ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ. ಬಿಡುಗಡೆಯಾದ ನಂತರ ಚಟರ್ಜಿ ಯಾವುದೇ ಸಾರ್ವಜನಿಕ ಹುದ್ದೆಯನ್ನು ಹೊಂದಿರಬಾರದು ಆದರೆ ಶಾಸಕರಾಗಿ ಮುಂದುವರಿಯಬಹುದು ಎಂದು ಸುಪ್ರೀಂಕೋರ್ಟ್ ಈ ವೇಳೆ ಹೇಳಿದೆ. ಉದ್ಯೋಗ ನಗದು ಹಗರಣ
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಫೆಬ್ರವರಿ 1, 2025 ರಂದು ಚಟರ್ಜಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ. ಶಂಕಿತ ಆರೋಪಿಗಳನ್ನು ಅನಿರ್ದಿಷ್ಟಾವಧಿಯವರೆಗೆ ಬಂಧಿಸಲು ಸಾಧ್ಯವಿಲ್ಲ ಮತ್ತು ಆದ್ದರಿಂದ, ಆರೋಪಿ ಮತ್ತು ಸಂತ್ರಸ್ತರ ಹಕ್ಕುಗಳನ್ನು ಸಮತೋಲನಗೊಳಿಸಬೇಕು ಎಂದು ಪೀಠ ಈ ವೇಳೆ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಡಿಸೆಂಬರ್ 4 ರಂದು, ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು ಮತ್ತು “ಮೇಲ್ನೋಟಕ್ಕೆ ನೀವು ಭ್ರಷ್ಟ ವ್ಯಕ್ತಿ. ನಿಮ್ಮ ನಿವೇಶನದಿಂದ ಕೋಟ್ಯಂತರ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿತ್ತು.
ಏಪ್ರಿಲ್ 30ರ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಚಟರ್ಜಿ ಸಲ್ಲಿಸಿದ ಮೇಲ್ಮನವಿಯ ಮೇಲೆ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಇಡಿಗೆ ನೋಟಿಸ್ ಜಾರಿ ಮಾಡಿತ್ತು. ಪಿಎಂಎಲ್‌ಎ ಅಡಿಯಲ್ಲಿ ಅವರ ವಿರುದ್ಧ ಪ್ರಾಥಮಿಕ ಪ್ರಕರಣವನ್ನು ದಾಖಲಿಸಲಾಗಿದೆ ಎಂಬ ಆಧಾರದ ಮೇಲೆ ಜಾಮೀನು ನಿರಾಕರಿಸಿತ್ತು. ಉದ್ಯೋಗ ನಗದು ಹಗರಣ
ಪಶ್ಚಿಮ ಬಂಗಾಳದ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಚಟರ್ಜಿ ಅವರನ್ನು ಬಂಧಿಸಲಾಯಿತು. ಅಕ್ರಮ ನೇಮಕಾತಿಗಳಲ್ಲಿ ಹಣದ ಜಾಡು ಹಿಡಿದಿರುವ ತನಿಖೆಗೆ ಸಂಬಂಧಿಸಿದಂತೆ ಚಟರ್ಜಿ ಮತ್ತು ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಇಡಿ ಬಂಧಿಸಿದೆ.
ಅರ್ಪಿತ ಮುಖರ್ಜಿಯವರ ಒಡೆತನದ ಫ್ಲಾಟ್‌ಗಳಿಂದ ಆಭರಣಗಳು, ಚಿನ್ನದ ಗಟ್ಟಿಗಳು, ಆಸ್ತಿಗಳ ದಾಖಲೆಗಳು ಮತ್ತು ಜಂಟಿ ಹೋಲ್ಡಿಂಗ್‌ನಲ್ಲಿರುವ ಕಂಪನಿಯೊಂದರ ಜೊತೆಗೆ 49.80 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿರುವುದಾಗಿ ಇಡಿ ಹೇಳಿಕೊಂಡಿದೆ.
ಇದನ್ನೂ ಓದಿ: ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ


