Homeಕರ್ನಾಟಕಬೆಂಗಳೂರು: ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಗುಲಿ ಬಾಲಕಿ ಮೃತ್ಯು

ಬೆಂಗಳೂರು: ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಗುಲಿ ಬಾಲಕಿ ಮೃತ್ಯು

- Advertisement -
- Advertisement -

ವಿದ್ಯುತ್ ತಗುಲಿ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಲೇಕ್‌ಸೈಡ್‌ ಅಪಾರ್ಟ್​​ಮೆಂಟ್​ನಲ್ಲಿ ನಿನ್ನೆ (ಡಿ.28) ನಡೆದಿದೆ.

ಮಾನ್ಯ (10) ಮೃತ ಬಾಲಕಿ. ನಿನ್ನೆ ಸಂಜೆ 7:30ರ ಸುಮಾರಿಗೆ ಆಟವಾಡುತ್ತಿದ್ದಾಗ ವಿದ್ಯುತ್ ತಗುಲಿ ಬಾಲಕಿ ನಿತ್ರಾಣಗೊಂಡಿದ್ದಳು. ಇದನ್ನು ಕಂಡ ಸ್ಥಳೀಯರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದು ಬಂದಿದೆ.

ಬಾಲಕಿ ಮಾನ್ಯ ಇತರ ಮಕ್ಕಳೊಂದಿಗೆ ಅಪಾರ್ಟ್‌ಮೆಂಟ್‌ನ ಈಜುಕೊಳದ (ಸ್ವಿಮ್ಮಿಂಗ್ ಫೂಲ್) ಬಳಿ ಆಟವಾಡುತ್ತಿದ್ದಳು. ಈ ವೇಳೆ ಬಾಲ್ ಈಜುಕೊಳಕ್ಕೆ ಬಿದ್ದಿದೆ. ಅದನ್ನು ಹೆಕ್ಕಲು ಹೋದ ಆಕೆ ನೀರಿಗೆ ಕೈ ಹಾಕಿದ್ದಳು. ಈ ವೇಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತು. ಇದರಿಂದ ಆಕೆಯ ಪ್ರಾಣಪಕ್ಷಿ ಹಾರಿ ಹೋಗಿದೆ. ಈಜುಕೊಳದ ಒಳಗೆ ಅಳವಡಿಸಿದ್ದ ವಿದ್ಯುತ್ ದೀಪದಿಂದ ನೀರಿಗೆ ವಿದ್ಯುತ್ ಪ್ರವಹಿಸುತ್ತಿತ್ತು. ಆ ನೀರನ್ನು ಮುಟ್ಟಿದ ಬಾಲಕಿಗೆ ವಿದ್ಯುತ್ ತಗುಲಿದೆ ಎಂದು ಪತ್ರಕರ್ತೆ ನಬೀಲಾ ಜಮಾಲ್‌ ಎಕ್ಸ್‌ ಮೂಲಕ ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್ ನಿರ್ವಹಣೆಗೆ ಭಾರೀ ಮೊತ್ತ ವಸೂಲಿ ಮಾಡುತ್ತಿರುವ ಆಡಳಿತ ಮಂಡಳಿ, ಅಲ್ಲಿನ ನಿವಾಸಿಗಳು ಅವ್ಯವಸ್ಥೆಯ ಬಗ್ಗೆ ಪದೇ ಪದೇ ಹೇಳಿದ್ದರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಾಲಕಿ ಮೃತಪಟ್ಟಿರುವ ಹಿನ್ನೆಲೆ ಆಕ್ರೋಶಗೊಂಡಿದ್ದ ಅಪಾರ್ಟ್‌ಮೆಂಟ್ ನಿವಾಸಿಗಳು ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ನಬೀಲಾ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

0
ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ. ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ...