Homeಮುಖಪುಟ'ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ': ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

‘ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ’: ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

- Advertisement -
- Advertisement -

ಸಶಸ್ತ್ರ ಪಡೆಗಳ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ (ಒಆರ್‌ಒಪಿ) ಅಡಿಯಲ್ಲಿ ಬಾಕಿ ಮೊತ್ತವನ್ನು ಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ವಿಚಾರಣೆ ನಡೆಸಿದರು. ಈ ವೇಳೆ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಮುಚ್ಚಿದ ಲಕೋಟೆಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುವ ಅಭ್ಯಾಸವನ್ನು ಟೀಕಿಸಿದ್ದಾರೆ.

ಪಿಂಚಣಿ ಪಾವತಿ ಕುರಿತು ರಕ್ಷಣಾ ಸಚಿವಾಲಯದ ನಿರ್ಧಾರವನ್ನು ತಿಳಿಸುವ ಭಾರತದ ಅಟಾರ್ನಿ ಜನರಲ್ ಸಲ್ಲಿಸಿದ ಮುಚ್ಚಿದ ಕವರ್ ಲಕೋಟೆಯನ್ನು ಸ್ವೀಕರಿಸಲು ನ್ಯಾಯಮೂರ್ತಿ ಚಂದ್ರಚೂಡ್ ನಿರಾಕರಿಸಿದರು. ಅದನ್ನು ಬಹಿರಂಗವಾಗಿ ಓದಬೇಕು ಇಲ್ಲವೇ ಮರಳಿ ತಗೆದುಕೊಂಡು ಹೋಗುವಂತೆ ಸರ್ಕಾರದ ಉನ್ನತ ವಕೀಲರಿಗೆ ವಿರುದ್ಧ ಗರಂ ಆದರು.

”ನಾವು ಯಾವುದೇ ಗೌಪ್ಯ ದಾಖಲೆಗಳನ್ನು ಅಥವಾ ಮುಚ್ಚಿದ ಕವರ್‌ಗಳನ್ನು ತೆಗೆದುಕೊಳ್ಳುವುದಿಲ್ಲ. ನಾನು ಇದಕ್ಕೆ ವೈಯಕ್ತಿಕವಾಗಿ ವಿರುದ್ಧವಾಗಿದ್ದೇನೆ. ನ್ಯಾಯಾಲಯದಲ್ಲಿ ಪಾರದರ್ಶಕತೆ ಇರಬೇಕು. ಇದು ಆದೇಶಗಳನ್ನು ಅನುಷ್ಠಾನಗೊಳಿಸುವ ಜಾಗ, ಇಲ್ಲಿ ಗೌಪ್ಯತೆ ಯಾಕೆ? ನಾನು ಮುಚ್ಚಿದ ಕವರ್ ವ್ಯವಹಾರವನ್ನು ಕೊನೆಗೊಳಿಸಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇದನ್ನೂ ಓದಿ: ಒಂದು ಶ್ರೇಣಿ ಒಂದು ಪಿಂಚಣಿ: ನ್ಯಾಯಾಂಗ ನಿಂದನೆ ನೋಟಿಸ್‌ ನೀಡುವುದಾಗಿ ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ಮುಚ್ಚಿದ ಲಕೋಟೆಯನ್ನು ಸ್ವೀಕರಿಸುವ ಪದ್ದತಿಯನ್ನು ಸುಪ್ರೀಂ ಕೋರ್ಟ್ ಅನುಸರಿಸಿದರೆ, ಹೈಕೋರ್ಟ್‌ಗಳು ಸಹ ಅದನ್ನೇ ಅನುಸರಿಸುತ್ತವೆ ಎಂದು ಅವರು ಅಟಾರ್ನಿ ಜನರಲ್‌ಗೆ ತಿಳಿಸಿದರು.

ಮುಚ್ಚಿದ ಲಕೋಟೆ ಸ್ವೀಕರಿಸುವ ಪದ್ದತಿಯು ನ್ಯಾಯಯುತ ನ್ಯಾಯದ ಮೂಲಭೂತ ಪ್ರಕ್ರಿಯೆಗೆ ಮೂಲಭೂತವಾಗಿ ವಿರುದ್ಧವಾಗಿದೆ ಮುಖ್ಯ ನ್ಯಾಯಾಧೀಶರು ಹೇಳಿದರು.

”ಮೂಲಗಳ ಬಗ್ಗೆ ಅಥವಾ ಇನ್ನೊಬ್ಬರ ಜೀವಕ್ಕೆ ಅಪಾಯವನ್ನುಂಟುಮಾಡಿದಾಗ ಮಾತ್ರ ಆ ರೀತಿ ಮುಚ್ಚಿದ ಲಕೋಟೆಯನ್ನು ಬಳಸಬಹುದು” ಎಂದು ಡಿವೈ ಚಂದ್ರಚೂಡ್ ಹೇಳಿದರು.

ಮಾಜಿ ಸೈನಿಕರಿಗೆ ಒಂದು ಶ್ರೇಣಿ ಒಂದು ಪಿಂಚಣಿ ಅಡಿಯಲ್ಲಿ ಬಾಕಿ ಪಾವತಿಯಲ್ಲಿ ಸರ್ಕಾರದ ನಿಧಾನಗತಿಯನ್ನು ನ್ಯಾಯಾಲಯವು ಗಮನಿಸಿದೆ. ಬಾಕಿ ಪಿಂಚಣಿ ಹಣವನ್ನು ಕಂತುಗಳಲ್ಲಿ ಪಾವತಿಸುವುದಾಗಿ ಸರ್ಕಾರ ಹೇಳಿತ್ತು. ಅದು ಯಾವ ಕ್ರಮದಲ್ಲಿ ಪಾವತಿಸುತ್ತಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ನಂತರ ಅಟಾರ್ನಿ ಜನರಲ್ ಅಬರು ಮುಚ್ಚಿದ ಲಕೋಟೆ ತೆರೆದು ವರದಿಯನ್ನು ಓದಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...