Homeಮುಖಪುಟಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ :...

ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಕೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.3) ಮಹತ್ವದ ತೀರ್ಪು ಪ್ರಕಟಿಸಿದೆ.

ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು. ಕೆಳ ವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ದಿ ವೈರ್‌ನಲ್ಲಿ ಪ್ರಕಟವಾದ ಲೇಖನವನ್ನು ಆಧರಿಸಿ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ತೀರ್ಪು ನೀಡಿದೆ.

ಕೆಳ ವರ್ಗದ ಕೈದಿಗಳನ್ನು ಸ್ವಚ್ಛತೆ ಮತ್ತು ಕಸಗುಡಿಸಲು ನಿಯೋಜಿಸುವುದು. ಉನ್ನತ ಜಾತಿಯ ಕೈದಿಗಳನ್ನು ಅಡುಗೆ ಮಾಡಲು ನಿಯೋಜಿಸುವುದು ನೇರ ಜಾತಿ ತಾರತಮ್ಯವಾಗಿದೆ. ಇದು ಆರ್ಟಿಕಲ್ 15 ರ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರಳ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಗೆ, ಆತನ ಜಾತಿಯವರು ಮಾಡದ ಕೆಲಸವನ್ನು ನೀಡಬೇಕಾಗಿಲ್ಲ ಎಂಬ ಉತ್ತರ ಪ್ರದೇಶದ ಜೈಲು ಕೈಪಿಡಿಯ ನಿಯಮಕ್ಕೆ ನ್ಯಾಯಾಲಯ ಆಕ್ಷೇಪಣೆ ವ್ಯಕ್ತಪಡಿಸಿದೆ.

ಸಣ್ಣ ಕೆಲಸಗಳನ್ನು ಯಾರು ಮಾಡಬೇಕು, ಯಾರು ಮಾಡಬಾರದು ಎಂದು ನಿರ್ಧರಿಸಲು, ಇಲ್ಲಿ ಯಾವುದೇ ಗುಂಪು ಸ್ಕ್ಯಾವೆಂಜರ್ ವರ್ಗವಾಗಿ ಹುಟ್ಟಿಲ್ಲ. ಹಾಗಾಗಿ, ಕಸ ಗುಡಿಸುವ ಕೆಲಸ ಯಾರು ಮಾಡಬೇಕು, ಅಡುಗೆ ಕೆಲಸ ಯಾರು ಮಾಡಬೇಕು ಎಂದು ಜಾತಿ, ವರ್ಗ ನೋಡಿ ನಿರ್ಧರಿಸುವುದು ಅಸ್ಪೃಶ್ಯತೆಯ ಆಚರಣೆಯಾಗಿದೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಡಿನೋಟಿಫೈಡ್ ಬುಡಕಟ್ಟುಗಳನ್ನು ಉಲ್ಲೇಖಿಸುವ ರಾಜಸ್ಥಾನದ ಜೈಲು ಕೈಪಿಡಿಯ ನಿಬಂಧನೆಗಳನ್ನು ಕೂಡ ನ್ಯಾಯಾಲಯ ಎತ್ತಿ ತೋರಿಸಿದೆ.

ಜಾತಿ ಆಧಾರಿತ ಕೆಲಸದ ಹಂಚಿಕೆಯನ್ನು ಕೊನೆಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜೈಲು ಕೈಪಿಡಿಗಳನ್ನು ಪರಿಷ್ಕರಿಸುವಂತೆ ಕೋರ್ಟ್ ನಿರ್ದೇಶಿಸಿದೆ. ಜಾತಿ ಆಧಾರಿತ ಪ್ರತ್ಯೇಕತೆಯನ್ನು ಪರಿಹರಿಸಲು ತನ್ನ ಮಾದರಿ ಜೈಲು ನಿಯಮಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲು ಕೈಪಿಡಿಗಳಲ್ಲಿ ವಾಡಿಕೆಯ ಅಪರಾಧಿಗಳ ಉಲ್ಲೇಖವು ಅವರ ಜಾತಿ ಅಥವಾ ಪಂಗಡವನ್ನು ಉಲ್ಲೇಖಿಸದೆ ಶಾಸಕಾಂಗ ವ್ಯಾಖ್ಯಾನಗಳಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಮುಖ್ಯವಾಗಿ, ಜೈಲು ರಿಜಿಸ್ಟರ್‌ಗಳಲ್ಲಿನ ಜಾತಿ ಕಾಲಂಗಳನ್ನು ಅಳಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತೀರ್ಪು ಪ್ರಕಟಿಸುವ ಮೊದಲು, ಸಿಜೆಐ ಚಂದ್ರಚೂಡ್ ಅವರು “ಸುಂದರವಾಗಿ ಸಂಶೋಧಿಸಲಾದ ಅರ್ಜಿ” ಎಂದು ಹೇಳಿದ್ದು, ವಿಷಯವನ್ನು ಪರಿಣಾಮಕಾರಿಯಾಗಿ ವಾದಿಸಿದಕ್ಕಾಗಿ ವಕೀಲರನ್ನು ಅಭಿನಂದಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ‘ಭಾರತದ ಜೈಲು ಕೈಪಿಡಿಗಳ ಮೂಲಕ ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯ ನಡೆಸಲಾಗ್ತಿದೆ’ ಎಂಬ ತನ್ನ ತನಿಖಾ ವರದಿ ಆಧರಿಸಿ ದಿ ವೈರ್‌ನ ಪತ್ರಕರ್ತೆ ಸುಕನ್ಯಾ ಶಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಕೈದಿಗಳನ್ನು ಜಾತಿ ಆಧಾರದ ಮೇಲೆ ಪ್ರತ್ಯೇಕಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಕೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ಸುಕನ್ಯಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಜೈಲುಗಳಲ್ಲಿ ಜಾತಿ ಆಧಾರಿತ ಕೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಕೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದಿದ್ದರು.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಕೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...