Homeಮುಖಪುಟಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

- Advertisement -
- Advertisement -

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ.

ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ ಮತ್ತು ಕೇರಳದ ಮುಖ್ಯ ಚುನಾವಣಾ ಅಧಿಕಾರಿಗಳು ಈ ವಾರದಲ್ಲಿ ಹಂಚಿಕೊಂಡ ದತ್ತಾಂಶದ ಪ್ರಕಾರ, ಕಳೆದ ವರ್ಷ ಅಕ್ಟೋಬರ್ 27ರಂದು ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಅವರ ಒಟ್ಟು ಮತದಾರರ ಸಂಖ್ಯೆ 21.45 ಕೋಟಿಗಿಂತ ಹೆಚ್ಚಿತ್ತು.

ಎಸ್‌ಐಆರ್‌ ನಡೆಸಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಅದು 19.75 ಕೋಟಿಗೆ ಇಳಿದಿದೆ. ಹಾಗಾಗಿ, 1.70 ಕೋಟಿಗೂ ಹೆಚ್ಚು ಮತದಾರರ ಸಂಖ್ಯೆ ಕಡಿಮೆಯಾಗಿದೆ.

ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ನಡೆಸಿದ್ದ ಚುನಾವಣಾ ಆಯೋಗ, ಎರಡನೇ ಹಂತದಲ್ಲಿ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳ ಸುಮಾರು 60 ಕೋಟಿ ಮತದಾರರನ್ನು ಒಳಗೊಂಡಂತೆ ಈ ಪ್ರಕ್ರಿಯೆ ಕೈಗೊಂಡಿದೆ.

ಈ ಪೈಕಿ ಫೆ.14ರಂದು ಗುಜರಾತ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಹಾಗೂ ಲಕ್ಷದ್ವೀಪದ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ಫೆ.21ರಂದು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಕೇರಳ, ಗೋವಾ ರಾಜ್ಯಗಳು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಈ ಮೂಲಕ 3 ಕೇಂದ್ರಾಡಳಿತ ಪ್ರದೇಶಗಳು ಮತ್ತು 7 ರಾಜ್ಯಗಳ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಂತಾಗಿದೆ.

ಇನ್ನು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಅಂತಿಮ ಮತದಾರರಪಟ್ಟಿ ಪ್ರಕಟಗೊಳ್ಳಬೇಕಿದೆ.

ದೇಶದ ಉಳಿದ 40 ಕೋಟಿ ಮತದಾರರು 17 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಳಗೊಳ್ಳಲಿದ್ದಾರೆ. ಅಸ್ಸಾಂನಲ್ಲಿ, ಎಸ್‌ಐಆರ್ ಬದಲಿಗೆ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ಪರಿಷ್ಕರಣೆ’ ಫೆಬ್ರವರಿ 10ರಂದು ಪೂರ್ಣಗೊಂಡಿದೆ.

ವಿವಿಧ ಕಾರಣಗಳಿಂದಾಗಿ, 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ವೇಳಾಪಟ್ಟಿಯಲ್ಲಿ ಆಗಾಗ್ಗೆ ಬದಲಾವಣೆಗಳನ್ನು ಮಾಡಲಾಗಿದೆ. ಬಿಹಾರದಂತೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ರಾಜಕೀಯ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...