Homeಮುಖಪುಟಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

ಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯು 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಅಭ್ಯರ್ಥಿಗಳೆನಿಸಿಕೊಂಡಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಇಂದಿನ ಚುನಾವಣೆಯಲ್ಲಿ ಸ್ಪರ್ಧಿಸಿವೆ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ ಚುನಾವಣೆ

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಎರಡು ರಾಜ್ಯಗಳೊಂದಿಗೆ ತ್ರಿಪುರ ಸೇರಿ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಜಾತಿ, ಧರ್ಮದ ಕುರಿತ ಸಂಶೋಧನೆ ಸೂಕ್ಷ್ಮವಾದುದು: ಇಂಗ್ಲೆಂಡ್ ಮಾನವಶಾಸ್ತ್ರಜ್ಞರ ಗಡೀಪಾರು ಸಮರ್ಥಿಸಿಕೊಂಡ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...