Homeಮುಖಪುಟಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

ಮುಗಿದ ಚುನಾವಣೆಗಳು: ಏರುತ್ತಿರುವ ಪೆಟ್ರೋಲ್-ಡೀಸೆಲ್ ದರಗಳು!

- Advertisement -
- Advertisement -

ಹಲವು ರಾಜ್ಯಗಳ ಚುನಾವಣೆಯ ಕಾರಣದಿಂದ ಸ್ಥಿರವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ ನಾಲ್ಕನೇ ದಿನಕ್ಕೆ ಏರಿಸಲಾಗಿದ್ದು, 2021 ರ ಮೇ 7 ರ ಶುಕ್ರವಾರದಂದು ದೇಶಾದ್ಯಂತ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ದೇಶದ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 28 ಪೈಸೆ ಏರಿಕೆಯಾದರೆ ಡೀಸೆಲ್ ದರ 31 ಪೈಸೆ ಏರಿಕೆಯಾಗಿದೆ.

ಈ ತಿಂಗಳ ಇತ್ತೀಚಿನ ಹೆಚ್ಚಳವು ಮಾರ್ಚ್ 24 ಮತ್ತು ಏಪ್ರಿಲ್ 15 ರ ನಡುವಿನ ನಾಲ್ಕು ಪರಿಷ್ಕರಣೆಗಳ ಅವಧಿಯಲ್ಲಿ ಬಂದ ಎಲ್ಲಾ ಇಂಧನ ದರಗಳ ಕಡಿತವನ್ನು ಅಳಿಸಿಹಾಕಿದೆ. ಕಳೆದ ನಾಲ್ಕು ದಿನಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87 ಪೈಸೆ ಹೆಚ್ಚಾಗಿದೆ ಮತ್ತು ಡೀಸೆಲ್ ದರ ಒಂದು ರೂಪಾಯಿ ಏರಿಕೆಯಾಗಿದೆ.

ಜನವರಿ-ಫೆಬ್ರವರಿ ಅವಧಿಯಲ್ಲಿ ಇಂಧನ ಬೆಲೆಗಳು ನಾಗಾಲೋಟದಲ್ಲಿ ಇದ್ದವು. ಈ ಮೊದಲು ಫೆಬ್ರವರಿ 27 ರಂದು ತಮ್ಮ ಹಿಂದಿನ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು. ನಂತರ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಮಾರ್ಚ್ 24 ರಿಂದ 24 ದಿನಗಳ ಕಾಲ ಇಂಧನ ದರ ಪರಿಷ್ಕರಣೆ ಮಾಡಲಿಲ್ಲ. (ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿತ್ತು. ಚುನಾವಣೆಯ ನಂತರ ಮತ್ತೆ ತೀವ್ರ ದರ ಏರಿಕೆ ಆಗಲಿದೆ ಎಂದು ನಾನುಗೌರಿ.ಕಾಂ ವರದಿ ಮಾಡಿತ್ತು)

ಮೇ 4 ರಂದು ಏರಿಕೆಯಾಗುವವರೆಗೂ ಬೆಲೆಗಳು 18 ದಿನಗಳವರೆಗೆ ಸ್ಥಿರವಾಗಿದ್ದವು. ಇತ್ತೀಚಿನ ಬೆಲೆ ಪರಿಷ್ಕರಣೆಯ ನಂತರ, ದೆಹಲಿಯಲ್ಲಿ ಪೆಟ್ರೋಲ್ ಈಗ ಲೀಟರ್ 91.27 ರೂ.ಗೆ ಮಾರಾಟವಾಗಿದ್ದರೆ, ಡೀಸೆಲ್ 81.73 ರೂ.ಗೆ ಮಾರಾಟವಾಗುತ್ತಿದೆ. ಹಣಕಾಸು ರಾಜಧಾನಿ ಮುಂಬಯಿಯಲ್ಲಿ, ಪೆಟ್ರೋಲ್ ಬೆಲೆ ಈಗ 97.61 ರೂ., ಡೀಸೆಲ್ ಬೆಲೆ 88.82 ರೂ..
ಫೆಬ್ರವರಿ ತಿಂಗಳಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಎರಡು ಸ್ಥಳಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿತ್ತು.

ಸ್ಥಳೀಯ ತೆರಿಗೆ (ವ್ಯಾಟ್) ಮತ್ತು ಸರಕು ಸಾಗಣೆ ಶುಲ್ಕವನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತದೆ ಮತ್ತು ನಂತರದ ಸ್ಥಾನದಲ್ಲಿ ಮಧ್ಯಪ್ರದೇಶವಿದೆ.

ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇಕಡಾ 60 ಮತ್ತು ಡೀಸೆಲ್‌ನ ಶೇಕಡಾ 54 ಕ್ಕಿಂತ ಹೆಚ್ಚು ಪ್ರಮಾಣದ ತೆರಿಗೆ ವಿಧಿಸುತ್ತಿವೆ. ಕೇಂದ್ರವು ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 32.90 ರೂ. ಮತ್ತು ಡೀಸೆಲ್‌ಗೆ 31.80 ರೂ. ಅಬಕಾರಿ ಸುಂಕ ಹೇರುತ್ತಿದೆ.
ಸಾಮಾನ್ಯವಾಗಿ, ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ.

ಸಾಂಕ್ರಾಮಿಕದ ಬಿಕ್ಕಟ್ಟಿನ ವೇಳೆ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಇನ್ನಷ್ಟು ಹೊರೆ ಹಾಕುತ್ತಿವೆ. ಚುನಾವಣಾ ಸಂದರ್ಭ ದಲ್ಲಿ ಸ್ಥಿರವಾಗಿದ್ದ ಇಂಧನ ದರಗಳು ಈಗ ಮರಳಿ ಏರುಮುಖದಲ್ಲಿವೆ.


ಇದನ್ನೂ ಓದಿ: ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...