HomeಅಂಕಣಗಳುKarnataka against SIRSIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ ಶೇಕಡಾ 100ರಷ್ಟು ಪೂರ್ಣಗೊಂಡಿದೆ ಎಂದು ಚುನಾವಣಾ ಅಧಿಕಾರಿಗಳು ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಸ್ವಂತ ಮನೆಯಲ್ಲಿರುವ ಅರ್ಹ ಮತದಾರರಿಗೆ ಯಾವುದೇ ಮಾಹಿತಿ ನೀಡದೇ, ಅವರ ಅನುಮತಿ ಅಥವಾ ದೃಢೀಕರಣ ಪಡೆಯದೇ ‘ಖಾಯಂ ಸ್ಥಳಾಂತರ’ ಎಂದು ದಾಖಲಿಸಿ ಮತಪಟ್ಟಿಯಿಂದ ಹೊರಹಾಕುವ ಹುನ್ನಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇಂತಹದೊಂದು ಪ್ರತ್ಯಕ್ಷ ಸಾಕ್ಷಿ ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಬಡಾವಣೆಯ 273ನೇ ಮತಗಟ್ಟೆ ವ್ಯಾಪ್ತಿಯಲ್ಲಿ ಬಯಲಾಗಿದೆ. ಹಲವು ವರ್ಷಗಳಿಂದ ಸ್ವಂತ ಮನೆಯಲ್ಲಿ ವಾಸಿಸುತ್ತಿರುವ ಒಂದೇ ಕುಟುಂಬದ ನಾಲ್ವರು ಮತದಾರರಾದ ಪೃಥ್ವಿರಾಜು, ಅವರ ತಾಯಿ, ಸೋದರ ಅತ್ತೆ ಹಾಗೂ ಮಾವ ಅವರಿಗೆ ಈವರೆಗೆ ಎಸ್‌ಐಆರ್ ಎನ್ಯುಮರೇಷನ್ ನಮೂನೆ ತಲುಪಿಯೇ ಇಲ್ಲ. ಆದರೆ, ಎಸ್‌ಐಆರ್ ಆನ್‌ಲೈನ್ ಡೇಟಾದಲ್ಲಿ ಅವರೆಲ್ಲರೂ ಖಾಯಂ ಸ್ಥಳಾಂತರಗೊಂಡಿದ್ದಾರೆ ಎಂದು ಅಪ್‌ಡೇಟ್‌ ಮಾಡಿ ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡಲಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿ, ಸಂತ್ರಸ್ತ ಮತದಾರರ ಆಕ್ರೋಶ

ಎಸ್‌ಐಆರ್ ಆರಂಭವಾದ ದಿನದಿಂದಲೂ ಗಣತಿ ನಮೂನೆ ಪಡೆಯಲು ಬಿಎಲ್‌ಒ (BLO) ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಆನ್‌ಲೈನ್‌ನಲ್ಲೂ ಕರೆ ಮಾಡಲು ಮನವಿ ಸಲ್ಲಿಸಿದ್ದೆವು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಸಂತ್ರಸ್ತ ಪೃಥ್ವಿರಾಜು ಅಳಲು ತೋಡಿಕೊಂಡಿದ್ದಾರೆ.

ಜುಲೈ 29ರವರೆಗೂ ಬಿಎಲ್‌ಒ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಸ್ಥಳೀಯ ಬಿಎಲ್‌ಎ (BLA) ಅವರನ್ನು ಸಂಪರ್ಕಿಸಿದಾಗ, ನಿಮ್ಮನ್ನು ಈಗಾಗಲೇ ‘ಖಾಯಂ ಸ್ಥಳಾಂತರ’ ಎಂದು ದಾಖಲಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ನಾವು ದಶಕಗಳಿಂದ ಸ್ವಂತ ಮನೆಯಲ್ಲೇ ಇದ್ದರೂ ನಮ್ಮನ್ನು ಸ್ಥಳಾಂತರ ಎಂದು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ‘ನೀವು ಮನೆಯಲ್ಲಿ ಇರಲಿಲ್ಲ’ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆದರೆ ಯಾರೂ ನಮ್ಮ ಮನೆಗೆ ಬಂದಿರಲಿಲ್ಲ, ಯಾವುದೇ ನೋಟಿಸ್ ಕೂಡ ನೀಡಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕುಟುಂಬದ ಬಳಿ 2002ರಿಂದಲೂ ಇರುವ ಹಳೆಯ ಮತದಾರರ ದಾಖಲೆಗಳಿದ್ದರೂ ಅಧಿಕಾರಿಗಳು ಅದನ್ನು ಪರಿಗಣಿಸಿಲ್ಲ. ಬದಲಾಗಿ, ವಾಸವಿರುವ ಮನೆಯ ಕಂದಾಯ ರಸೀದಿಯನ್ನು ಕೇಳಲಾಗುತ್ತಿದ್ದು, ಈಗ ಪಟ್ಟಿಯಲ್ಲಿ ಬದಲಾವಣೆ ಸಾಧ್ಯವಿಲ್ಲ, ಆಗಸ್ಟ್‌ 17ರ ನಂತರ ಹೊಸದಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಿ ಎಂದು ಬಿಎಲ್‌ಒ ಹೇಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಎಸ್‌ಡಿಡಿಒ (ASDDO – Absent, Shifted, Dead, Duplicate, Others) ವರ್ಗದಡಿ ಬರೋಬ್ಬರಿ 36 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿ ಮಾಡಲಾಗಿದೆ. ಈ ವರ್ಗದಡಿ ಗುರುತಿಸಲಾಗುವ ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ನೇರವಾಗಿ ಅಳಿಸಿ ಹಾಕಲಾಗುತ್ತದೆ. ಈಗ ಪೃಥ್ವಿರಾಜ್ ಕುಟುಂಬದ ಪ್ರಕರಣವನ್ನು ಗಮನಿಸಿದರೆ, ಅಧಿಕಾರಿಗಳ ನಿರ್ಲಕ್ಷ್ಯ, ಬಿಎಲ್‌ಒಗಳ ಮೇಲಿನ ಒತ್ತಡ ಮತ್ತು ಚುನಾವಣಾ ಆಯೋಗದ ತಾಂತ್ರಿಕ ಎಡವಟ್ಟುಗಳಿಂದಾಗಿಯೇ ಈ ಪ್ರಮಾಣದಲ್ಲಿ ಸರಿ ಇರುವ ಮತದಾರರ ಹೆಸರುಗಳನ್ನೂ ಎಎಸ್‌ಡಿಡಿಒ ಅಡಿಯಲ್ಲಿ ತಳ್ಳಿ ಮತಪಟ್ಟಿಯಿಂದ ಗಾಯಬ್ ಮಾಡಲಾಗುತ್ತಿದೆಯೇ ಎಂಬ ಅನುಮಾನ ದಟ್ಟವಾಗಿದೆ.

ಈ ಹಿಂದೆ ಕೊಡಗು ಜಿಲ್ಲೆಯ ಆದಿವಾಸಿ ಹಾಡಿಗಳಲ್ಲಿಯೂ ಗಣತಿ ನಮೂನೆ ತಲುಪದ ಪ್ರಕರಣಗಳು ವರದಿಯಾಗಿದ್ದವು. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ರಾಜ್ಯದಲ್ಲಿ ಗಣತಿ ನಮೂನೆಗಳನ್ನು ಶೇ.100ರಷ್ಟು ತಲುಪಿಸಲಾಗಿದೆ ಎಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ, ನೆಲಮಟ್ಟದಲ್ಲಿ ಇಂತಹ ಅಕ್ರಮಗಳು ಬಯಲಾಗುತ್ತಿರುವುದು ಆಯೋಗದ ಹೇಳಿಕೆಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ.

ಹೆಚ್ಚುತ್ತಿರುವ ಎಎಸ್‌ಡಿಡಿಒ ಸಂಖ್ಯೆಯ ಹಿಂದೆ ಕೇವಲ ಮತದಾರರ ಜಾಗ ಬದಲಾವಣೆಯಷ್ಟೇ ಇಲ್ಲ, ಬದಲಾಗಿ ಆಡಳಿತಾತ್ಮಕ ಲೋಪಗಳು ಮತ್ತು ಕಾನೂನು ಪಾಲನೆಯ ಕೊರತೆಯೂ ಇದೆ. ಈ ಬಗ್ಗೆ ಚುನಾವಣಾ ಆಯೋಗ ತಕ್ಷಣವೇ ಸಮಗ್ರ ತನಿಖೆ ನಡೆಸಿ, ಯಾವುದೇ ಅರ್ಹ ಮತದಾರನ ಹಕ್ಕು ಕಸಿಯದಂತೆ ಎಚ್ಚರವಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...