ಲ. ಇಲ್ಲಿದೆ ನೋಡಿ ಲೆಕ್ಕ. : ಒಂದು ವೀಡಿಯೋ ವಿಶ್ಲೇಷಣೆ

- Advertisement -
- Advertisement -
ಚುನಾವಣಾಪೂರ್ವ ಸಮೀಕ್ಷೆಗಳಿಗೆ ಇಂದು ಹೆಚ್ಚಿನ ಬೆಲೆಯೇ ಉಳಿದಿಲ್ಲ. ಅದರಲ್ಲೂ 1999ರ ನಂತರದ ಸಮೀಕ್ಷೆಗಳು ವಾಸ್ತವದಿಂದ ಹೆಚ್ಚೆಚ್ಚು ದೂರ ಸರಿಯುತ್ತಿವೆಯೆಂದು, ಅವುಗಳ ಅಧ್ಯಯನ ನಡೆಸಿದ ನೀಲಕಾಂತ ಮಿಶ್ರಾ & ಪ್ರತೀಕ್ ಸಿಂಗ್ ಎಂಬ ಇಬ್ಬರು ಯುವತಜ್ಞರು ಇತ್ತೀಚೆಗೆ ಲೇಖನಗಳನ್ನು ಬರೆದಿದ್ದಾರೆ.
ಇದರ ಬಗ್ಗೆ ಇಂದು ಏನಕ್ಕೆ ಮಾತಾಡಬೇಕಿದೆ, ಹೇಳ್ತೀನಿ – 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಬಂದಿರುವ ಸಮೀಕ್ಷೆಗಳಲ್ಲಿ ಯಾವುವೂ ಬಿಜೆಪಿಗೇ ಬಹುಮತ ಬರುತ್ತದೆ ಎಂದು ಹೇಳಿಲ್ಲ ಎಂತಾದರೂ, ದಿನೇ ದಿನೇ ಮೋದಿಯವರ ಪರವಾಗಿ ಅಭಿಪ್ರಾಯ ಉತ್ಪಾದಿಸುವ ಕೆಲಸವಂತೂ ಸಾಗುತ್ತಲೇ ಇದೆ. ಮೋದಿಯವರ ಪರವಾಗಿಯೇ ಜನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಗೋದಿ ಮೀಡಿಯಾ ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಒಂದು ಲೆಕ್ಕವನ್ನು ಮುಂದಿಡಲಾಗಿದೆ. ಅದೇನು ಹೇಳುತ್ತದೆಂದು ನೋಡೋಣ.
ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣ, ಕರ್ನಾಟಕ, ಒರಿಸ್ಸಾ ಮತ್ತು ಪ.ಬಂಗಾಳಗಳಲ್ಲಿ ಒಟ್ಟು 193 ಲೋಕಸಭಾ ಕ್ಷೇತ್ರಗಳಿವೆ. 2014ರಲ್ಲಿ ಮೋದಿ ಅಲೆ ಇತ್ತು, ಅದರ ಹೊರತಾಗಿಯೂ ಈ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದ್ದು 21 ಸೀಟುಗಳು, ಕೇವಲ 21. ಅದರಲ್ಲಿ 17 ಸೀಟುಗಳನ್ನು ಕರ್ನಾಟಕದಲ್ಲೇ ಪಡೆದುಕೊಂಡಿತ್ತು. ಕರ್ನಾಟಕದಲ್ಲಿ ಒಟ್ಟು ಶೇ.56ರಷ್ಟು ಮತಪ್ರಮಾಣ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗ ಮೈತ್ರಿ ಮಾಡಿಕೊಂಡಿವೆ. ತಮಿಳುನಾಡಿನಲ್ಲಿ ಅಣ್ಣಾ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಒಂದು ಸೀಟನ್ನೂ ಪಡೆದುಕೊಳ್ಳುವುದಿಲ್ಲ. ಏಕೆಂದರೆ ತಮಿಳುನಾಡಿನ ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ವಿಭಜನೆ ಆಗಿರುವುದಲ್ಲದೇ, ಆ ರಾಜ್ಯದ ಸಂಪ್ರದಾಯದಂತೆ ಈ ಬಾರಿ ಡಿಎಂಕೆಯ ಪರ ಸಂಪೂರ್ಣ ಜನಾದೇಶವಿರಲಿದೆ.

ಹಾಗಾಗಿ ಹೆಚ್ಚೆಂದರೆ, ಈ ರಾಜ್ಯಗಳಲ್ಲಿ ಈ ಸಾರಿ 15ರಿಂದ 20 ಸೀಟುಗಳನ್ನು ಗೆಲ್ಲಬಹುದು.
ಇನ್ನು ಉತ್ತರ ಪ್ರದೇಶ. 80 ಸೀಟುಗಳಿರುವ ಈ ರಾಜ್ಯದಲ್ಲಿ ಬಿಜೆಪಿಯು ಕಳೆದ ಸಾರಿ 71 ಸೀಟುಗಳನ್ನು ಗೆದ್ದಿತ್ತು. ಆ ಸಾರಿ ಎಲ್ಲಾ ಪಕ್ಷಗಳೂ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಈಗ ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಲೋಕದಳಗಳು ಮೈತ್ರಿ ಮಾಡಿಕೊಂಡಿದ್ದು ಅವುಗಳ ಒಟ್ಟು ಮತಪ್ರಮಾಣವು ಶೇ.44ರಷ್ಟಿದೆ. 2014ರ ಅಲೆಯಲ್ಲೇ ಬಿಜೆಪಿಯ ಮತಪ್ರಮಾಣ ಶೇ.42 ಆಗಿತ್ತು. ಈ ಸಾರಿ ಬಿಜೆಪಿಯು ಹೆಚ್ಚೆಂದರೆ 35 ಸೀಟು ಗೆಲ್ಲುವ ಸಾಧ್ಯತೆಯಿದೆ.
ಇನ್ನು ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡಗಳಲ್ಲಿ 65 ಕ್ಷೇತ್ರಗಳಿದ್ದು, ಅವುಗಳಲ್ಲಿ ಬರೀ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ಬಿಜೆಪಿಯೇ ಗೆದ್ದಿತ್ತು. ಈಗ ಮೂರೂ ಕಡೆ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 3 ತಿಂಗಳುಗಳಾಗಿವೆ. ಈಗಲೂ ಅರ್ಧಕ್ಕರ್ಧ ಬಿಜೆಪಿಯೇ ಗೆದ್ದರೂ 30 ಸೀಟುಗಳನ್ನು ಮಾತ್ರ ಗೆಲ್ಲಬಹುದು.
ಅಂದರೆ 11 ರಾಜ್ಯಗಳ 338 ಕ್ಷೇತ್ರಗಳ ಪೈಕಿ ಮೋದಿಯವರ ಪಕ್ಷವು 85 ಸೀಟುಗಳನ್ನು ಗೆಲ್ಲಬಹುದು. ಇನ್ನುಳಿದ ಕ್ಷೇತ್ರಗಳು ಎಷ್ಟು? 205. ಈ 205 ಕ್ಷೇತ್ರಗಳಲ್ಲಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಮಾತ್ರ ಬಿಜೆಪಿಗೆ ಬಹುಮತ ಬರುತ್ತದೆ. ಅಂದರೆ ಶೇ.90ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು. ಸಮಬಲದ ಹೋರಾಟವಿರುವ ಬಿಹಾರ, ಜಾರ್ಖಂಡ್, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶೇ.90 ಅಸಾಧ್ಯವೇ ಸರಿ. ಒಂದು ವೇಳೆ ಕರ್ನಾಟಕದಲ್ಲಿ 10 ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ 10 ಸೀಟುಗಳು ಕಡಿಮೆಯಾದರೆ, ಇವೆಲ್ಲಾ ರಾಜ್ಯಗಳಲ್ಲಿ ಬಿಜೆಪಿಯು ಶೇ.100ರಷ್ಟು ಕ್ಷೇತ್ರಗಳಲ್ಲಿ ಗೆಲ್ಲಬೇಕಾಗುತ್ತದೆ.
ಇದು ಸಾಧ್ಯವಿಲ್ಲವೆಂದು ಗೊತ್ತಿರುವುದರಿಂದಲೇ ಮೋದಿ, ಅಮಿತ್‍ಷಾ, ಪರಿವಾರ ಮತ್ತು ಅವರ ಪರವಾದ ಮಾಧ್ಯಮಗಳು ಮೋದಿಯ ಜನಪ್ರಿಯತೆಯು ಇಂಚಿಂಚಾಗಿ ಹೆಚ್ಚುತ್ತಿದೆಯೆಂದು ತೋರಿಸುವ ಸಮೀಕ್ಷೆಗಳನ್ನು ಉತ್ಪಾದಿಸುತ್ತಿದ್ದಾರೆ. ಜೊತೆಗೆ ಸುಳ್ಳುಗಳ ಉತ್ಪಾದನೆಯನ್ನೂ ವಿಪರೀತ ಹೆಚ್ಚಿಸಿದ್ದಾರೆ. ಆ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುವ ಕೆಲಸ ನಡೆಯುತ್ತಿದೆ. ಮತದಾರರು ಏನು ನಿಶ್ಚಯ ಮಾಡುತ್ತಾರೆಂಬುದು ಮೇ 23ರಂದು ಗೊತ್ತಾಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...