Homeಕರ್ನಾಟಕವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

- Advertisement -
- Advertisement -

ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಿ, ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಶನಿವಾರ ಗಡುವು ನಿಗದಿಗೊಳಿಸಿದ್ದಾರೆ. ಮೇ 20ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ಸರ್ಕಾರ ವಿತರಿಸಲಿದ್ದು, ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದ್ದಾರೆ.

“ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,614 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 1400 ಗ್ರಾಮಗಳ ರಚನೆ ಆಗಿದ್ದರೆ, ಕಳೆದ ಎರಡು ವರ್ಷದ ಅವಧಿಯಲ್ಲಿ 1,200 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಇನ್ನೂ 1014 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಬಾಕಿ ಇದೆ” ಎಂದು ಹೇಳಿದ್ದಾರೆ.

ಮುಂದುವರೆದು ”ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಆರಂಭಿಸುವುದಾಗಿ ಘೋಷಿಸಿದೆ. ಜನಗಣತಿ ಆರಂಭವಾದರೆ ಜುಲೈ ತಿಂಗಳಿನಿಂದ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಲು ಅವಕಾಶ ನೀಡುವುದಿಲ್ಲ. ಪರಿಣಾಮ ಬಡವರ ಅತಿಮುಖ್ಯ ಕೆಲಸಕ್ಕೆ ತೊಡಕುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಇರುವ 1014 ಗ್ರಾಮಗಳಿಗೂ ಇದೇ ವರ್ಷದ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಜುಲೈ ನಂತರ ಹಕ್ಕುಪತ್ರ ವಿತರಿಸಿ. ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮಾತಿನಂತೆ ಈ ಕೆಲಸವನ್ನು ಈ ವರ್ಷಾಂತ್ಯದೊಳಗೆ ಮುಗಿಸಿ” ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಮಯದ ಗಡುವು ನಿಗದಿಪಡಿಸಿದ್ದಾರೆ.

ಬಡವರ ಕೆಲಸವೇ ಸರ್ಕಾರದ ಧ್ಯೇಯ!

ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಎಲ್ಲಾ ಕಾಲದಲ್ಲೂ ಸಮಾಜದ ಅತ್ಯಂತ ಹಿಂದುಳಿದವರು ಹಾಗೂ ಕಡು ಬಡವರ ಪರ ಕೆಲಸ ಮಾಡುವುದೇ ಸರ್ಕಾರದ ಧ್ಯೇಯ. ಆ ನಿಟ್ಟಿನಲ್ಲಿ ಆಡಳಿತ ವರ್ಗವೂ ಸಹಕರಿಸಬೇಕು ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದ್ದಾರೆ.

ಈ ತಿಂಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ನಾಗರೀಕ ಸಮಾಜದಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಹಾಗೂ ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕೆಲಸ ಮಾಡಿ ಆ ಮೂಲಕ ಎರಡು ವರ್ಷ ಪೂರೈಸಿದ ಹರ್ಷಾಚರಣೆ ನಡೆಸಿದರೆ ಮಾತ್ರ ಆ ಕಾರ್ಯಕ್ರಮ ಅರ್ಥಪೂರ್ಣ. ಆ ನಿಟ್ಟಿನಲ್ಲಿ ಮೇ. 20ಕ್ಕೆ ಹೊಸಪೇಟೆಯಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.

“ಕಾರ್ಯಕ್ರಮದ ಭಾಗವಾಗಿ ಈಗಾಗಲೇ ಅಂತಿಮ ಅಧಿಸೂಚನೆ ಆಗಿರುವ 2600 ಕಂದಾಯ ಗ್ರಾಮಗಳ 1.41 ಲಕ್ಷ ಫಲಾನುಭವಿಗಳ ಪೈಕಿ 92,719 ಜನ ಹಕ್ಕುಪತ್ರ ಸಿದ್ದವಾಗಿದೆ. ಇನ್ನೂ 50 ಸಾವಿರ ಹಕ್ಕುಪತ್ರಗಳು ಬಾಕಿ ಇದ್ದು, ಬಾಕಿ ಹಕ್ಕುಪತ್ರಗಳನ್ನೂ ಶೀಘ್ರ ಸಿದ್ದಪಡಿಸಿ. ತುಮಕೂರು, ಚಿತ್ರದುರ್ಗ, ಬೆಳಗಾವಿ, ಹಾವೇರಿ, ರಾಯಚೂರು, ಬಾಗಲಕೋಟೆ, ವಿಜಯನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಬಾಕಿ ಇರುವ ಅಥವಾ ಬಿಟ್ಟುಹೋಗಿರುವ ಗ್ರಾಮಗಳನ್ನು ಗುರುತಿಸಿದರೆ ಇನ್ನೂ 30 ರಿಂದ 35 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ಸಿದ್ದಪಡಿಸಬೇಕಾಗಬಹುದು. ಆ ಕೆಲಸವನ್ನೂ ಸಹ ಶೀಘ್ರ ಪೂರ್ಣಗೊಳಿಸಿ” ಎಂದು ಅವರು ಹೇಳಿದ್ದಾರೆ.

“ಹಾಡಿ, ಹಟ್ಟಿ, ತಾಂಡಾಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇತ್ತೀಚೆಗೆ ಕಳೆದೊಂದು ದಶಕಗಳಿಂದ ರಾಜ್ಯ ಸರ್ಕಾರ ಗ್ರಾಮಠಾಣಾ ಗಡಿಗಳನ್ನೂ ಮೀರಿ ಹಾಡಿ, ಹಟ್ಟಿ, ತಾಂಡಾಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯ ನೀಡಿದ್ದೇವೆ. ಈ ಹಿಂದೆ ಶಾಲೆ, ನೀರು ಸರಬರಾಜು ಸಹ ನೀಡುತ್ತಿರಲಿಲ್ಲ ಎಂಬುದೇ ಕಟು ವಾಸ್ತವ. ಇಂತಹ ಜನರಿಗೆ ಶಾಶ್ವತ ಪರಿಹಾರ ನೀಡಿದರೆ ಮಾತ್ರ ಸರ್ಕಾರ ಎರಡು ವರ್ಷ ಪೂರೈಸಿದ್ದೂ ಅರ್ಥಪೂರ್ಣವಾಗುತ್ತದೆ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳೂ ಬಡವರ ಕೆಲಸಗಳನ್ನು ಆದ್ಯತೆ ಮೇಲೆ ಮಾಡಬೇಕು” ಎಂದು ಸೂಚಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...