Homeಕರ್ನಾಟಕವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

ವಿದ್ಯುತ್ ಮಸೂದೆ 2021; ಕೃಷಿಗೆ ಮತ್ತು ವಿದ್ಯುತ್ ವಲಯದ ಕಾರ್ಮಿಕರಿಗೆ ಮಾರಕ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ರದ್ದು ಮಾಡುವುದಕ್ಕೆ, ವಿದ್ಯುತ್ ಮಸೂದೆ ವಾಪಸ್ಸಾತಿ ಹಾಗೂ ರೈತರ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಒಂಬತ್ತು ತಿಂಗಳಿಂದಲೂ ದೆಹಲಿ ಗಡಿಗಳಲ್ಲಿ ರೈತ ಹೋರಾಟ ನಡೆಯುತ್ತಿದ್ದರೂ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಒಕ್ಕೂಟ ಸರ್ಕಾರ ನಿರಾಕರಿಸುತ್ತಾ ನಡೆದಿದ್ದರೆ, ಕೇಂದ್ರ ರೈತ ಕಲ್ಯಾಣ ಮತ್ತು ಕೃಷಿ ಸಚಿವೆ ಶೋಭಾ ಕರಂದ್ಲಾಜೆರವರು ಸ್ವತಃ ಗದ್ದೆಗಿಳಿದು ನಾಟಿ ಕೆಲಸದಲ್ಲಿ ಭಾಗಿಯಾಗಿ ಮಾಧ್ಯಮಗಳಿಗೆ ಪೋಟೋ ಪೋಸ್ ನೀಡಿದ್ದಾರೆ.

ಆದರೆ ತಾವು ಭಾಗಿಯಾಗಿರುವ ಸಂಪುಟ ಅನುಮೋದನೆ ನೀಡಿರುವ ವಿದ್ಯುತ್ ಮಸೂದೆ 2021ರ ಬಗ್ಗೆ ಅಪ್ಪಿತಪ್ಪಿಯೂ ಮಾತಾಡಿಲ್ಲ. ಈಗಷ್ಟೇ ಮೊಟುಕುಗೊಂಡು ಮುಕ್ತಾಯವಾದ ಸಂಸತ್ತಿನಲ್ಲಿ ಮಂಡನೆಯಾಗದೇ ಈ ಮಸೂದೆ ಉಳಿದುಕೊಂಡಿದೆ! ಈ ವಿದ್ಯುತ್ ಮಸೂದೆಯನ್ನು ವಾಪಸ್ಸು ಪಡೆಯುವುದಾಗಿ ಪ್ರತಿಭಟನಾ ರೈತರಿಗೆ ಇದೇ ಕೇಂದ್ರ ಸರ್ಕಾರ ವಾಗ್ದಾನ ಮಾಡಿತ್ತು. ಈ ಮಾತನ್ನೂ ಸಹ ಉಳಿಸಿಕೊಳ್ಳಲಿಲ್ಲ.

ಈ ವಿದ್ಯುತ್ ಮಸೂದೆ 2021 ಸಂಸತ್ತಿನಲ್ಲಿ ಮಂಡನೆಯಾಗುವ ದಿನ ಇಡೀ ದೇಶದಾದ್ಯಂತ ವಿದ್ಯುತ್ ಕಾರ್ಮಿಕರು ಮುಷ್ಕರಕ್ಕೆ ತಯಾರಿ ನಡೆಸಿದ್ದರು. ದೇಶದೆಲ್ಲೆಡೆ ರೈತರ ಆಕ್ರೋಶ ಭುಗಿಲೇಳುವ ಸ್ಪಷ್ಟ ಸೂಚನೆಯಿಂದಾಗಿ ಈ ಮಸೂದೆ ಮಂಡನೆಯ ಮುಂದೂಡಲ್ಪಟ್ಟಿದೆ.

ಮೋದಿ ಸರ್ಕಾರ ಅಂಗೀಕರಿಸಿರುವ ಕೃಷಿ ಕಾಯ್ದೆಗಳಿಂದ ವಿದ್ಯುತ್ ಮಸೂದೆ 2021ಅನ್ನು ಬೇರ್ಪಡಿಸಿ ನೋಡಲು ಸಾಧ್ಯವಿಲ್ಲ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳು. ದೇಶದ ರೈತರಲ್ಲಿ ಶೇ.70ಕ್ಕೂ ಹೆಚ್ಚು ಇರುವ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರನ್ನು ಕೃಷಿ ರಂಗದಿಂದಲೇ ಒಕ್ಕಲೆಬ್ಬಿಸುವ ಉದ್ದೇಶದ ಕೃಷಿ ಕಾಯ್ದೆಗಳ ವೇಗವರ್ಧಕವಾಗಿ ಈ ಪ್ರಸ್ತಾಪಿತ ವಿದ್ಯುತ್ ಕಾಯ್ದೆ ಕೆಲಸ ಮಾಡಲಿದೆ.

ನವ ಉದಾರೀಕರಣ ಆರ್ಥಿಕ ನೀತಿಗಳು ಜಾರಿಗೆ ಬಂದನಂತರ ದೇಶದ ಪ್ರತಿಯೊಂದು ರಂಗವನ್ನು ಖಾಸಗಿ ಕಾರ್ಪೊರೆಟ್ ದೈತ್ಯರಿಗೆ ವಹಿಸಲು ಮತ್ತು ಅವರಿಗಷ್ಟೇ ಅನುಕೂಲ ಕಲ್ಪಿಸಲು ಕಾಯ್ದೆಗಳು ರೂಪುಗೊಂಡಿವೆ. ವಿದ್ಯುತ್ ರಂಗದ ಇಂತಹ ಒಂದು ಕಾಯ್ದೆಯಾಗಿ ವಿದ್ಯುತ್ ಕಾಯ್ದೆ 2003 ಜಾರಿಗೆ ಬಂತು. ಈ ಕಾಯ್ದೆಯ ಮುಂದಿನ ಅವತರಣಿಕೆಯೇ ವಿದ್ಯುತ್ ಮಸೂದೆ 2021 ಆಗಿದೆ.

ಹಲವಾರು ದಶಕಗಳಿಂದ ರಾಜ್ಯ ಸರ್ಕಾರಗಳಿಂದ ಸ್ಥಾಪಿಸಲ್ಪಟ್ಟು ಅವುಗಳ ಮಾಲೀಕತ್ವದಲ್ಲಿರುವ ವಿದ್ಯುಚ್ಛಕ್ತಿ ಸರಬರಾಜು ಜಾಲವನ್ನು ಖಾಸಗೀಕರಣಗೊಳಿಸುವುದೇ ಈ ಕಾಯ್ದೆಯ ಗುರಿಯಾಗಿದೆ. ಇದನ್ನು ಈ ಮಸೂದೆ ಬಹಳ ಸ್ಪಷ್ಟವಾಗಿ ಹೇಳುತ್ತಿದೆ.

ವಿದ್ಯುಚ್ಛಕ್ತಿಯು ಸಂವಿಧಾನದ ಸಮವರ್ತಿ ಪಟ್ಟಿಯಲ್ಲಿ ಇರುವುದನ್ನು ನಿರ್ಲಕ್ಷಿಸಿ, ಹಲವಾರು ವಿಷಯಗಳ ಮೇಲೆ ರಾಜ್ಯಕ್ಕೆ ಇರುವ ಹಕ್ಕುಗಳನ್ನು ಈ ಮಸೂದೆ ಸಂಪೂರ್ಣವಾಗಿ ನಿರಾಕರಿಸುತ್ತದೆ. ಆದರೆ ವಿದ್ಯುಚ್ಛಕ್ತಿ ದರ ಹೆಚ್ಚಳದ ಅಪಘಾತದಿಂದ ಜನತೆಯನ್ನು ಪಾರುಮಾಡಲು ಇರುವ ಸಬ್ಸಿಡಿಯನ್ನು ನೀಡಲು ಬೇಕಾದ ಹಣಕಾಸಿನ ಭಾರವನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ರಾಜ್ಯಗಳ ಮೇಲೆ ಹಾಕಿದೆ.

ರಾಜ್ಯ ನಿಗಮಗಳಿಗೆ ಅಧ್ಯಕ್ಷರನ್ನು ಮತ್ತು ಸದಸ್ಯರನ್ನು ನೇಮಕ ಮಾಡುವ ಅಧಿಕಾರವನ್ನು ಈ ಮಸೂದೆ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಇಂತಹ ಕ್ರೂರ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳ ಮೇಲೆ ದಬ್ಬಾಳಿಕೆ ನಡೆಸಲು ಅನುವು ಮಾಡಿಕೊಡುತ್ತದೆ. ಇದು ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಮಾಡುವ ಸರ್ವಾಧಿಕಾರದ ದಾಳಿಯಲ್ಲದೇ ಬೇರೇನಲ್ಲ.

ರಾಜ್ಯಗಳಿಗೆ ತಮ್ಮದೇ ಆದ ಅಭಿವೃದ್ಧಿ ಕಣ್ಣೋಟವನ್ನು ಯೋಜಿಸಲು, ಅಂದಾಜಿಸಲು ಹಾಗೂ ಜಾರಿ ಮಾಡಲು ಅಧಿಕಾರವಿದೆ. ಆದರೆ ಈ ಕಾಯ್ದೆ ಇಂತಹ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಇದರಿಂದ ಪೂರ್ತಿಯಾಗಿ ರಾಜ್ಯಗಳ ಅಧಿಕಾರ ನಾಶವಾಗಲಿದೆ. ಈ ಕಾಯ್ದೆ ಸಂಪೂರ್ಣವಾಗಿ ಸಂವಿಧಾನದ ಮೂಲಭೂತ ತತ್ವ ಫೆಡರಿಲಿಸಂಗೆ (ಒಕ್ಕೂಟ ವಾದ) ವಿರುದ್ಧವಾಗಿದೆ.

ಈ ಕಾಯ್ದೆಯು ವಿದ್ಯುತ್ ವ್ಯಾಪಾರದ ರಾಷ್ಟ್ರೀಯ ಗಡಿಗಳನ್ನು ಕೂಡ ತೆಗೆದುಹಾಕುತ್ತದೆ. ಅಂದರೆ ಖಾಸಗಿ ವಲಯವು ಮುಕ್ತವಾಗಿ ಯಾವುದೇ ಗಡಿಗಳ ಹಂಗಿಲ್ಲದೇ ಯಾವುದೇ ದೇಶಕ್ಕಾದರೂ ವಿದ್ಯುತ್ ಪೂರೈಸಬಹುದು. ಇದು ದೇಶದ ಭದ್ರತೆಗೆ ಭಾರೀ ಅಪಾಯವನ್ನು ತಂದೊಡ್ಡುವ ಕ್ರಮ ಕೂಡ ಆಗಬಲ್ಲದು.

ಈ ಕಾಯ್ದೆಯ ಕಾರಣದಿಂದ ವಿದ್ಯುತ್ ಬೇಡಿಕೆ ಹಾಗೂ ಪೂರೈಕೆಗಳ ನಡುವಿನ ಸಮನ್ವಯ ಹಾಗೂ ನಿಯಂತ್ರಣ ವ್ಯವಸ್ಥೆ ಸಂಪೂರ್ಣವಾಗಿ  ಧ್ವಂಸವಾಗುತ್ತದೆ. ಖಾಸಗಿ ಕಂಪನಿಗಳ ಲಾಭಕೋರತನ ಮತ್ತು ವ್ಯಾಪಕವಾದ ಭ್ರಷ್ಟಾಚಾರಕ್ಕೂ ದೊಡ್ಡ ಪ್ರಮಾಣದಲ್ಲಿ ಅವಕಾಶವನ್ನು ಮಾಡಿಕೊಡಲಿದೆ. ವಿದ್ಯುತ್ ರಂಗದಲ್ಲಿ ಖಾಸಗೀಕರಣಕ್ಕೆ ಅವಕಾಶ ಮಾಡಿಕೊಟ್ಟ ವಿದ್ಯುತ್ ಕಾಯ್ದೆ 2003ರ ನಂತರವೇ ವಿದ್ಯುತ್ ಖರೀದಿ ಹಗರಣಗಳು ನಡೆದಿರುವುದನ್ನು ನಾವು ಗಮನಿಸಬಹುದು.

ಉತ್ಪಾದನಾ ಸಾಮರ್ಥ್ಯವನ್ನು ದಕ್ಷವಾಗಿ, ಪರಿಸರ ಸ್ನೇಹಿಯಾಗಿ ಬಳಸಿಕೊಳ್ಳುವುದಕ್ಕೆ ಕೂಡ ಈ ಕಾಯ್ದೆ ಅಡ್ಡಿಯಾಗುತ್ತದೆ. ಖಾಸಗಿ ಕಂಪನಿಗಳಿಗೆ ಲಾಭ ಮಾತ್ರವೇ ಮುಖ್ಯವಾಗುವುದರಿಂದ ಈ ಕಾಯ್ದೆಯಿಂದ ಪರಿಸರ ನಾಶಕ್ಕೆ ಅತಿ ಹೆಚ್ಚಿನ ಉತ್ತೇಜನ ಸಿಗಲಿದೆ.

ವಿದ್ಯುತ್ ದರ ಏರಿಕೆಯ ಪ್ರಸ್ತಾಪಕ್ಕೆ ಸಾರ್ವಜನಿಕ ಅಹವಾಲು ಆಲಿಸಿ, ಪರಿಣಾಮಗಳನ್ನು ಅಂದಾಜಿಸುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಂತಹ (KERC) ನಿಯಂತ್ರಕ ವ್ಯವಸ್ಥೆ ರದ್ದಾಗಿ ಕೃಷಿಕರು, ನೇಕಾರರು, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಅಹವಾಲಿಗೆ ಈ ಕಾಯ್ದೆಯಿಂದ ಅವಕಾಶವೇ ಇರುವುದಿಲ್ಲ.

ಈ ಕಾಯ್ದೆಯಿಂದ ನಿಗಮಗಳ ನಡುವೆ ಅಂದರೆ ನಗರ ಪ್ರದೇಶದ ವಿದ್ಯುತ್ ನಿಗಮಗಳು ಹಾಗೂ ಗ್ರಾಮೀಣ ಪ್ರದೇಶದ ನಿಗಮಗಳ ನಡುವೆ ಇದ್ದ ಕ್ರಾಸ್ ಸಬ್ಸಿಡಿ ಮತ್ತು ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ರಾಹಕರುಗಳ ನಡುವೆ ಇದ್ದ ಕ್ರಾಸ್ ಸಬ್ಸಿಡಿಗಳು ರದ್ದಾಗಲಿವೆ. ಇದರಿಂದಾಗಿ ನಿರುದ್ಯೋಗ ಬಹಳಷ್ಟು ಹೆಚ್ಚಲಿದೆ. ನೀರಾವರಿ ಪಂಪ್‌ಸೆಟ್‌ಗಾಗಲಿ, ಕುಟೀರ ಜ್ಯೋತಿ-ಭಾಗ್ಯಜ್ಯೋತಿ ಬಳಕೆದಾರರಿಗಾಗಲಿ ರಿಯಾಯಿತಿ ವಿದ್ಯುತ್ ಸೌಲಭ್ಯ ವಿದ್ಯುತ್ ಕಂಪನಿಗಳಿಂದ ಸಿಗುವುದಿಲ್ಲ. ವಿದ್ಯುತ್ ವಿತರಣೆಯಲ್ಲಿ ಪ್ರಾಂಚೈಸಿಗಳು, ಗುತ್ತಿಗೆ, ಹೊರಗುತ್ತಿಗೆ, ಏಜೆಂಟ್-ದಲ್ಲಾಳಿಗಳ ವ್ಯವಸ್ಥೆ ಜಾರಿಗೆ ಈ ಕಾಯ್ದೆ ಅವಕಾಶ ಮಾಡಿ ಕೊಡಲಿದೆ.

ಚಿಲ್ಲರೆ ವಹಿವಾಟಿನ ಮೇಲೆ ನಿಯಂತ್ರಣ ಮತ್ತು ಏಕಸ್ವಾಮ್ಯ ಸಾಧಿಸಲು ಅಂಬಾನಿ ಕಾರ್ಪೊರೆಟ್ ಸಂಸ್ಥೆಯ ಹಿತಾಸಕ್ತಿ ಹೇಗೆ ಕೃಷಿ ಕಾನೂನುಗಳ ಜಾರಿಯ ಹಿಂದೆ ಕೆಲಸ ಮಾಡಿದೆಯೋ ಅದೇ ರೀತಿ ವಿದ್ಯುತ್ ರಂಗದ ಮೇಲೆ ನಿಯಂತ್ರಣ ಮತ್ತು ಏಕಸ್ವಾಮ್ಯ ಸಾಧಿಸುವ ಅದಾನಿಯ ಹಿತಾಸಕ್ತಿ ಈ ಪ್ರಸ್ತಾಪಿತ ಕಾಯ್ದೆಯ ಹಿಂದೆ ಅಡಗಿದೆ. ವಿದ್ಯುತ್ ಆಟೋಮೊಬೈಲ್ ಇಂಡಸ್ಟ್ರಿಯ ವಹಿವಾಟಿನ ಮೇಲೆ ಏಕಸ್ವಾಮ್ಯ ಸಾಧಿಸಲು ವಿದ್ಯುತ್ ಉತ್ಪಾದನೆ, ಸರಬರಾಜು, ವಿತರಣೆ ಮೇಲೆ ಏಕಸ್ವಾಮ್ಯ ಸಾಧಿಸಲು ಅದಾನಿಯಂತಹ ಕಾರ್ಪೊರೇಟ್ ದೈತ್ಯರಿಗೆ ನೆರವಾಗುವುದು ಈ ಮಸೂದೆಯ ಗುಪ್ತ ಕಾರ್ಯಸೂಚಿಯಾಗಿದೆ.

ಕೃಷಿ ಅರ್ಥಿಕತೆ ಮೇಲೆ ಈ ಕಾಯ್ದೆ ಅತ್ಯಂತ ಕೆಟ್ಟ ಪರಿಣಾಮಗಳನ್ನು ಉಂಟುಮಾಡುತ್ತದೆ. ರಾಜ್ಯದಲ್ಲಿ ಸುಮಾರು 25 ಲಕ್ಷ ಸಕ್ರಮ ಪಂಪ್ ಸೆಟ್‌ಗಳು ಸೇರಿ ಸುಮಾರು 40 ಲಕ್ಷ ನೀರಾವರಿ ಪಂಪ್‌ಸೆಟ್‌ಗಳು ಇವೆ. ದುಬಾರಿ ವಿದ್ಯುತ್ ದರಗಳಿಂದಾಗಿ ದೇಶದೆಲ್ಲೆಡೆ ಕೋಟ್ಯಂತರ ಕೃಷಿಕರು ದಿವಾಳಿಯಾಗಲಿದ್ದಾರೆ. ಇದರಿಂದ ಆಹಾರದ ಬೆಲೆಗಳ ತೀವ್ರ ಏರಿಕೆ ಜೊತೆಗೆ ದೇಶದ ಆಹಾರ ಭದ್ರತೆಗೆ ಭಾರೀ ದೊಡ್ಡ ಅಪತ್ತು ಬರಲಿದೆ.

ಸಾರ್ವಜನಿಕ ತೆರಿಗೆ ಹಣದಿಂದ ನಿರ್ಮಿಸಿರುವ ಸರ್ಕಾರಿ ಪವರ್ ಗ್ರಿಡ್ ಮುಂತಾದ ಮೂಲ ಸೌಕರ್ಯಗಳು ಪೂರ್ತಿಯಾಗಿ ಖಾಸಗಿ ಕೈಗಳಿಗೆ ಹಸ್ತಾಂತರವಾಗುವುದರಿಂದ ಗ್ರಿಡ್ ಚಾನಲ್‌ಗಳನ್ನು ಮರು ಜೋಡಿಸಿಕೊಳ್ಳುತ್ತಾರೆ ಮತ್ತು ಪ್ರತ್ಯೇಕ ಗ್ರಿಡ್‌ಗಳನ್ನು ಸ್ಥಾಪಿಸಿಕೊಳ್ಳುತ್ತಾರೆ. ಇದರಿಂದ ಮೀಟರ್ ಕಿತ್ತು ಹಾಕಿದರೂ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯ ಜಾಲವೇ ಇಲ್ಲದಂತಾಗುತ್ತದೆ.

ಈಗ ಇರುವ ದುಬಾರಿ ವಿದ್ಯುತ್ ದರದಿಂದ ದೇಶದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ನರಳುತ್ತಿವೆ. ಖಾಸಗೀಕರಣಗೊಂಡ ಮೇಲೆ ಈ ವಿದ್ಯುತ್ ದರಗಳು ಮತ್ತಷ್ಟು ದುಬಾರಿಯಾಗುವುದರಿಂದ ಈ ಕ್ಷೇತ್ರಗಳ ಉತ್ಪಾದನೆ ಮತ್ತು ಉದ್ಯೋಗದ ಪರಿಸ್ಥಿತಿ ಸಂಪೂರ್ಣ ನಾಶವಾಗಲಿದೆ.

ಇತ್ತೀಚೆಗೆ ಕರ್ನಾಟಕದ ನೂತನ ವಿದ್ಯುತ್ ಮಂತ್ರಿ ಸುನಿಲ್ ಕುಮಾರ್, ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸುವುದಿಲ್ಲ, ಇವೆಲ್ಲಾ ಊಹಾಪೋಹ ಎಂದು ಹೇಳಿಕೆ ನೀಡಿದ್ದಾರೆ. ಇದೇ ರೀತಿ ಕಳೆದ ವರ್ಷ ಕೂಡ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಎಪಿಎಂಸಿಗಳು ಮುಚ್ಚುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಕೇವಲ ಒಂದೇ ವರ್ಷದಲ್ಲಿ ರಾಜ್ಯದ ಎಪಿಎಂಸಿಗಳು ಮುಚ್ಚುವ ಹಂತಕ್ಕೆ ಬಂದಿವೆ. ಪಂಪ್‌ಸೆಟ್‌ಗಳಿಗೆ ಮೀಟರ್
ಹಾಕಲಿಲ್ಲ ಅಂದರೆ ವಿದ್ಯುತ್ ಸಂಪರ್ಕವೇ ಇರುವುದಿಲ್ಲ!

ನೋಟು ರದ್ದತಿ (ಡಿಮಾನೆಟೈಸೇಶನ್), ಜಿಎಸ್‌ಟಿ ಮುಂತಾದ ಕ್ರಮಗಳಿಂದ ಈಗಾಗಲೇ ಭಾರೀ ಸಂಕಟದಲ್ಲಿರುವ ರೈತರು, ಸಣ್ಣ ಕೈಗಾರಿಕೆಗಳು ಈ ವಿದ್ಯುತ್ ಕಾಯ್ದೆಯಿಂದ ಮೇಲೆ ಏಳಲಾರದ ಹೊಡೆತ ಅನುಭವಿಸಲಿದ್ದಾರೆ.

ವಿದ್ಯುತ್ ಕ್ಷೇತ್ರದ ಕಾರ್ಮಿಕರು ಅತ್ಯಂತ ಕೆಟ್ಟ ರೀತಿಯಲ್ಲಿ ಬಲಿಪಶುಗಳಾಗಲಿದ್ದಾರೆ. ಬಹುಸಂಖ್ಯಾತ ಕಾಯಂ ನೌಕರರು ಹಂಗಾಮಿ ನೌಕರರಾಗಿ ಪರಿವರ್ತಿತರಾಗಲಿದ್ದಾರೆ. ಹೊರಗುತ್ತಿಗೆ, ಗುತ್ತಿಗೆ ಆಧಾರದ ನೇಮಕಾತಿ ಹಾಗೂ ಫ್ರಾಂಚೈಸಿಗಳನ್ನು ತೊಡಗಿಸಿಕೊಳ್ಳುವುದು ಸರ್ವೇಸಾಮಾನ್ಯವಾಗಲಿದೆ. ವೇತನ, ಸಾಮಾಜಿಕ ಭದ್ರತೆಯೂ ಸೇರಿದಂತೆ ಎಲ್ಲಾ ಕಾನೂನಾತ್ಮಕ ಸೌಲಭ್ಯ ಮತ್ತು ಪರಿಹಾರ-ಸವಲತ್ತುಗಳಲ್ಲಿ ತೀವ್ರ ಕಡಿತ ಉಂಟಾಗುತ್ತದೆ. ಇದರಿಂದ ವಿದ್ಯುತ್ ರಂಗದ ಕಾರ್ಮಿಕರು ಬೀದಿಗೆ ಬೀಳುತ್ತಾರೆ.

ಇಂದಿನ ಆಧುನಿಕವಾದ ಪರಿಸ್ಥಿತಿಯಲ್ಲಿ ವಿದ್ಯುತ್ ಮತ್ತು ಸಾರಿಗೆ ಅತ್ಯಂತ ಆಯಕಟ್ಟಿನ ವಲಯಗಳಾಗಿವೆ. ಈ ಕ್ಷೇತ್ರಗಳ ಖಾಸಗೀಕರಣವು ಇಡೀ ದೇಶವನ್ನೇ ದಿವಾಳಿಯಂಚಿಗೆ ಕೊಂಡೊಯ್ಯಲಿದೆ. ಎನ್ರೋನ್‌ನಂತಹ ವಿದ್ಯುತ್ ಹಗರಣಗಳು ಇನ್ನು ಮುಂದೆ ಸರಣಿಯೋಪಾದಿಯಲ್ಲಿ ಬರಲಿವೆ. ಆದ್ದರಿಂದ ಈ ಕಾಯ್ದೆ ಕುರಿತು ಜಾಗೃತಿ ಬೆಳೆಸಿಕೊಂಡು ವಿದ್ಯುತ್ ಖಾಸಗೀಕರಣದ ವಿರುದ್ಧ ನಡೆಯುತ್ತಿರುವ ಪ್ರತಿರೋಧದಲ್ಲಿ ಎಲ್ಲರೂ ಧ್ವನಿ ಎತ್ತಬೇಕಿದೆ. ಬೆಂಬಲಕ್ಕೆ ನಿಲ್ಲಬೇಕಿದೆ.

ಟಿ. ಯಶವಂತ

ಟಿ. ಯಶವಂತ
ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿಯಲ್ಲಿ ವಾಸವಾಗಿರುವ ಯಶವಂತ್, ಹೊಸ ತಲೆಮಾರಿನ ಸಾಮಾಜಿಕ ಕಾರ್ಯಕರ್ತರು. ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಕ್ರಿಯವಾಗಿರುವ ಅವರು ಈ ಸದ್ಯ ಪ್ರಾಂತ ರೈತ ಸಂಘದ ಸಂಘಟಕರು.


ಇದನ್ನೂ ಓದಿ: ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...