Homeಮುಖಪುಟಇಸ್ರೇಲ್-ಹಿಜ್ಬುಲ್ಲಾ ನಡುವೆ ಉಲ್ಬಣಗೊಂಡ ಸಂಘರ್ಷ : ಲೆಬನಾನ್ ತೊರೆಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ

ಇಸ್ರೇಲ್-ಹಿಜ್ಬುಲ್ಲಾ ನಡುವೆ ಉಲ್ಬಣಗೊಂಡ ಸಂಘರ್ಷ : ಲೆಬನಾನ್ ತೊರೆಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ

- Advertisement -
- Advertisement -

ಇಸ್ರೇಲ್-ಹಿಜ್ಬುಲ್ಲಾ ನಡುವಿನ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆ ಬೈರುತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಲೆಬನಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದೆ. ಅಲ್ಲದೆ, ಮುಂದಿನ ಸೂಚನೆ ನೀಡುವವರೆಗೆ ಲೆಬನಾನ್‌ಗೆ ಭಾರತೀಯರು ಪ್ರಯಾಣಿಸದಂತೆ ನಿರ್ದೇಶಿಸಿದೆ.

ಅಕ್ಟೋಬರ್ 2023ರಲ್ಲಿ ಕೊನೆಯದಾಗಿ ನವೀಕರಿಸಲಾದ ಭಾರತೀಯ ವಿದೇಶಾಂಗ ಇಲಾಖೆಯ ಮಾಹಿತಿ ಪ್ರಕಾರ, ಲೆಬನಾನ್‌ನಲ್ಲಿ ಸುಮಾರು 4,000 ಭಾರತೀಯ ಪ್ರಜೆಗಳಿದ್ದಾರೆ. ಅವರಲ್ಲಿ ಹೆಚ್ಚಿನವರು ಕಂಪನಿಗಳು, ನಿರ್ಮಾಣ ಕ್ಷೇತ್ರ ಮತ್ತು ಕೃಷಿ ಫಾರ್ಮ್‌ಗಳಲ್ಲಿ ದುಡಿಯುವವರಾಗಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಾರಂಭಗೊಂಡ ಇಸ್ರೇಲ್‌ನ- ಹಮಾಸ್ ನಡುವಿನ ಸಂಘರ್ಷದ ಬಳಿಕ, ಇಸ್ರೇಲಿ ಪಡೆಗಳು ಮತ್ತು ಹಿಜ್ಬುಲ್ಲಾ ನಡುವೆ ಗಡಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇತ್ತೀಚೆಗೆ ದಕ್ಷಿಣ ಲೆಬನಾನ್ ಗ್ರಾಮದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಹಲವಾರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್ ಮಾಧ್ಯಮ ವರದಿಗಳು ಗುರುವಾರ ತಿಳಿಸಿವೆ.

ಕಳೆದ ಮಂಗಳವಾರ, ಇಸ್ರೇಲ್ ದಕ್ಷಿಣ ಬೈರುತ್‌ನಲ್ಲಿ ಹಿಜ್ಬುಲ್ಲಾದ ಉನ್ನತ ಮಿಲಿಟರಿ ಕಮಾಂಡರ್ ಫೌದ್ ಶುಕೂರ್ ಅವರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ಇಸ್ರೇಲ್ ಆಕ್ರಮಿತ ಗೋಲನ್ ಹೈಟ್ಸ್‌ನಲ್ಲಿ ಹಿಜ್ಬುಲ್ಲಾ ದಾಳಿ ನಡೆಸಿ 12 ಜನರನ್ನು ಹತ್ಯೆ ಮಾಡಿದ ಬಳಿಕ, ಇಸ್ರೇಲ್ ನಡೆಸಿದ ರಾಕೆಟ್ ದಾಳಿಯಲ್ಲಿ ಶುಕೂರ್ ಕೊಲ್ಲಲ್ಪಟ್ಟಿರುವುದಾಗಿ ತಿಳಿದು ಬಂದಿದೆ.

ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಗುರುವಾರ ರಾತ್ರಿ ಲೆಬನಾನ್‌ನಿಂದ ಇಸ್ರೇಲ್‌ನತ್ತ ಡಜನ್‌ನಷ್ಟು ರಾಕೆಟ್‌ಗಳನ್ನು ಹಿಜ್ಬುಲ್ಲಾ ಹಾರಿ ಬಿಟ್ಟಿದೆ ಎಂದು ವರದಿಯಾಗಿದೆ. ಇದರಿಂದ ಸಂಘರ್ಷ ಉಲ್ಬಣಗೊಂಡಿದೆ.

ಇದನ್ನೂ ಓದಿ : 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಛತೆ ವೇಳೆ 377 ಮಂದಿ ಸಾವು : ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ನ ಯಾವುದೇ ಘಟನೆ ವರದಿಯಾಗಿಲ್ಲ ಎಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...