Homeಕರ್ನಾಟಕಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ...

ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ಮುಂದುವರೆಸಿದ ಕುಮಾರಸ್ವಾಮಿ

- Advertisement -
- Advertisement -

‘ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರವೂ ಮುಂದುವರೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, “ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ” ಎಂದು ಅವರು ಹೇಳಿದ್ದಾರೆ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ” ಎಂದು ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

“ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್‌ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ” ಎಂದು ಅವರು ಅಭಿಪ್ರಾಯಪಟ್ಟದ್ದಾರೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.
ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ” ಎಂದು ಅವರು ಹೇಳಿದ್ದಾರೆ.

“ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ” ಎಂದು ಅವರು ವಿನಂತಿಸಿದ್ದಾರೆ.

“ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...