Homeಮುಖಪುಟರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

- Advertisement -
- Advertisement -

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರದ 7, ತಮಿಳುನಾಡಿನ 6, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ತಲಾ 5, ಒಡಿಶಾದ 4, ಅಸ್ಸಾಂನ 3, ಛತ್ತೀಸ್‌ಗಢ, ಹರಿಯಾಣ ಮತ್ತು ತೆಲಂಗಾಣದ ತಲಾ 2 ಮತ್ತು ಹಿಮಾಚಲ ಪ್ರದೇಶದ 1 ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ.

ಕೆಲ ರಾಜ್ಯಗಳಲ್ಲಿ ಮತದಾನ ಅಗತ್ಯವಿದ್ದರೂ, ಏಳು ರಾಜ್ಯಗಳ 26 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದೇ ಮತ ಎಣಿಕೆ ನಡೆಯಲಿದೆ.

ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ಮತದಾನ ಅಗತ್ಯವಾಗಿದ್ದು, ಅಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ಸಕ್ರಿಯವಾಗಿ ಸಜ್ಜುಗೊಳಿಸಿವೆ. ಈ ರಾಜ್ಯಗಳು ಒಟ್ಟಾಗಿ 11 ಸ್ಥಾನಗಳನ್ನು ಹೊಂದಿವೆ.

ಈ ಚುನಾವಣೆ ರಾಜಕೀಯ ಚಟುವಟಿಕೆಗಳನ್ನು ಗರಿಗೇರಿಸಿದ್ದು, ಪಕ್ಷಗಳು ವಿಪ್ ಜಾರಿ ಮಾಡುವ ಮೂಲಕ ಅಡ್ಡ ಮತದಾನವನ್ನು ತಡೆಯಲು ಶಾಸಕರನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಬಿಹಾರದಲ್ಲಿ ಎನ್‌ಡಿಎ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದೆ. ಸಿಎಂ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಉಪೇಂದ್ರ ಕುಶ್ವಾಹ ರಾಮ್ ನಾಥ್ ಠಾಕೂರ್ ಶಿವೇಶ್ ಕುಮಾರ್ ಕಣದಲ್ಲಿದ್ದಾರೆ.

ವಿರೋಧ ಪಕ್ಷವಾದ ಆರ್‌ಜೆಡಿ ತೇಜಸ್ವಿ ಯಾದವ್ ಅವರ ಬೆಂಬಲವನ್ನು ನಂಬಿದ್ದು, ಅವರು ಎಐಎಂಐಎಂ ಮತ್ತು ಇತರ ಪಕ್ಷಗಳಿಂದ ಬೆಂಬಲ ಕೋರಿದ್ದಾರೆ.

ಒಡಿಶಾದಲ್ಲಿ ರಾಜ್ಯಸಭಾ ಚುನಾವಣೆ ತೀವ್ರ ರಾಜಕೀಯ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅವರು ಖಾಲಿ ಚೆಕ್‌ನೊಂದಿಗೆ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಇದೇ ಸಮಯದಲ್ಲಿ, ಬಿಜೆಪಿ ತನ್ನ ಶಾಸಕರನ್ನು ರಾಜ್ಯಸಭಾ ಮತದಾನ ಕಾರ್ಯವಿಧಾನದ ತರಬೇತಿ ನೆಪವೊಡ್ಡಿ ಪಾರಾದೀಪ್‌ಗೆ ಸ್ಥಳಾಂತರಿಸಿದೆ.

ಈ ನಡುವೆ, ಮಾಜಿ ಸಿಎಂ ನವೀನ್ ಪಟ್ನಾಯಕ್ ಪಕ್ಷದ ಶಾಸಕರನ್ನು ಭೇಟಿ ಮಾಡಿ ಅಡ್ಡ ಮತದಾನ ಮಾಡದಂತೆ ಮನವಿ ಮಾಡಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ಶಿಮ್ಲಾ ಬಳಿಯ ರೆಸಾರ್ಟ್‌ಗಳಿಂದ ಕಸೌಲಿಗೆ ಬಿಗಿ ಭದ್ರತೆಯ ನಡುವೆ ಸ್ಥಳಾಂತರಿಸಿದೆ. ಸಂಜಯ್ ಭಾಟಿಯಾ, ಕರಮ್ವೀರ್ ಸಿಂಗ್ ಬೌಧ್ ಮತ್ತು ಸತೀಶ್ ನಂದಲ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಮೇಲ್ಮನೆಯಲ್ಲಿ ಸ್ಥಾನ ಪಡೆಯಲು ಪ್ರತಿ ಅಭ್ಯರ್ಥಿಗೆ ಶಾಸಕರ 31 ಮತಗಳು ಬೇಕಾಗುತ್ತವೆ.

ಮಹಾರಾಷ್ಟ್ರದ 7, ತಮಿಳುನಾಡಿನ 6, ತೆಲಂಗಾಣದ 2, ಛತ್ತೀಸ್‌ಗಢದ 2, ಅಸ್ಸಾಂನ 3 ಮತ್ತು ಹಿಮಾಚಲ ಪ್ರದೇಶದ ಒಬ್ಬರು ಅಭ್ಯರ್ಥಿ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧಿಕೃತವಾಗಿ ಮಾತ್ರ ಫಲಿತಾಂಶ ಪ್ರಕಟಗೊಳ್ಳಬೇಕಿದೆ.

ತೆಲಂಗಾಣದ ಅಭಿಷೇಕ್ ಮನು ಸಿಂಘ್ವಿ ಮತ್ತು ತಮಿಳುನಾಡಿನ ಅನ್ಬುಮಣಿ ರಾಮದಾಸ್ ಅವರು ಅವಿರೋಧವಾಗಿ ಆಯ್ಕೆಯಾದ ಪ್ರಮುಖ ಅಭ್ಯರ್ಥಿಗಳು.

ಇಂದು ಮತದಾನ ನಡೆಯುತ್ತಿರುವ ಆರು ರಾಜ್ಯಗಳಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಎನ್‌ಡಿಎ, 234 ಸದಸ್ಯ ಬಲದ ರಾಜ್ಯಸಭೆಯಲ್ಲಿ 134 ಸ್ಥಾನಗಳನ್ನು ಹೊಂದಿದ್ದು, ತನ್ನ ಬಲವನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಿದೆ.

ಚುನಾವಣೆಯ ನಡೆಯುತ್ತಿರುವ ನಾಲ್ಕು ರಾಜ್ಯಗಳನ್ನು ಆಳುತ್ತಿರುವ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ, ಪ್ರಸ್ತುತ ಮೇಲ್ಮನೆಯಲ್ಲಿ 80 ಸ್ಥಾನಗಳನ್ನು ಹೊಂದಿದೆ.

ಆದ್ದರಿಂದ, ಈ ಚುನಾವಣೆಯ ಫಲಿತಾಂಶ ಮುಂಬರುವ ತಿಂಗಳುಗಳಲ್ಲಿ ರಾಜ್ಯಸಭೆಯಲ್ಲಿ ಅಧಿಕಾರದ ಸಮತೋಲನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...