Homeಮುಖಪುಟಪ್ರತಿಭಟನೆ ಅಂತ್ಯಗೊಳಿಸಿ ಮಾತುಕತೆಗೆ ಬನ್ನಿ: ರೈತರಲ್ಲಿ ಕೇಂದ್ರ ಕೃಷಿ ಸಚಿವರ ಮನವಿ

ಪ್ರತಿಭಟನೆ ಅಂತ್ಯಗೊಳಿಸಿ ಮಾತುಕತೆಗೆ ಬನ್ನಿ: ರೈತರಲ್ಲಿ ಕೇಂದ್ರ ಕೃಷಿ ಸಚಿವರ ಮನವಿ

ಕೇಂದ್ರ ಸರ್ಕಾರ ಅಂಗೀಕರಿಸಿರುವ ಹೊಸ ಕೃಷಿ ಕಾಯ್ದೆಗಳು ರೈತರ ಬದುಕಿನಲ್ಲಿ ಹೊಸ ಕ್ರಾಂತಿ ಉಂಟುಮಾಡಲಿವೆ ಎಂದು ತೋಮರ್ ಹೇಳಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಸಿಡಿದೆದ್ದು ದೆಹಲಿ ಚಲೋ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಇಂದು ಸಹ ಅವರ ಮೇಲೆ ಅಶ್ರವಾಯು, ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ “ಮುಂದಿನ ವಾರ ಮಾತುಕತೆ ನಡೆಸುತ್ತೇವೆ, ಈಗ ದಯವಿಟ್ಟು ಪ್ರತಿಭಟನೆ ಅಂತ್ಯಗೊಳಿಸಿ” ಎಂದು ಮನವಿ ಮಾಡಿದ್ದಾರೆ.

ರೈತರೊಂದಿಗೆ ಮಾತುಕತೆ ನಡೆಸಲು ನಮ್ಮ ಸರ್ಕಾರ ಸದಾ ಸಿದ್ದವಿದೆ. ಡಿಸೆಂಬರ್ ಮೂರರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು ಅದಕ್ಕೆ ರೈತ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಿದ್ದೇವೆ. ಈ ಚಳಿ ಮತ್ತು ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ರೈತರು ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ನಿನ್ನೆ ಮತ್ತು ಇಂದು ಎರಡು ದಿನ 500ಕ್ಕೂ ಹೆಚ್ಚು ರೈತಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದರು. ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಮಸೂದೆಗಳು ಕಾರ್ಪೋರೇಟ್‌ಗಳ ಪರವಿದ್ದು ರೈತರನ್ನು ಬೀದಿಗೆ ತಳ್ಳುತ್ತವೆ ಮತ್ತು ಕನಿಷ್ಠ ಬೆಂಬಲ ಬೆಲೆ ಕಿತ್ತಕೊಳ್ಳುತ್ತವೆ ಎಂಬುದು ರೈತರ ಆತಂಕ. ಆದರೆ ದೆಹಲಿ ಪೊಲೀಸರು ಪ್ರತಿಭಟನೆ ನಡೆಯದಂತೆ ಲಾಠೀ ಚಾರ್ಜ್ ಮಾಡಿದ್ದಲ್ಲದೇ ಅಶ್ರವಾಯು ಮತ್ತು ಜಲಫಿರಂಗಿ ಸಿಡಿಸಿ ರೈತರ ಮೇಲೆ ದೌರ್ಜನ್ಯವೆಸಗಿದ್ದರು.

ಕೇಂದ್ರ ಸರ್ಕಾರ ಅಂಗೀಕರಿಸಿರುವ ಹೊಸ ಕೃಷಿ ಕಾಯ್ದೆಗಳು ರೈತರ ಬದುಕಿನಲ್ಲಿ ಹೊಸ ಕ್ರಾಂತಿ ಉಂಟುಮಾಡಲಿವೆ ಎಂದು ತೋಮರ್ ಹೇಳಿದ್ದಾರೆ. ಆದರೆ ರೈತರು ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು ಮತ್ತು ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕೆಂದು ಪಟ್ಟು ಹಿಡಿದಿವೆ.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಮಣಿದ ಸರ್ಕಾರ: ಕೊನೆಗೂ ದೆಹಲಿ ಪ್ರವೇಶಿಸಲು ರೈತರಿಗೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...