Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...