Homeಮುಖಪುಟಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

- Advertisement -
- Advertisement -

ಅತ್ಯಾಚಾರಿಗಳನ್ನು “ಪೊಲೀಸ್ ಎನ್‌ಕೌಂಟರ್” ಮೂಲಕ ಶಿಕ್ಷಿಸಬೇಕು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಳವಡಿಸಿಕೊಂಡಿರುವ ಮಾದರಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಹೇಳಿದ್ದಾರೆ.

ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದ ನಂತರ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಸರಣಿ ಅತ್ಯಾರ ಪ್ರಕರಣಗಳನ್ನು ಉಲ್ಲೇಖಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕೇವಲ ಎರಡು ದಿನಗಳಲ್ಲಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗೆ ಮತ್ತಿಗಾರದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿಂದೆ ಕಲಿಯಾಗಂಜ್ ಮತ್ತು ಹಂಸಖಾಲಿಯಲ್ಲಿ ಇಂತಹ ಘಟನೆಗಳು ನಡೆದಿದ್ದವು. ಕಾನೂನು ಮತ್ತು ಸುವ್ಯವಸ್ಥೆ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಸೋಮವಾರ ಸಿಲಿಗುರಿ ಜಿಲ್ಲೆಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ, ಶಂಕಿತ ಮೊಹಮ್ಮದ್ ಅಬ್ಬಾಸ್ ಅವರ ಮನೆಯನ್ನು ಗುಂಪೊಂದು ಧ್ವಂಸಗೊಳಿಸಿದ್ದು, ಅವರನ್ನು ಬಂಧಿಸಲಾಗಿದೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಘಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಗುರುವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ”ದುಷ್ಕರ್ಮಿಗಳ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ. ಬದಲಾಗಿ ಹಿಂದುತ್ವ ಸಂಘಟನೆಯ ಸದಸ್ಯರ ಮೇಲೆ ಲಾಠಿ ಚಾರ್ಜ್ ಮಾಡಿ ಬಂಧನ ಮಾಡಿರುವುದು ದಿಗಿಲು ಹುಟ್ಟಿಸಿದೆ” ಎಂದು ಅಧಿಕಾರಿ ಹೇಳಿದ್ದಾರೆ.

”ಈ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಕಟ್ಟುನಿಟ್ಟಾದ ಆಡಳಿತಗಾರರ ಅಗತ್ಯವಿದೆ. ಇಂತಹ ಅಪರಾಧಗಳನ್ನು ಮಾಡುವವರಿಗೆ ಬದುಕುವ ಹಕ್ಕಿಲ್ಲ. ಅಗತ್ಯವಿದ್ದರೆ ಅವರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಬೇಕು” ಎಂದು ಸುವೇಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ನಂತರ ಕಾನೂನು ಉಲ್ಲಂಘಿಸಿದ ಮತ್ತು ಪೊಲೀಸರಿಂದ ಕಾನೂನುಬಾಹಿರ ಹತ್ಯೆಗಳ ಹೆಚ್ಚಾಗಿವೆ ಎನ್ನುವ ಆರೋಪವಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದವರ ಮನೆಗಳನ್ನು ಅಕ್ರಮ ಕಟ್ಟಡದ ಹೆಸರಿನಲ್ಲಿ ಬುಲ್ಡೋಜರ್‌ನಿಂದ ಕೆಡವಲಾಗಿದೆ. ಆದಿತ್ಯನಾಥ್ ಅವರ ಈ ಕ್ರಮವನ್ನು ಬಿಜೆಪಿ ನಾಯಕರು ಮತ್ತು ಹಿಂದುತ್ವವಾದಿಗಳು ಹೊಗಳಿದ್ದಾರೆ.

ಸುವೇಂದು ಅಧಿಕಾರಿ ಅವರು ಎನ್‌ಕೌಂಟರ್‌ ಕ್ರಮವನ್ನು ಪ್ರತಿಪಾದಿಸಿದ್ದಕ್ಕಾಗಿ ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿದೆ.

”ಸುವೇಂದು ಅಧಿಕಾರಿ ಒಬ್ಬ ಜನಪ್ರತಿನಿಧಿಯಾಗಿರುವುದರಿಂದ ಮತ್ತು ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಾಗಿದ್ದು, ದೇಶದ ಕಾನೂನನ್ನು ಮೀರಿ ಹೋಗುವಂತಿಲ್ಲ” ಎಂದು ಟಿಎಂಸಿ ವಕ್ತಾರ ಜಾಯ್ ಪ್ರಕಾಶ್ ಮಜುಂದಾರ್ ಹೇಳಿದ್ದಾರೆ.

”ಅವರು ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದ ಪ್ರತಿಪಾದಕರಾಗಿದ್ದಾರೆ, ಇದು ಪ್ರಜಾಪ್ರಭುತ್ವ ಸಂಪ್ರದಾಯಗಳ ವಿರುದ್ಧ ಸಮಾಜದಲ್ಲಿ ಭಯ ಮತ್ತು ಅರಾಜಕತೆಯನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

”ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದಿಂದ ಗುರುತಿಸಲ್ಪಟ್ಟಿರುವ ಆದಿತ್ಯನಾಥ್ ಅವರ ಆಡಳಿತವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಮಜುಂದಾರ್ ಹೇಳಿದರು.

ಇದನ್ನೂ ಓದಿ: ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಹಿರಿಯ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...