ಡೆತ್ ನೋಟ್ ಬರೆದುಟ್ಟು ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಓಲಾ ಸಂಸ್ಥಾಪಕ, ಸಿಇಒ ಭವಿಶ್ ಅಗರ್ವಾಲ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸುಬ್ರತ್ ಕುಮಾರ್ ದಾಸ್ ವಿರುದ್ಧ ಬೆಂಗಳೂರು ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ್ದಾರೆ.
ಮೃತ ಕೆ. ಅರವಿಂದ್ (38), ಕೆಲಸದ ಸ್ಥಳದಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 28 ಪುಟಗಳ ಡೆತ್ ನೋಟ್ ಬರೆದಿದ್ದಾರೆ ಎಂದು ವರದಿಯಾಗಿದೆ.
ಅರವಿಂದ್ ಅವರ ಸಹೋದರ ಅಶ್ವಿನ್ ಕಣ್ಣನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಫ್‌ಐಆರ್‌ನಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 108 ರ ಅಡಿಯಲ್ಲಿ ಭವಿಶ್ ಅಗರ್ವಾಲ್, ವಾಹನ ಹೋಮೋಲೊಗೇಶನ್ಸ್ ಮತ್ತು ನಿಯಂತ್ರಣ ಮುಖ್ಯಸ್ಥ ಸುಬ್ರತ್ ಕುಮಾರ್ ದಾಸ್ ಮತ್ತು ಇತರರನ್ನು ಹೆಸರಿಸಲಾಗಿದೆ. ಅರವಿಂದ್ ಅವರ ಮರಣದ ನಂತರ 17.46 ಲಕ್ಷ ರೂಪಾಯಿಗಳ ಆರ್ಥಿಕ ಅಕ್ರಮಗಳ ಆರೋಪವನ್ನು ದೂರುದಾರರು ಮಾಡಿದ್ದಾರೆ.
ಸೆಪ್ಟೆಂಬರ್ 28 ರಂದು ಅರವಿಂದ್ ತಮ್ಮ ಮನೆಯಲ್ಲಿ ವಿಷ ಸೇವಿಸಿದಾಗ ಈ ಘಟನೆ ವರದಿಯಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ನಿಧನರಾದರು. ನಂತರ ಕುಟುಂಬವು ಅವರ ಡೆತ್ ನೋಟ್ ಅನ್ನು ಪತ್ತೆಹಚ್ಚಿದೆ. ಓಲಾ ಹಿರಿಯ ಕಾರ್ಯನಿರ್ವಾಹಕರ ಮೇಲೆ ಕೆಲಸದ ಸ್ಥಳದಲ್ಲಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು, ಮಾನವ ಸಂಪನ್ಮೂಲ ಇಲಾಖೆಯು ಅರವಿಂದ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯ ಬಗ್ಗೆ ಸ್ಪಷ್ಟ ವಿವರಣೆಯನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿದರು.
ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104
ದೀಪಾವಳಿ ಬೆಳಿಗ್ಗೆ ದೆಹಲಿಯಲ್ಲಿ ‘ಕಳಪೆ’ ಗುಣಮಟ್ಟದ ಗಾಳಿ: ನಿರ್ಬಂಧ ಆರಂಭ


