Homeಮುಖಪುಟಎಂಪುರಾನ್ ವಿವಾದ| ಸಂಘ ಪರಿವಾರದಿಂದ 'ಭಯದ ವಾತಾವರಣ' ನಿರ್ಮಾಣ; ಪಿಣರಾಯಿ ವಿಜಯನ್

ಎಂಪುರಾನ್ ವಿವಾದ| ಸಂಘ ಪರಿವಾರದಿಂದ ‘ಭಯದ ವಾತಾವರಣ’ ನಿರ್ಮಾಣ; ಪಿಣರಾಯಿ ವಿಜಯನ್

- Advertisement -
- Advertisement -

ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್‌ಲಾಲ್ ಅಭಿನಯದ ‘ಎಲ್‌2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ.

ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ನಟ ಮೋಹನ್‌ಲಾಲ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಂಪುರಾನ್ ಚಿತ್ರವನ್ನು ಬೆಂಬಲಿಸಿದ್ದು, “ಚಿತ್ರದ ನಿರ್ಮಾಪಕರ ಕೋಮುವಾದದ ವಿರುದ್ದದ ನಿಲುವಿನ ಬಗ್ಗೆ ಸಂಘಪರಿವಾರ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪಿಣರಾಯಿ ವಿಜಯನ್ “ದೇಶಕಂಡ ಅತ್ಯಂತ ಘೋರ ನರಮೇಧಗಳಲ್ಲಿ ಒಂದನ್ನು ಈ ಚಿತ್ರ ಉಲ್ಲೇಖಿಸುತ್ತದೆ. ಅದು ಸಂಘಪರಿವಾರ ಮತ್ತು ಅದರ ಸೂತ್ರಧಾರರನ್ನು ಕೆರಳಿಸಿದೆ” ಎಂದಿದ್ದಾರೆ.

ಶನಿವಾರ (ಮಾ.29) ಸಂಜೆ ತಿರುವನಂತಪುರಂನಲ್ಲಿ ಪಿಣರಾಯಿ ವಿಜಯನ್ ಕುಟುಂಬ ಸಮೇತರಾಗಿ ಎಂಪುರಾನ್ ಸಿನಿಮಾ ವೀಕ್ಷಿಸಿದ್ದಾರೆ.

ಮಲಯಾಳಂ ಚಲನಚಿತ್ರೋದ್ಯಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಚಿತ್ರ ಎಂದು ಎಂಪುರಾನ್ ಕುರಿತು ಶ್ಲಾಘಿಸಿದ ಪಿಣರಾಯಿ ವಿಜಯನ್, “ಸಂಘ ಪರಿವಾರ ಚಿತ್ರ, ಅದರ ನಟರು ಮತ್ತು ಸಿಬ್ಬಂದಿಯ ವಿರುದ್ಧ ವ್ಯಾಪಕ ದ್ವೇಷ ಹರಡುತ್ತಿರುವ ಹಿನ್ನೆಲೆ ಚಿತ್ರ ವೀಕ್ಷಿಸಿದೆ” ಎಂದಿದ್ದಾರೆ.

ಕೇವಲ ಕಾರ್ಯಕರ್ತರು ಮಾತ್ರವಲ್ಲ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೂಡ ಚಿತ್ರದ ನಿರ್ಮಾಪಕರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿದ್ದಾರೆ. ಚಿತ್ರವನ್ನು ಮರು ಸೆನ್ಸಾರ್ ಮಾಡಲು ಮತ್ತು ದೃಶ್ಯಗಳಿಗೆ ಕತ್ತರಿ ಹಾಕಲು ಒತ್ತಾಯಿಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಸಂಘ ಪರಿವಾರ ಸೃಷ್ಟಿಸಿರುವ ಈ ಭಯದ ವಾತಾವರಣವು ಕಳವಳಕಾರಿ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೋಮುವಾದಿಗಳು, ಕೋಮುವಾದದ ವಿರುದ್ಧ ನಿಲುವು ತೆಗೆದುಕೊಂಡು ಅದರ ಭಯಾನಕತೆಯನ್ನು ಚಿತ್ರಿಸಿದ್ದಾರೆ ಎಂಬ ಕಾರಣಕ್ಕಾಗಿ ಚಿತ್ರ ಮತ್ತು ಅದರ ಕಲಾವಿದರ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.

“ಪ್ರಜಾಪ್ರಭುತ್ವ ಸಮಾಜದಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು. ಕಲಾಕೃತಿಗಳು ಮತ್ತು ಕಲಾವಿದರನ್ನು ನಾಶಮಾಡುವ ಮತ್ತು ನಿಷೇಧಿಸುವ ಹಿಂಸಾತ್ಮಕ ಕರೆಗಳು ಫ್ಯಾಸಿಸ್ಟ್ ಮನಸ್ಥಿತಿಯ ಹೊಸ ಅಭಿವ್ಯಕ್ತಿಗಳಾಗಿವೆ. ಇದು ಪ್ರಜಾಸತ್ತಾತ್ಮಕ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಚಲನಚಿತ್ರಗಳನ್ನು ನಿರ್ಮಿಸುವ, ವೀಕ್ಷಿಸುವ, ಆನಂದಿಸುವ ಮತ್ತು ಅವುಗಳನ್ನು ಮೌಲ್ಯಮಾಪನ ಮಾಡುವ ಅಥವಾ ಅವುಗಳನ್ನು ಒಪ್ಪುವ ಅಥವಾ ಒಪ್ಪದಿರುವ ಹಕ್ಕುಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದ ವಿಜಯನ್, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಲ್ಲಿ ಬೇರೂರಿರುವ ದೇಶದ ಒಗ್ಗಟ್ಟಿನ ಧ್ವನಿಯನ್ನು ಇದಕ್ಕಾಗಿ ಎತ್ತಬೇಕು ಎಂದಿದ್ದಾರೆ.

ಪೃಥ್ವಿರಾಜ್ ನಿರ್ದೇಶನದ ಎಂಪುರಾನ್ ಚಿತ್ರ, ಪೃಥ್ವಿರಾಜ್-ಮೋಹನ್ ಲಾಲ್ ತಂಡ ಯೋಜಿಸಿರುವ ಲೂಸಿಫರ್ ಚಿತ್ರದ ಎರಡನೇ ಭಾಗವಾಗಿದ್ದು, ಬಲಪಂಥೀಯ ರಾಜಕೀಯದ ಟೀಕೆ ಮತ್ತು ಗುಜರಾತ್ ಗಲಭೆಯ ರಹಸ್ಯ ಉಲ್ಲೇಖದಿಂದಾಗಿ ಬಿಸಿ ಚರ್ಚೆಯ ವಿಷಯವಾಗಿದೆ.

ಚಿತ್ರ ಬಿಡುಗಡೆಯಾದ ಗುರುವಾರ, ಸಂಘ ಪರಿವಾರವು ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರದ ವಿರುದ್ಧ ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಮತ್ತು ಎಡಪಂಥೀಯ ತಂಡಗಳು ಬಲಪಂಥೀಯ ರಾಜಕೀಯವನ್ನು ‘ವಿಲನ್‌’ ರೂಪದಲ್ಲಿ ಚಿತ್ರಿಸಿದ್ದಕ್ಕಾಗಿ ಚಿತ್ರವನ್ನು ಶ್ಲಾಘಿಸಿದೆ.

ಗುರುವಾರ ವಿಶ್ವಾದ್ಯಂತ ಬಿಡುಗಡೆಯಾದ ಎಲ್‌2: ಎಂಪುರಾನ್, ಮೊದಲ ದಿನ ಕೇರಳವೊಂದರಲ್ಲೇ 746 ಪರದೆಗಳಲ್ಲಿ 4,500 ಪ್ರದರ್ಶನಗಳನ್ನು ಕಂಡಿದೆ ಎಂದು ವರದಿಯಾಗಿದೆ.

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...