Homeಕರ್ನಾಟಕಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ...

ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

- Advertisement -
- Advertisement -

“ಎಲ್ಲರ ಮೇಲೂ ಕೇಸ್ ಹಾಕಿ. ಎಷ್ಟು ದಿನ ಅಂತ ನೋಡೋದು ಸಾರ್‌? ರಾತ್ರಿಯಿಂದ ಬೆಳಿಗ್ಗೆ ಆರು ಗಂಟೆತನಕ ಆನೆ ಓಡಿಸುತ್ತೇವೆ. ಯಾರೂ ಇರಲ್ಲ. ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?”- ಹೀಗೆ ಆನೆ ಹಾವಳಿಯಿಂದ ನೊಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಆನೆ ಹಾವಳಿ ತಪ್ಪಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನರ ಆಕ್ರೋಶ ಭುಗಿಲೇಳುತ್ತಿದೆ. ಇತ್ತೀಚೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸ್ಥಳೀಯರು ಛೀಮಾರಿ ಹಾಕಿದ್ದರು. ಈಗ ಕಳ್ಳಬೇಟೆ ಶಿಬಿರಕ್ಕೆ ನುಗ್ಗಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲೂರು ವಲಯ ಚಿಕ್ಕಮಗಳೂರು ವಿಭಾಗದ ಕಳ್ಳ ಬೇಟೆ ನಿಗ್ರಹ ಶಿಬಿರ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಥಳೀಯರು ನೊಂದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದಲ್ಲಿ ಮಹಿಳೆ ಆನೆ ದಾಳಿಯಿಂದ ಮೃತಪಟ್ಟಿದ್ದರು. ಕಳ್ಳ ಬೇಟೆ ಶಿಬಿರ ನಿಗ್ರಹ ಅಧಿಕಾರಿಗಳು ಆನೆ ದಾಳಿಯಿಂದ ಗ್ರಾಮ ಹಾಗೂ ಸ್ಥಳೀಯ ಜನರ ರಕ್ಷಣೆ ಮಾಡುವ ಬದಲು ರಾತ್ರಿ ಹಗಲು ಮಾಂಸವನ್ನು ಬೇಯಿಸಿ, ಎಣ್ಣೆ ಕುಡಿದು ತೇಲಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಬಿರಕ್ಕೆ ನುಗ್ಗಿದ್ದಾರೆ.

ಕುಂದೂರು ಎಸ್ಟೇಟ್‌ನಲ್ಲಿರುವ ಶಿಬಿರದೊಳಗೆ ನುಗ್ಗಿದ ಯುವಕರ ಗುಂಪು ಕಟ್ಟಡದೊಳಗಿನ ಉಪಕರಣಗಳನ್ನು ಹೊರಗೆಸೆದಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಸುಧೀರ್‌, ಕೃಷ್ಣನ್‌, ನಿಖಿಲ್ ಮರಿಗೌಡ, ಸುಚಿನ್‌, ಗಣೇಶ ಮೊದಲಾದ ಯುವಕರು ಘಟನೆಯಲ್ಲಿ ಭಾಗಿಯಾಗಿದ್ದಾರೆ.

“ಇವರಿಗೆ (ಅಧಿಕಾರಿಗಳಿಗೆ) ತಿನ್ನಲು ಸೋನಮುಸುರಿ ಅಕ್ಕಿ ಬೇಕು, ಪೊಲೀಸರು ಈ ಅಧಿಕಾರಿಗಳಿಗೆ ರಕ್ಷಣೆ ಕೊಡುತ್ತೀರಾ, ನಮಗೆ ನ್ಯಾಯ ಕೊಡಿಸಲು ಆಗುತ್ತಾ? ಇಲ್ಲೇ ಮಜಾ ಮಾಡ್ತಾರೆ, ಚಿಕನ್ ಫ್ರೈ ಮಾಡ್ಕೊಂಡು ತಿನ್ನುತ್ತಾರೆ. ಇಷ್ಟು ದೊಡ್ಡ ಬಿಲ್ಡಿಂಗ್ ಇಟ್ಟುಕೊಂಡು ಇಲ್ಲೇ ಪಟಾಕಿ ಹೊಡಿದುಕೊಂಡು ಇರುತ್ತಾರೆ” ಎಂದು ದೂರಿದ್ದಾರೆ.

“ಆನೆ ಎಲ್ಲಿ ಬಂದಿದ್ದವು ಎನ್ನುತ್ತಾರೆ? ನೋಡಿ ಅಲ್ಲಿ ಚಿಕನ್ ಫ್ರೈ ಮಾಡಿಕೊಂಡು ತಿಂದಿದ್ದಾರೆ. ಸ್ಥಳೀಯರಿಗೆ ರಕ್ಷಣೆ ಕೊಡುವುದಿಲ್ಲ” ಎಂದು ನೊಂದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದರು.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

“ನನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ” ಎಂದು ಎಂ.ಪಿ ಕುಮಾರಸ್ವಾಮಿ ಆರೋಪಿದ್ದರು. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದರು.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿತ್ತು. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದರು. ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಸಾರ್ವಜನಿಕ ಸೇವಕರು” ಎಂದು ಕರೆಯಲಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಜನರ ಸಮಸ್ಯೆಗಳನ್ನು ಬಗೆಹರಿಸದೇ, ಕೇವಲ ಕಾನೂನನ್ನು ಚಲಾಯಿಸಲು ಮುಂದಾದಾಗ, ಜನ ರೊಚ್ಚಿಗೇಳುವುದು ಸಹಜ. ಅದರಲ್ಲೂ ನಮ್ಮ ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿದಾಗ, ಅವರು ಆಕ್ರೋಶಗೊಳ್ಳುವುದು ಸಹಜ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಿನಂಚಿನ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....