Homeಮುಖಪುಟಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

ಬಿಜೆಪಿಯ ಕಪಿಲ್ ಮಿಶ್ರಾರ ಕೋಮುವಾದಿ ಟ್ವೀಟ್ ಡಿಲೀಟ್‌ ಮಾಡಿ: ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಸೂಚನೆ

- Advertisement -
- Advertisement -

ದೆಹಲಿ ಚುನಾವಣೆಯ ಅಭ್ಯರ್ಥಿಯಾಗಿರುವ ಬಿಜೆಪಿಯ ಕಪಿಲ್ ಮಿಶ್ರಾ ಅವರು ತಮ್ಮ ಟ್ವೀಟ್ ಮೂಲಕ ಮತದಾನವನ್ನು ಭಾರತ ವಿರುದ್ಧ ಪಾಕಿಸ್ತಾನದ ಯುದ್ದಕ್ಕೆ ಹೋಲಿಸಿದನ್ನು ಚುನಾವಣಾ ಸಂಸ್ಥೆಯು ಕಟು ಶಬ್ದಗಳಲ್ಲಿ ಖಂಡಿಸಿದೆ.

ಕಪಿಲ್ ಮಿಶ್ರಾ ಅವರ ಕೋಮುವಾದಿ ಟ್ವೀಟ್ ಅನ್ನು ಡಿಲೀಟ್‌ ಮಾಡಿ ಎಂದು ಟ್ವಿಟ್ಟರ್‌ಗೆ ಚುನಾವಣಾ ಸಂಸ್ಥೆ ಮನವಿ ಮಾಡಿದೆ.

 

ಇತ್ತೀಚಿಗೆ ಹಲವು ಕೋಮು ಮತ್ತು ಪ್ರಚೋದನಾಕಾರಿ ಟ್ವೀಟ್‌ಗಳನ್ನು ಮಾಡುತ್ತಿರುವ ಕಪಿಲ್ ಮಿಶ್ರಾ ಅವರು ನಿನ್ನೆ “ಭಾರತ ವಿರುದ್ಧ ಪಾಕಿಸ್ತಾನ, ಫೆಬ್ರವರಿ 8, ದೆಹಲಿ. ಭಾರತ ಮತ್ತು ಪಾಕಿಸ್ತಾನ ದೆಹಲಿಯ ಬೀದಿಗಳಲ್ಲಿ ಸ್ಪರ್ಧಿಸಲಿವೆ.” ಎಂದು ಪೋಸ್ಟ್ ಮಾಡಿದ್ದರು

ಮಿಶ್ರಾ ಅವರ ಟ್ವೀಟ್ ಅನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟ್ಟರ್ ಗೆ ಪತ್ರ ಬರೆದಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅದು ಹೇಳಿದೆ.

ಕಪಿಲ್ ಮಿಶ್ರಾ ಅವರ ಟೀಕೆಗಳು “ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವುದು ಅಥವಾ ಪರಸ್ಪರ ದ್ವೇಷವನ್ನು ಉಂಟುಮಾಡುವುದು ಅಥವಾ ವಿವಿಧ ಸಮುದಾಯಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡುತ್ತವೆ” ಇದು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಟ್ವೀಟ್ ಕುರಿತು ವರದಿಯನ್ನು 24 ಗಂಟೆಗಳ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ದೆಹಲಿ ಚುನಾವಣಾ ಕಚೇರಿಗೆ ಸೂಚಿಸಲಾಗಿದೆ.

ಟ್ವೀಟ್ ಬಗ್ಗೆ ಕಪಿಲ್‌ ಮಿಶ್ರಾ “ದೆಹಲಿಯ ಅನೇಕ ಸ್ಥಳಗಳಲ್ಲಿ ಮಿನಿ ಪಾಕಿಸ್ತಾನಿಗಳನ್ನು ರಚಿಸಲಾಗಿದೆ. ಶಾಹೀನ್ ಬಾಗ್ ಅನ್ನು ವಿವಿಧ ಸ್ಥಳಗಳಲ್ಲಿ ಪುನರಾವರ್ತಿಸಲಾಗುತ್ತಿದೆ. ಇಂದರ್ ಲೋಕ್, ಚಂದ್ ಬಾಗ್ ಮುಂತಾದ ಇತರ ಸ್ಥಳಗಳು ಸಹ ಮಿನಿ ಪಾಕಿಸ್ತಾನ ಆಗಿವೆ. ರಸ್ತೆ ತಡೆ ಮಾಡುವ ಮೂಲಕ ಹಲವು ಪ್ರದೇಶಗಳು ಮತ್ತು ಶಾಲೆಗಳು ಇತ್ಯಾದಿಗಳನ್ನು ನಿರ್ಬಂಧಿಸುವ ಮೂಲಕ ಪ್ರತಿಭಟನಾಕಾರರು ಸಾಮಾನ್ಯ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಎಂದು ಹೇಳಿದ್ದಾರೆ.

ತಮಗೆ ಬಂದ ನೋಟಿಸ್ ಕುರಿತು ಮಾತನಾಡಿದ ಕಪಿಲ್‌ ಮಿಶ್ರಾ “ನಾನು ಇಂದು ನನ್ನ ಉತ್ತರವನ್ನು ನೀಡುತ್ತೇನೆ. ನಾನು ಏನೂ ತಪ್ಪು ಹೇಳಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಸತ್ಯವನ್ನು ಮಾತನಾಡುವುದು ಈ ದೇಶದಲ್ಲಿ ಅಪರಾಧವಲ್ಲ. ನಾನು ಸತ್ಯವನ್ನು ಮಾತನಾಡಿದ್ದೇನೆ. ನನ್ನ ಹೇಳಿಕೆಗೆ ನಾನು ನಿಲ್ಲುತ್ತೇನೆ” ಎಂದಿದ್ದಾರೆ.

ಮಿಶ್ರಾ ಅವರ ನಾಮಪತ್ರವನ್ನು ರದ್ದುಗೊಳಿಸುವಂತೆ ಎಎಪಿ ಮುಖ್ಯ ಚುನಾವಣಾ ಅಧಿಕಾರಿಗೆ ಕೇಳಿದೆ. ಸರ್ಕಾರಿ ವಸತಿ ಸೌಕರ್ಯವನ್ನು ಬಳಸುವವರಿಗೆ ನೀರು, ವಿದ್ಯುತ್ ಮತ್ತು ದೂರವಾಣಿ ವೆಚ್ಚಗಳ ಬಗ್ಗೆ ಯಾವುದೇ ಬಾಕಿ ಪ್ರಮಾಣಪತ್ರವನ್ನು ನೀಡುವ ನಿಯಮಗಳನ್ನು ಕಡ್ಡಾಯಗೊಳಿಸಿದೆ. ಆದರೆ ಮಿಶ್ರಾ ಅವರು ತಮ್ಮ ನಾಮಪತ್ರಗಳಲ್ಲಿ ಇದನ್ನು ಉಲ್ಲೇಖಿಸಿಲ್ಲ ಎಂದು ಆಪ್‌ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...