Homeಮುಖಪುಟಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

ಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

- Advertisement -
- Advertisement -

ಕೇಂದ್ರದ ಆಡಳಿತರೂಢ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಚುನಾವಣಾ ಬಾಂಡ್‌ ಮೂಲಕ 6,060 ಕೋಟಿ ರೂಪಾಯಿ ಪಡೆದಿರುವ ಕುರಿತು ವಿಶೇಷ ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಒತ್ತಾಯಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಯಂತಹ ಕೇಂದ್ರೀಯ ಸಂಸ್ಥೆಗಳ ದಾಳಿ ಎದುರಿಸಿದ ಬೆನ್ನಲ್ಲೇ ಹಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದಿರುವುದನ್ನು ಪ್ರಸ್ತಾಪಿಸಿದರು. ಬಿಜೆಪಿ ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆದಿದ್ದರೂ, ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

‘ನಾ ಖಾವೂಂಗ ನಾ ಖಾನೆ ದೂಂಗಾ’ (ತಿನ್ನುವುದಿಲ್ಲ, ಇತರರನ್ನು ತಿನ್ನಲು ಬಿಡುವುದಿಲ್ಲ)’ ಎಂದು ಪ್ರಧಾನಿ ಹೇಳುತ್ತಾರೆ. ಆದರೆ, ಇಂದು ಬಿಜೆಪಿ ಚುನಾವಣಾ ಬಾಂಡ್‌ಗಳಿಂದ ಹಣ ಗಳಿಸಿದೆ ಎಂಬುವುದನ್ನು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದೆ. ಎಸ್‌ಬಿಐ ಅಂಕಿ ಅಂಶಗಳು ಬಿಜೆಪಿಗೆ 50ರಷ್ಟು ಮತ್ತು ಕಾಂಗ್ರೆಸ್‌ಗೆ ಶೇ.11ರಷ್ಟು ದೇಣಿಗೆ ಬಂದಿರುವುದಾಗಿ” ತೋರಿಸಿದೆ ಎಂದಿದ್ದಾರೆ.

“ನಮ್ಮ ಮತದಾರರ ಸಂಖ್ಯೆ ಶೇಕಡಾವಾರು ನೋಡಿದರೆ ಸುಮಾರು ಮೂರನೇ ಒಂದು ಭಾಗ ಇದೆ. ಉಳಿದ ಜನರು ಬಿಜೆಪಿ ಸೇರಿದಂತೆ ಮೂರನೇ ಎರಡರಷ್ಟು ಇದ್ದಾರೆ. ಆದರೆ, ಬಿಜೆಪಿಯವರು ದೇಣಿಗೆಯಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪಡೆದಿದ್ದಾರೆ. ಅವರು ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಬಂಡವಾಳಶಾಹಿಗಳು ಅಥವಾ ಇತರ ಕಂಪನಿಗಳು ಈ ರೀತಿ ದೇಣಿಗೆ ನೀಡಬಹುದೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ದೇಣಿಗೆ ನೀಡಿದ ಕೆಲವೊಂದು ಕಂಪನಿಗಳು ಸಂಶಯಾಸ್ಪದವಾಗಿವೆ. ಅವರು ಯಾರು ಎಂದು ಗೊತ್ತಿಲ್ಲ. ಒಂದೋ ಅವರು ಇಡಿ, ಐಟಿ ಇಲಾಖೆಯ ಬೆದರಿಕೆಗೆ ಮಣಿದವರು ಆಗಿರಬಹುದು. ಮೋದಿ ಸರ್ಕಾರ ನಮ್ಮ ಪಕ್ಷಕ್ಕೆ ದೇಣಿಗೆ ನೀಡುವಂತೆ ಬೆದರಿಕೆ ಹಾಕಿರಬಹುದು. ಇಲ್ಲದಿದ್ದರೆ ಬಿಜೆಪಿ ಇಷ್ಟೊಂದು ಹಣ ಪಡೆಯಲು ಹೇಗೆ ಸಾಧ್ಯ? ಎಂದು ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ನೀವು (ಬಿಜೆಪಿ) ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದೀರಿ. ಆದರೆ ಕಾಂಗ್ರೆಸ್ ಕಾರ್ಯಕರ್ತರು, ಸಂಸದರು ಮತ್ತು ಇತರ ಸಣ್ಣ ದಾನಿಗಳಿಂದ ದೇಣಿಗೆ ಪಡೆದರೆ, ನಮ್ಮ ಖಾತೆಗಳನ್ನೇ ಸ್ಥಗಿತಗೊಳಿಸಿದ್ದೀರಿ. ನೀವು 6,000 ಕೋಟಿ ರೂ.ಪಡೆದಿದ್ದೀರಿ. ನಮ್ಮ ಖಾತೆಗಳು ಸ್ಥಗಿತಗೊಂಡಿವೆ. ನಾವು ಹೇಗೆ ಚುನಾವಣೆ ಎದುರಿಸುವುದು? ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸಿದರೆ, ಅವರು ಚುನಾವಣೆಗೆ ಸ್ಪರ್ಧಿಸುವುದು ಹೇಗೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌ಬಿಐ: ಮತ್ತೆ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...