Homeಮುಖಪುಟಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್...

ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

- Advertisement -
- Advertisement -

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿಗಳಾದ ಸಂಶೋಧಕ ರೋನಾ ವಿಲ್ಸನ್ ಮತ್ತು ಹೋರಾಟಗಾರ ಸುಧೀರ್ ಧಾವಳೆ ಅವರು ಬಂಧನಕ್ಕೊಳಗಾದ ಆರು ವರ್ಷಗಳ ನಂತರ ಶುಕ್ರವಾರ (ಜನವರಿ 24, 2025) ನವಿ ಮುಂಬೈ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಹದಿನೈದು ದಿನಗಳ ನಂತರ, ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಎನ್‌ಐ ನ್ಯಾಯಾಲಯದ ಮುಂದೆ ವಕೀಲರು ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ, ನವಿ ಮುಂಬೈನ ತಲೋಜಾ ಜೈಲಿನಿಂದ ಇಬ್ಬರು ಶುಕ್ರವಾರ ಮಧ್ಯಾಹ್ನ 1:30 ರ ಸುಮಾರಿಗೆ ಹೊರಬಂದಿದ್ದಾರೆ.

ಜನವರಿ 8ರಂದು ವಿಲ್ಸನ್ ಮತ್ತು ಧಾವಳೆ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಇಬ್ಬರು 2018 ರಿಂದ ಜೈಲಿನಲ್ಲಿದ್ದರು. ಇವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ದಾಖಲಾದ ಪ್ರಕರಣದ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ.

“ಅವರು 2018ರಿಂದ ಜೈಲಿನಲ್ಲಿದ್ದಾರೆ. ಅವರ ವಿರುದ್ದ ಇನ್ನೂ ಆರೋಪಗಳನ್ನು ರೂಪಿಸಲಾಗಿಲ್ಲ. ಪ್ರಾಸಿಕ್ಯೂಷನ್ 300ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಉಲ್ಲೇಖಿಸಿದೆ. ಆದ್ದರಿಂದ ಶೀಘ್ರದಲ್ಲಿ ವಿಚಾರಣೆ ಮುಗಿಯುವ ಸಾಧ್ಯತೆಯಿಲ್ಲ” ಎಂದು ಜಾಮೀನು ನೀಡುವಾಗ ಹೈಕೋರ್ಟ್ ಹೇಳಿತ್ತು.

ಈ ಪ್ರಕರಣದಲ್ಲಿ ಧಾವಳೆ ಮತ್ತು ವಿಲ್ಸನ್ ಜೊತೆಗೆ ಇತರ 14 ಹೋರಾಟಗಾರರು, ಶಿಕ್ಷಣ ತಜ್ಞರನ್ನು ಬಂಧಿಸಲಾಗಿತ್ತು. ಈ ಪೈಕಿ ವರವರ ರಾವ್, ಸುಧಾ ಭಾರದ್ವಾಜ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾ, ಶೋಮಾ ಸೇನ್, ಗೌತಮ್ ನವಲಖಾ ಮತ್ತು ಮಹೇಶ್ ರಾವತ್ ಸೇರಿ ಇಲ್ಲಿಯವರೆಗೆ ಎಂಟು ಮಂದಿ ಜಾಮೀನು ಪಡೆದಿದ್ದಾರೆ.

ಇವರಲ್ಲಿ, ಮಹೇಶ್ ರಾವತ್ ಅವರ ಜಾಮೀನಿನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿರುವ ಮೇಲ್ಮನವಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ಅವರು ಇನ್ನೂ ಜೈಲಿನಲ್ಲಿದ್ದಾರೆ.

ಆರೋಪಿಗಳಲ್ಲಿ ಒಬ್ಬರಾದ ಜೆಸ್ಯೂಟ್ ಪಾದ್ರಿ ಮತ್ತು ಹೋರಾಟಗಾರ ಸ್ಟಾನ್ ಸ್ವಾಮಿ 2021 ರಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಗ ನಿಧನರಾದರು.

ಡಿಸೆಂಬರ್ 31, 2017ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಆರೋಪಿಗಳು ಪ್ರಚೋದನಕಾರಿ ಭಾಷಣಗಳನ್ನು ಮಾಡಿ, ಮರುದಿನ ಜಿಲ್ಲೆಯ ಕೋರೆಗಾಂವ್-ಭೀಮಾದಲ್ಲಿ ಹಿಂಸಾಚಾರಕ್ಕೆ ಕಾರಣರಾದರು ಎಂದು ಆರೋಪಿಸಿ ಪುಣೆ ಪೊಲೀಸರು 2018ರಲ್ಲಿ ಪ್ರಕರಣ ದಾಖಲಿಸಿದ್ದರು.

ಪೊಲೀಸರ ಪ್ರಕಾರ, ಎಲ್ಗರ್ ಪರಿಷತ್ ಸಮಾವೇಶಕ್ಕೆ ಮಾವೋವಾದಿಗಳು ಬೆಂಬಲ ನೀಡಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆಯನ್ನು ಪುಣೆ ಪೊಲೀಸರಿಂದ ವಹಿಸಿಕೊಂಡು ಆರೋಪಪಟ್ಟಿ ಸಲ್ಲಿಸಿತ್ತು. ಆದರೆ, ವಿಶೇಷ ನ್ಯಾಯಾಲಯವು ಇನ್ನೂ ಆರೋಪಗಳನ್ನು ರೂಪಿಸಿಲ್ಲ.

ಸಂಭಾಲ್‌ | ಆಸ್ತಿ ಧ್ವಂಸ ಮಾಡಿದ ಅಧಿಕಾರಿಗಳ ವಿರುದ್ಧ ವಿಚಾರಣೆ ಆರಂಭಿಸಲಿರುವ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...