Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

ಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಸಾವನ್ನು ಖಂಡಿಸಿ ದೇಶಾದ್ಯಂತ ಖಂಡನೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ. ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ 10 ಜನ ಹೋರಾಟಗಾರು ಇಂದು ತಾಲೋಜ ಜೈಲಿನೊಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಫಾದರ್ ಸ್ಟ್ಯಾನ್ ಸ್ವಾಮಿಯವರದು ಸಾಂಸ್ಥಿಕ ಹತ್ಯೆ ಎಂದಿರುವ ಎಲ್ಗರ್ ಪ್ರಕರಣದಲ್ಲಿ ಬಂಧಿತ ಹೋರಾಟಗಾರರು ಎನ್‌ಐಎ ಅಧಿಕಾರಿಗಳ ಕಿರುಕುಳದಿಂದಲೇ ಸ್ವಾಮಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಎಲ್ಗರ್‌ ಪರಿಷತ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಮತ್ತು ತಾಲೋಜ ಸೆಂಟ್ರಲ್ ಜೈಲಿನ ಸೂಪರ್‌ಇಂಡೆಂಟ್‌ ವಿರುದ್ಧ ಕ್ರಮಕ್ಕೆ ಸತ್ಯಾಗ್ರಹ ನಿರತ ಹೋರಾಟಗಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯ ಸಂಕೇತವಾಗಿ, ಈ ಪ್ರಕರಣದ ಸಹ-ಆರೋಪಿಗಳಾದ  ರೋನಾ ವಿಲ್ಸನ್, ಸುರೇಂದ್ರ ಗ್ಯಾಡ್ಲಿಂಗ್, ಸುಧೀರ್ ಧವಾಲೆ, ಮಹೇಶ್ ರೌತ್, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಗೌತಮ್ ನವಲಖಾ, ಆನಂದ್ ತೆಲ್ಟುಂಬ್ಡೆ, ರಮೇಶ್ ಗೈಚೋರ್ ಮತ್ತು ಸಾಗರ್ ಗೋರ್ಖೆ ಅವರು ಇಂದು ಉಪವಾಸವನ್ನು ಕೈಗೊಂಡಿದ್ದು ಫಾದರ್ ಸ್ಟ್ಯಾನ್ ಸ್ವಾಮಿ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ನಿನ್ನೆ ಹೇಳಿಕೆ ಬಿಡುಗಡೆ ಮಾಡಿ ಫಾದರ್ ಸ್ಟ್ಯಾನ್‌ ಸ್ವಾಮಿ ವಿಷಯದಲ್ಲಿ ಯಾವ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿಗನುಗುಣವಾಗಿಯೇ ಪ್ರಕ್ರಿಯೆಗಳನ್ನು ನಡೆಸಲಾಗಿದೆ ಎಂದು ತನ್ನ ಪಾತ್ರವನ್ನು ನಿರಾಕರಿಸಿತ್ತು.

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು-ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೈಲುಕಂಬಿಯ ಸ್ವಗತ
    ********************

    ನಾನು ಸೆರೆಮನೆ ಸೇರಿದ ಮೇಲೆ
    ಖೂಳ ಕೊಲೆಪಾತಕಿಗಳು
    ಖಾದಿ ಖಾಕಿಗಳೂ
    ನನ್ನ ಮುಟ್ಟಿ ತಟ್ಟಿದಂದಿನಿಂದ
    ಕೊರಗುತ್ತಿದ್ದೇನೆ.

    ಬೇಸರವಿಲ್ಲ
    ಮಂದಿರ ಮಸೀದಿ ಚರ್ಚು
    ಸೇರದ್ದಕ್ಕೆ,
    ಅಪರಾಧಿಗಳ ಕರತಗುಲಿ
    ಗಾಯಕ್ಕೆ ಉಪ್ಪು ಸವರಿದಂತೆ
    ನೋಯುತ್ತಿದ್ದೇನೆ.

    ಶಾಲೆಗೆ ಸೇರಿದ್ದರೆ
    ಎಳೆಯರ ಸ್ಪರ್ಷ
    ಗೆಳೆಯರ ಹರ್ಷ ಕಂಡು
    ಸುಖಿಸಬಹುದಿತ್ತು!

    ಎಷ್ಟೋ ಸಮಾಧಾನ
    ರೈತರು ಶಿಕ್ಷಕರು ಕವಿಗಳು
    ಸಮಾಜಕಾರ್ಯಕರ್ತರು
    ಒಳಿತಿಗಾಗಿ ಹೋರಾಡಲು
    ಸೆರೆಮನೆ ಪಾಲಾದಾಗ
    ಅವರು ಪಿಸುಗುಟ್ಟುವುದ
    ಕೇಳಿ ಮರುಗಿದ್ದೇನೆ
    ವಿದ್ಯುದಾಲಿಂಗನಕೆ ಸಿಕ್ಕು
    ಸತ್ತಂತೆ ಕಾಗೆ
    ಅವರೂ ಹಾಗೆ
    ತಪ್ಪಿಲ್ಲದಿದ್ದರೂ
    ನರಳಿ ನರಳಿ ಮನೆಗೆ ಮರಳದೆ
    ಸತ್ತುದ ಕಂಡು ಅತ್ತಿದ್ದೇನೆ.

    ಸಭ್ಯ ಸ್ಟ್ಯಾನ್ ಸ್ವಾಮಿ
    ಮುಟ್ಟಿದಾಗ ನನ್ನ ಬದುಕು
    ಸಾರ್ಥಕ ಎನಿಸಿತು,
    ಕೈ ನಡುಗಿ ಬಾಯಿ ಒಣಗಿ
    ಅವರು ನೀರು ಕುಡಿಯಲು
    ನಾನೇ ಸ್ಟ್ರಾ ಆಗಬೇಕಿತ್ತು!
    ಅವರೆಂದರು
    ‘ ಜಾಮೀನು ಸಿಗದಿರೆ
    ನನ್ನ ನಡೆ ಸಾವಿನ ಕಡೆ’
    ನಿಂತಿತು ಹೃದಯದ ಬಡಿತ
    ಅಪರಾಧಿ ಪ್ರಜಾಪ್ರಭುತ್ವ
    ಸಾಕ್ಷಿ ಇದೆ ನನ್ನ ಕಡೆ.

    ಜಯರಾಮ.ಸಿ.ವಿ.ನಾಗಮಂಗಲ
    # 904, ತೀರ್ಥಂಕರ ಮಾರ್ಗ, ಸಿದ್ಧಾರ್ಥನಗರ,
    ಮೈಸೂರು.
    ಚಲನವಾಣಿ: 7975774651.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...