Homeಮುಖಪುಟಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

ಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

- Advertisement -
- Advertisement -

ತನ್ನ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿವಸ್ತ್ರಳಾಗಿ ಪ್ರತಿಭಟಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ ಎಂದು indianexpress.com ವರದಿ ಮಾಡಿದೆ.

ಆಗ್ರಾದ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಿರುವ ಕಾಲೇಜಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದಳು. ಪೊಲೀಸರು ಪ್ರಕರಣ ದಾಖಲಿಸಿಕೊಂಡರೂ ಆರೋಪಿಯನ್ನು ಬಂಧಿಸಿರಲಿಲ್ಲ. ಇದರಿಂದ ಹತಾಶಳಾದ ಆಕೆ, ವಿವಸ್ತ್ರಳಾಗಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಕೊನೆಗೂ 17 ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಿ, ಮೂರು ದಿನಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ವರದಿ ಹೇಳಿದೆ.

ಬಂಧಿತ ಆರೋಪಿ ಜಮ್ಮುವಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಟೆಕ್ ಓದುತ್ತಿರುವ 22 ವರ್ಷದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿರುವ ಲಕ್ನೋ ಮೂಲದ ವಿದ್ಯಾರ್ಥಿನಿ, ಆಗಸ್ಟ್ 10ರಂದು ಸಂಜೆ ಆರೋಪಿ ಚಲಿಸುವ ಕಾರಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಿದ್ದಳು. ಆಗಸ್ಟ್ 11ರಂದು ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವ ಗೋಜಿಗೆ ಹೋಗಿರಲಿಲ್ಲ. ವಿದ್ಯಾರ್ಥಿನಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ ಸಮಯದಲ್ಲಿ ಆಕೆ ಹೇಳಿದ ಆರೋಪಿಯ ಮೊಬೈಲ್ ಲೊಕೇಶನ್ ಜಮ್ಮುವಿನಲ್ಲಿ ತೋರಿಸುತಿತ್ತು ಎಂದು ಪೊಲೀಸರೇ ಸಮಜಾಯಿಸಿ ನೀಡಿದ್ದರು.

ಬಳಿಕ, ಸಂತ್ರಸ್ತೆ ಆರೋಪಿಯನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ಅನೇಕ ಬಾರಿ ಪೊಲೀಸ್ ಠಾಣೆಗೆ ಹೋಗಿದ್ದಳು. ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದಳು. ಆದರೂ, ಆಕೆಗೆ ಯಾವುದೇ ಸಹಕಾರ ಸಿಕ್ಕಿರಲಿಲ್ಲ. ಕೊನೆಗೆ ಹತಾಶಳಾಗಿ ವಿವಸ್ತ್ರಳಾಗುವ ನಿರ್ಧಾರಕ್ಕೆ ಬಂದಳು ಎಂದು ವರದಿ ಹೇಳಿದೆ.

“ನಾವು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಆಗ್ರಾಕ್ಕೆ ಕರೆ ತಂದಿದ್ದೇವೆ. ಆತ ಕಳೆದ ಕೆಲ ತಿಂಗಳುಗಳಿಂದ ವಿದ್ಯಾರ್ಥಿನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದುದು ನಮಗೆ ಗೊತ್ತಾಗಿದೆ. ಆತನನ್ನು ಬಂಧಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಉತ್ತರ ಪ್ರದೇಶದ ಗಾಝಿಪುರ ಜಿಲ್ಲೆಯವನಾಗಿದ್ದು, ಜಮ್ಮು ಐಐಟಿಗೆ ಪ್ರವೇಶ ಪಡೆಯುವ ಮುನ್ನ ಆಗ್ರಾ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಮುಗಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಭಾನುವಾರ ಮಧ್ಯಾಹ್ನ ಸಂತ್ರಸ್ತ ವಿದ್ಯಾರ್ಥಿನಿ ವಿವಸ್ತ್ರಳಾಗಿ ರಸ್ತೆಯಲ್ಲಿ ನಿಂತುಕೊಂಡು ಪೊಲೀಸರ ವಿರುದ್ದ ಘೋಷಣೆಗಳನ್ನು ಕೂಗುತ್ತಿದ್ದಳು. ಅದನ್ನು ಕಂಡ ಇಬ್ಬರು ಮಹಿಳೆಯರು ಓಡಿ ಬಂದು ಆಕೆಗೆ ಬಟ್ಟೆ ಹೊದಿಸಿ ಹತ್ತಿರದ ಕ್ಲಿನಿಕ್‌ಗೆ ಕರೆದೊಯ್ದರು. ಆಕೆ ಮಾನಸಿಕವಾಗಿ ನೊಂದಿದ್ದಾಳೆ ಎಂದು ನಾವು ಭಾವಿಸಿದ್ದೇವೆ ಮತ್ತು ಆ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದೇವೆ. ಪೊಲೀಸರು ಆಕೆಯನ್ನು ಮಾನಸಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ indianexpress.com ವಿವರಿಸಿದೆ.

“ಭಾನುವಾರ ಸಂಜೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾವು ಮೂರು ದಿನಗಳ ಕಾಲ ಆಕೆಯ ಮೇಲೆ ನಿಗಾ ಇರಿಸಿದ್ದೆವು. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಆಕೆಯ ಚಟುವಟಿಕೆಗಳನ್ನು ಎಚ್ಚರಿಕೆಯಿಂದ ಗಮನಿಸಿದ್ದೇವೆ. ಅಸಹಜವಾಗಿ ಆಕೆಯಲ್ಲಿ ಏನೂ ಕಂಡು ಬಂದಿಲ್ಲ. ಹಾಗಾಗಿ, ಮಂಗಳವಾರ, ಲಕ್ನೋದಿಂದ ಆಗಮಿಸಿದ್ದ ಆಕೆಯ ತಾಯಿಗೆ ಆಕೆಯನ್ನು ಹಸ್ತಾತರಿಸಿದ್ದೇವೆ” ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.

ಅತ್ಯಾಚಾರದ ದೂರು ದಾಖಲಿಸುವ ಮುನ್ನ, ಜುಲೈ 29ರಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಂದ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದಳು. ನಾವು ಆ ಬಗ್ಗೆ ನಾವು ಪರಿಶೀಲನೆ ನಡೆಸಿದ್ದೆವು. ಆಕೆಯ ಆರೋಪ ಬೆಂಬಲಿಸುವ ಯಾವುದೇ ಪುರಾವೆ ನಮಗೆ ಕಂಡು ಬಂದಿರಲಿಲ್ಲ ಎಂದು ಠಾಣಾಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...