Homeಮುಖಪುಟಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

- Advertisement -
- Advertisement -

‘ತುರ್ತುಪರಿಸ್ಥಿತಿ ಹೇರಿದ್ದು ನಿಜಕ್ಕೂ ತಪ್ಪು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತನ್ನ ಅಜ್ಜಿ ಇಂದಿರಾ ಗಾಂಧಿಯವರ ನಿಲುವನ್ನು ಒರೆಗೆ ಹಚ್ಚಿ ಹೇಳಿಕೆ ನೀಡಿದ್ದಾರೆ.

“ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 21 ತಿಂಗಳುಗಳ ಕಾಲ ದೇಶಾದ್ಯಂತ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು. ಆದರೆ, ಕಾಂಗ್ರೆಸ್ ಯಾವುದೇ ಸಂದರ್ಭದಲ್ಲೂ ದೇಶದ ಸಾಂಸ್ಥಿಕ ಚೌಕಟ್ಟನ್ನು ಸೆರೆ ಹಿಡಿಯಲು ಪ್ರಯತ್ನಿಸಲಿಲ್ಲ. ಅದು ಪ್ರಸ್ತುತ ಸನ್ನಿವೇಶಕ್ಕಿಂತ ಮೂಲಭೂತವಾಗಿ ಭಿನ್ನವಾಗಿತ್ತು” ಎಂದು ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದ್ದಾರೆ.

1975 ಮತ್ತು 1977ರ ಸಮಯದಲ್ಲಿ 21 ತಿಂಗಳು ಕಾಲ ಹೇರಲಾಗಿದ್ದ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಏನೆಲ್ಲಾ ನಡೆಯಿತೋ, ಅದೆಲ್ಲವೂ ಖಂಡಿತವಾಗಿಯೂ ತಪ್ಪು. ನನ್ನ ಅಜ್ಜಿ ಆ ರೀತಿಯಲ್ಲಿ ಮಾಡಬಾರದಿತ್ತು ಎಂದು ಅರ್ಥಶಾಸ್ತ್ರಜ್ಞ ಕೌಶಿಕ್ ಬಸು ಅವರೊಂದಿಗೆ ವರ್ಚುವಲ್ ಚರ್ಚೆಯಲ್ಲಿ ರಾಹುಲ್‌ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಬಗ್ಗೆ CBI ತನಿಖೆ ಅಗತ್ಯ: ಬಾಲಚಂದರ್ ಜಾರಕಿಹೋಳಿ

ತುರ್ತುಪರಿಸ್ಥಿತಿ ವೇಳೆಯಲ್ಲಿ ಏನಾಯಿತು ಮತ್ತು ಈಗ ಏನಾಗುತ್ತಿದೆ ಎಂಬುದರ ನಡುವೆ ಮೂಲಭೂತ ವ್ಯತ್ಯಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಸಮಯದಲ್ಲಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೂ, ಅದರ ಸಾಂಸ್ಥಿಕ ಚೌಕಟ್ಟನ್ನು ಸೆರೆಹಿಡಿಯಲು ಪ್ರಯತ್ನಿಸಲಿಲ್ಲ. ನಮ್ಮ ಸೈದಾಂತಿಕತೆಯೂ ಅದನ್ನು ಅನುಮತಿಸುವುದಿಲ್ಲ. ನಾವು ಬಯಸಿದರೂ ಅದನ್ನು ಮಾಡಲು ಸಾಧ್ಯವಿಲ್ಲ ಎಂದು ರಾಹುಲ್‌ಗಾಂಧಿ ತಿಳಿಸಿದ್ದಾರೆ.

“ಆದರೆ, ಆರ್‌ಎಸ್‌ಎಸ್‌ ದೇಶದ ಸಾಂಸ್ಥಿಕ ಚೌಕಟ್ಟಿನಲ್ಲಿಯೇ ವ್ಯತ್ಯಾಸ ತರಲು ಯತ್ನಿಸುತ್ತಿದೆ. ಸಂಘ ಪರಿವಾರದ ಜನರನ್ನು ಸಾಂಸ್ಥಿಕ ಸಂಸ್ಥೆಗಳಲ್ಲಿ ತುಂಬಿಸುತ್ತಿದೆ. ಬಿಜೆಪಿ ಚುನಾವಣೆಯಲ್ಲಿ ಸೋತರೂ, ಸಾಂಸ್ಥಿಕ ರಚನೆಯಲ್ಲಿ ನಾವು ಅವರ ಜನರನ್ನು ತಡೆಯುವುದು ಸುಲಭವಲ್ಲ” ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ‘ಕಣಕಣದಲ್ಲೂ ಕೇಸರಿ’ ಖ್ಯಾತಿಯ ಅಜಯ್ ದೇವ್‌ಗನ್ ಕಾರಿಗೆ ಮುತ್ತಿಗೆ ಹಾಕಿದ ಸಿಖ್ಖರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...