Homeಮುಖಪುಟನಿರುದ್ಯೋಗ ಯುವಜನರ ಅತಿ ದೊಡ್ಡ ಸಮಸ್ಯೆ, INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉದ್ಯೋಗ ಕ್ರಾಂತಿ: ...

ನಿರುದ್ಯೋಗ ಯುವಜನರ ಅತಿ ದೊಡ್ಡ ಸಮಸ್ಯೆ, INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉದ್ಯೋಗ ಕ್ರಾಂತಿ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೇಶದ ಯುವ ಜನತೆಗೆ ನಿರುದ್ಯೋಗವೇ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ‘ಉದ್ಯೋಗ ಕ್ರಾಂತಿ’ಯನ್ನು ತರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರ ನೂರಾರು ರ್ಯಾಲಿಗಳನ್ನು ನೀವು ನೋಡಿರಬಹುದು, ಆದರೆ ಅವರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಎಷ್ಟು ಉದ್ಯೋಗಗಳನ್ನು ನೀಡಿದೆ ಎಂದು ಹೇಳುವುದನ್ನು ನೀವು ಕೇಳಿರಲಿಕ್ಕಿಲ್ಲ. 10 ವರ್ಷಗಳಲ್ಲಿ 20 ಕೋಟಿ ಉದ್ಯೋಗಗಳನ್ನು ನೀಡಬೇಕಿತ್ತು, ಆದರೆ 12 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಕಿತ್ತುಕೊಂಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

“ಯುವ ನ್ಯಾಯ” ಗ್ಯಾರಂಟಿಯಡಿಯಲ್ಲಿ ಕಾಂಗ್ರೆಸ್ ಉದ್ಯೋಗ ಕ್ರಾಂತಿಯನ್ನು ಉಂಟು ಮಾಡಲಿದೆ, ಇದಕ್ಕಾಗಿ ನೇಮಕಾತಿ ಪರೀಕ್ಷೆಗಳಿಂದ ಉದ್ಯೋಗ ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲಾಗುವುದು. 30 ಲಕ್ಷ ಸರ್ಕಾರಿ  ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪೇಪರ್ ಸೋರಿಕೆಯಿಂದ ಮುಕ್ತಿ ನೀಡಲಾಗುವುದು. ನೇಮಕಾತಿ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯ ಪ್ರಕರಣಗಳನ್ನು ವಿಚಾರಣೆಗೆ ಕಾಂಗ್ರೆಸ್‌ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಿದೆ ಮತ್ತು ಸಂತ್ರಸ್ತರಿಗೆ ಆರ್ಥಿಕ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಗಿಗ್ ಆರ್ಥಿಕತೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ನಾವು ಸಾಮಾಜಿಕ ಭದ್ರತಾ ಕಾನೂನನ್ನು ಜಾರಿಗೊಳಿಸುತ್ತೇವೆ. 40 ವರ್ಷದೊಳಗಿನ ಯುವಕರಿಗೆ ತಮ್ಮದೇ ಆದ ಉದ್ಯೋಗವನ್ನು ಸೃಷ್ಟಿಸಲು ಮತ್ತು ವಿಸ್ತರಿಸಲು ಸಹಕರಿಸುವುದು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಜಾರಿಗೆ ತಂದಿರುವ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯನ್ನು ಕಾಂಗ್ರೆಸ್ ನಿಲ್ಲಿಸಲಿದೆ. ವ್ಯಾಪಕವಾದ ನಿರುದ್ಯೋಗದ ಕಾರಣ, ಕಾಂಗ್ರೆಸ್ ಮಾರ್ಚ್ 15, 2024ರವರೆಗಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಬಡ್ಡಿಸಮೇತ ಮನ್ನಾ ಮಾಡುತ್ತದೆ ಮತ್ತು ಬ್ಯಾಂಕ್‌ಗಳಿಗೆ ಸರ್ಕಾರ ಲೋನ್‌ ಹಣವನ್ನು ಮರುಪಾವತಿ ಮಾಡುತ್ತದೆ ಎಂದು ಹೇಳಿದ್ದಾರೆ.

21 ವರ್ಷದೊಳಗಿನ ಪ್ರತಿಭಾವಂತ ಮತ್ತು ಉದಯೋನ್ಮುಖ ಕ್ರೀಡಾಪಟುಗಳಿಗೆ ಕಾಂಗ್ರೆಸ್ ತಿಂಗಳಿಗೆ 10,000 ರೂ.ಗಳ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಿದೆ. ಕಾಂಗ್ರೆಸ್‌ ಪಕ್ಷವು ಸರ್ಕಾರಿ ಪರೀಕ್ಷೆಗಳು ಮತ್ತು ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ರದ್ದುಪಡಿಸಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ; ಎನ್‌ಡಿಎ ಮೈತ್ರಿ ಕೂಟದ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...