Homeಮುಖಪುಟ'ಎಂಪುರಾನ್' ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

- Advertisement -
- Advertisement -

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ ಲಾಲ್ ನಟಿಸಿರುವ ‘L2:ಎಂಪುರಾನ್’ ಚಿತ್ರವನ್ನು ನಿಷೇಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿಯ ತ್ರಿಶೂರ್ ಜಿಲ್ಲಾ ಸಮಿತಿಯ ಮಾಜಿ ಸದಸ್ಯ ವಿಜೀಶ್ ವೆಟ್ಟತ್ ಅವರನ್ನು ಪಕ್ಷವೂ ತನ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ತಾನು ಈಗಲೂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂದು ಪ್ರತಿಪಾದಿಸಿ ವಿಜೀಶ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು. ಎಂಪುರಾನ್ ವಿರುದ್ಧ ಕೋರ್ಟ್

ಆದಾಗ್ಯೂ, ನ್ಯಾಯಾಲಯದ ಮೆಟ್ಟಿಲೇರಿರುವ ತನ್ನ ನಿರ್ಧಾರ ವೈಯಕ್ತಿಕ ಎಂದು ವಿಜೀಶ್ ಸ್ಪಷ್ಟಪಡಿಸಿದ್ದು, ಪಕ್ಷ ತನ್ನ ವಿರುದ್ಧ ತೆಗೆದುಕೊಂಡ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಚಿತ್ರದ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದಾಗಿಯೂ ಅವರು ದೃಢಪಡಿಸಿದ್ದಾರೆ. ಎಂಪುರಾನ್ ವಿರುದ್ಧ ಕೋರ್ಟ್

ಚಿತ್ರವು ಕೋಮು ಧ್ರುವೀಕರಣದ ಮೂಲಕ ಆರ್ಥಿಕ ಲಾಭವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ವಿಜೀಶ್ ಅವರು ದೂರಿಕೊಂಡಿದ್ದಾರೆ. ಕೋಮು ಧ್ರುವೀಕರಣದ ಕಾರಣಕ್ಕೆ ತಳಮಟ್ಟದಲ್ಲಿ ಕೆಲಸ ಮಾಡುವ ತನ್ನಂತಹ ವ್ಯಕ್ತಿಗಳು ಈ ಚಿತ್ರಕ್ಕೆ ಪ್ರತಿಕ್ರಿಯಿಸುವಂತೆ ಮಾಡಿದೆ ಎಂದು ಅವರು ಸಮರ್ಥಿಸಿಕೊಂಡಿದ್ದು, ಪಕ್ಷದ ಶಿಸ್ತು ಕ್ರಮದ ಹೊರತಾಗಿಯೂ, ತಾನು ಪಕ್ಷದ ನಿಷ್ಠೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಬಿಜೆಪಿ ತ್ರಿಶೂರ್ ಜಿಲ್ಲಾಧ್ಯಕ್ಷ ಜಸ್ಟಿನ್ ಜಾಕೋಬ್ ಅವರು ಪ್ರತಿಕ್ರಿಯಿಸಿ, ವಿಜೀಶ್ ಅವರು ಜಿಲ್ಲಾ ಸಮಿತಿ ಸದಸ್ಯರಂತೆ ನಟಿಸಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದ್ದಾರೆ. ಹಾಗಾಗಿ ಪಕ್ಷವು ಅವರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷವು ತನ್ನ ನೀತಿಗಳಿಗೆ ವಿರುದ್ಧವಾಗಿ ವರ್ತಿಸುವ ಯಾರ ವಿರುದ್ಧವೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಈ ವಿಷಯವನ್ನು ಮತ್ತಷ್ಟು ಪರಿಶೀಲಿಸಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ.

ಈ ನಡುವೆ ಮಂಗಳವಾರ ಕೇರಳ ಹೈಕೋರ್ಟ್ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ನಿರಾಕರಿಸಿದ್ದು, ಸ್ಥಳೀಯ ಬಿಜೆಪಿ ನಾಯಕ ಸಲ್ಲಿಸಿದ ಈ ಅರ್ಜಿಯು ಪ್ರಚಾರ ಆಧಾರಿತ ಕ್ರಮವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು ಅರ್ಜಿದಾರರ ಪ್ರಾಮಾಣಿಕತೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಆದ್ಯತೆಯ ಮೇಲೆ ಪಟ್ಟಿ ಮಾಡಲು ನಿರಾಕರಿಸಿದ್ದಾರೆ.

“ನೀವು ಈ ಎಂಪೂರಾನ್ ಚಿತ್ರವನ್ನು ನೋಡಿದ್ದೀರಾ? ನಿಮ್ಮ ಆಕ್ಷೇಪಣೆ ಏನು? ಅದನ್ನು ಸೆನ್ಸಾರ್ ಮಂಡಳಿ ಪ್ರಮಾಣೀಕರಿಸಿದೆಯೇ?… ನಿಮ್ಮ ಪ್ರಾಮಾಣಿಕತೆಯ ಬಗ್ಗೆ ನನಗೆ ಅನುಮಾನವಿದೆ. ಈ ಚಲನಚಿತ್ರದಿಂದಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕುರಿತು ಒಂದು ದೂರನ್ನು ನನಗೆ ತೋರಿಸಿ. ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ನನಗೆ ತೋರಿಸಿ. ಇವೆಲ್ಲವೂ ಪ್ರಚಾರ ಆಧಾರಿತ ಅರ್ಜಿಗಳಲ್ಲದೆ ಬೇರೇನೂ ಅಲ್ಲ” ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...