Homeರಾಜಕೀಯಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

- Advertisement -
- Advertisement -

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ನವೆಂಬರ್ 3 ರಂದು ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಗುರುವಾರ ರಾಜ್ಯ ರಾಜಧಾನಿ ರಾಂಚಿಯಲ್ಲಿರುವ ತನ್ನ ಪ್ರಾದೇಶಿಕ ಕಚೇರಿಯಲ್ಲಿ  ಇಡಿ ಮುಂದೆ ಹಾಜರಾಗುವಂತೆ ಮುಖ್ಯಮಂತ್ರಿ ಸೋರೆನ್ ಅವರನ್ನು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ಪ್ರಶ್ನಿಸಲು ಮತ್ತು ದಾಖಲಿಸಲು ಇಡಿ ಬಯಸಿದೆ. ಪ್ರಸ್ತುತ ಪ್ರಕರಣದಲ್ಲಿ ಇಡಿ ಈ ಹಿಂದೆ ಅವರ ರಾಜಕೀಯ ಸಹಾಯಕ ಪಂಕಜ್ ಮಿಶ್ರಾ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು.

ಜಾರ್ಖಂಡ್‌ ರಾಜ್ಯದಲ್ಲಿ ಇದುವರೆಗೆ 1 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಅಪರಾಧಗಳ ಆದಾಯವನ್ನು ಗುರುತಿಸಲಾಗಿದೆ ಎಂದು ಇಡಿ ಹೇಳಿದೆ.

ಇದನ್ನೂ ಓದಿ: ಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

ಅಕ್ರಮ ಗಣಿಗಾರಿಕೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರ್ಖಂಡ್‌ನ ಸಾಹಿಬ್‌ಗಂಜ್, ಬರ್ಹೈತ್, ರಾಜ್‌ಮಹಲ್, ಮಿರ್ಜಾ ಚೌಕಿ ಮತ್ತು ಬರ್ಹರ್ವಾದಲ್ಲಿನ 19 ಸ್ಥಳಗಳನ್ನು ಒಳಗೊಂಡಿರುವ ಮಿಶ್ರಾ ಮತ್ತು ಅವರ ಸಹಚರರ ಮೇಲೆ ಜುಲೈ 8 ರಂದು ಇಡಿ ದಾಳಿ ನಡೆಸಿದ ನಂತರ ತನಿಖೆ ಪ್ರಾರಂಭವಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...