Homeಮುಖಪುಟರೈತ ಹೋರಾಟ ಅಂತ್ಯಗೊಳಿಸಿ, ಮನೆಗೆ ತೆರಳಿ: ನರೇಂದ್ರ ಸಿಂಗ್ ತೋಮರ್ ಮನವಿ

ರೈತ ಹೋರಾಟ ಅಂತ್ಯಗೊಳಿಸಿ, ಮನೆಗೆ ತೆರಳಿ: ನರೇಂದ್ರ ಸಿಂಗ್ ತೋಮರ್ ಮನವಿ

- Advertisement -
- Advertisement -

ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ರೈತ ಪ್ರತಿಭಟನೆಯನ್ನು ಅಂತ್ಯಗೊಳಿಸಿ, ತಮ್ಮ ಮನೆಗಳಿಗೆ ಮರಳುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಮನವಿ ಮಾಡಿದ್ದಾರೆ.

ಗ್ವಾಲಿಯರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದಿದ್ದಾರೆ. ದೆಹಲಿ ಗಡಿಗಳಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರಮುಖ ಬೇಡಿಕೆ ಈಡೇರಿಸಿದ್ದಾರೆ. ಎಂಎಸ್‌ಪಿ, ಬೆಳೆ ವೈವಿಧ್ಯೀಕರಣ ಹಾಗೂ ಶೂನ್ಯ ಬಂಡವಾಳ ಕೃಷಿಯಂತಹ ವಿಷಯಗಳ ಕುರಿತು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.

‘ಈಗ ಯಾವುದೇ ಸಮಸ್ಯೆ ಉಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ರೈತ ಸಹೋದರರು ಆಂದೋಲನವನ್ನು ಕೊನೆಗೊಳಿಸಬೇಕು ಮತ್ತು ತಮ್ಮ ದಿನನಿತ್ಯದ ಕೆಲಸದಲ್ಲಿ ತೊಡಗಬೇಕು’ ಎಂದು ತೋಮರ್ ಕೇಳಿಕೊಂಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತ್ರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದು, ಸರ್ಕಾರ ಮತ್ತು ರೈತರ ನಡುವೆ ಜಟಾಪಟಿ ಮುಂದುವರಿದಿದೆ.

ಈ ನಡುವೆ ರೈತರು ಎಂಎಸ್‌ಪಿ ಕಾನೂನು ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲು ಐದು ಜನರ ಪಟ್ಟಿ ಅಂತಿಮಗೊಳಿಸಿದ್ದಾರೆ.  ರೈತ ಮುಖಂಡರಾದ ಗುರ್ನಮ್ ಸಿಂಗ್ ಚದುನಿ, ಬಲ್ಬೀರ್ ಸಿಂಗ್ ರಾಜೇವಾಲ್, ಯುದ್ಧವೀರ್ ಸಿಂಗ್, ಅಶೋಕ್ ಧವಳೆ ಮತ್ತು ಶಿವಕುಮಾರ್ ಕಕ್ಕಾರವರು ರೈತರನ್ನು ಪ್ರತಿನಿಧಿಸಲಿದ್ದಾರೆ ಎಂದು ಎಸ್‌ಕೆಎಂ ತನ್ನ ಸಭೆಯಲ್ಲಿ ನಿರ್ಧರಿಸಿದೆ.

ಡಿಸೆಂಬರ್ 4, ಶನಿವಾರ ನಡೆದ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಎಂಎಸ್ಪಿ, ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ಹೋರಾಟ ಮುಂದುವರೆಸುವುದಾಗಿ ತಿಳಿಸಿದೆ.


ಇದನ್ನೂ ಓದಿ: MSP ಸೇರಿ ಇತರ ಹಕ್ಕೊತ್ತಾಯಗಳ ಕುರಿತು ಸರ್ಕಾರದೊಂದಿಗೆ ಮಾತುಕತೆಗೆ 5 ರೈತ ಮುಖಂಡರನ್ನು ಹೆಸರಿಸಿದ SKM

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

0
ಕೋವಿಶೀಲ್ಡ್ ಲಸಿಕೆಯ "ಅಡ್ಡಪರಿಣಾಮಗಳ" ವಿವಾದದ ಮಧ್ಯೆ ಲಸಿಕೆ ತಯಾರಕರಿಂದ "ರಾಜಕೀಯ ದೇಣಿಗೆಗಳನ್ನು" ಪಡೆಯಲು 'ಬಿಜೆಪಿ' ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ...