Homeಕರ್ನಾಟಕಚುನಾವಣೆ ಮುಗಿದಿದೆ, ಕೇಂದ್ರದ ಭಾರತ್‌ ಅಕ್ಕಿಯೂ ನಿಂತಿದೆ: ಸಿಎಂ ಸಿದ್ದರಾಮಯ್ಯ

ಚುನಾವಣೆ ಮುಗಿದಿದೆ, ಕೇಂದ್ರದ ಭಾರತ್‌ ಅಕ್ಕಿಯೂ ನಿಂತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಭಾರತ್‌ ಅಕ್ಕಿಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಸೆಳೆಯಲು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈಗ ಚುನಾವಣೆ ಮುಗಿದಿದೆ, ಭಾರತ್‌ ಅಕ್ಕಿಯೂ ನಿಂತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿ.ಡಾ.ಬಾಬು ಜಗಜೀವನ್‍ರಾಮ್ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

“ನಮ್ಮ ಸರ್ಕಾರ ರಚನೆಯಾದ ಮೇಲಂತೂ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡುವುದು ನಿಲ್ಲಿಸಿದೆ. ಅದು ರಾಜಕೀಯ ದುರುದ್ದೇಶದಿಂದ ಎಂಬುವುದು ಸ್ಪಷ್ಟ. ಅಕ್ಕಿ ಇಲ್ಲದೇ ಇದ್ದರೆ ಪರವಾಗಿಲ್ಲ. ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ನಮಗೆ ಅಕ್ಕಿ ಕೊಡಲಿಲ್ಲ. ಹೀಗಾಗಿ ನಾವು ಹಣ ನೀಡಬೇಕಾಯಿತು” ಎಂದರು.

“ಬಾಬು ಜಗಜೀವನ್‍ರಾಮ್ ಅವರನ್ನು ಇಡೀ ದೇಶ ಸ್ಮರಿಸುತ್ತದೆ. ಅವರ ಸಾಧನೆಯ ಹೆಜ್ಜೆಗಳನ್ನು ಸ್ಮರಿಸುವ ದಿನ ಇವತ್ತು. 40 ವರ್ಷಗಳ ಕಾಲ ರಾಷ್ಟ್ರ ರಾಜಕಾರಣಲ್ಲಿ ಇದ್ದು ಮಹತ್ತರ ಸಾಧನೆ ಮಾಡಿ ಹೋಗಿದ್ದಾರೆ” ಎಂದು ಹೇಳಿದರು.

“ದೇಶದಲ್ಲಿ ಆಹಾರ ಭದ್ರತೆ ಒದಗಿಸಿಕೊಟ್ಟವರಲ್ಲಿ ಬಾಬು ಜಗಜೀವನ್‍ರಾಮ್ ಪ್ರಮುಖರು. ರಕ್ಷಣಾ ಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ. ಕಾರ್ಮಿಕರಿಗೆ ಒಳ್ಳೆಯ ಕಾನೂನುಗಳನ್ನು ರಚನೆ ಮಾಡಿದ್ದಾರೆ. ಕಾರ್ಮಿಕ, ದಲಿತ, ರೈತರ ಪರವಾಗಿ ಸದಾ ಮಿಡಿಯುತ್ತಿದ್ದರು. ಅವರ ದಾರಿಯಲ್ಲೇ ನಮ್ಮ ಸರ್ಕಾರ ನಡೆಯಲಿದೆ” ಎಂದು ಹೇಳಿದರು.

ಇದನ್ನೂ ಓದಿ : ಶಾಸಕ ಹರೀಶ್ ಪೂಂಜಾ ವಿರುದ್ದದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

0
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯು ಇಂದು ಪರಿಷ್ಕೃತ ನೀಟ್ ಯುಜಿ 2024 ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ ಎಂಬ ಊಹಾಪೋಹದ ನಂತರ, ಆರಂಭದಲ್ಲಿ ನೀಡಲಾದ ಪರಿಹಾರದ ಅಂಕಗಳನ್ನು ಹಿಂತೆಗೆದುಕೊಳ್ಳುವ ಸುಪ್ರೀಂ ಕೋರ್ಟ್ ತೀರ್ಪಿನ ನಂತರ,...