Homeಕರ್ನಾಟಕಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

- Advertisement -
- Advertisement -

ವಿಧಾನಸಭೆಯ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ನಿನ್ನೆ ವಿಧಾನಸಭೆಯಲ್ಲಿ ಅತ್ಯಾಚಾರ ಅನಿವಾರ್ಯವಾದರೆ ಮಲಗಿ ಆನಂದಿಸಿ ಎಂಬ ಹೇಳಿಕೆಯನ್ನು ಉಲ್ಲೇಖಿಸಿ ಭಾರಿ ಟೀಕೆಗೆ ಗುರಿಯಾಗಿದ್ದರು. ರಮೇಶ್ ಕುಮಾರ್‌ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಉಂಟಾಗಿತ್ತು.

ತಮ್ಮ ಉದಾಸೀನ ಮತ್ತು ನಿರ್ಲಕ್ಷ್ಯದ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಕ್ಷಮೆಯಾಚಿಸಿದ್ದಾರೆ. ನನ್ನ ಮಾತುಗಳ ಬಗ್ಗೆ ಮುಂದೆ ಎಚ್ಚರವಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

“ಅತ್ಯಾಚಾರ”ದ ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗಾಗಿ ನಾನು ಎಲ್ಲರಲ್ಲಿಯೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೆನೆ. ನನ್ನ ಉದ್ದೇಶವು ಒಂದು ಹೇಯ ಅಪರಾಧವನ್ನು ಕ್ಷುಲ್ಲಕಗೊಳಿಸುವುದು ಅಥವಾ ಅಮುಖ್ಯವಾಗಿಸುವುದು ಆಗಿರಲಿಲ್ಲ. ಅದು ಯೋಚಿಸದೇ ಬಂದ ಹೇಳಿಕೆ! ಇನ್ನು ಮುಂದೆ ನನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ಗುರುವಾರ ಅಧಿವೇಶನದ ಸಮಯದಲ್ಲಿ ರೈತರ ಸಮಸ್ಯೆಗಳ ಮೇಲಿನ ಚರ್ಚೆ ವೇಳೆ ಎಲ್ಲರಿಗೂ ಸಮಯ ನೀಡಿದರೆ ಅಧಿವೇಶನ ನಡೆಸುವುದಾದರೂ ಹೇಗೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದಾಗ ರಮೇಶ್‌ ಕುಮಾರ್‌ ಈ ಆಕ್ಷೇಪಾರ್ಹ ಹೇಳಿಕೆಯನ್ನು ಉಲ್ಲೇಖಿಸಿದ್ದರು.

‘ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನೀವು ಏನು ಡಿಸೈಡ್ ಮಾಡಿಕೊಳ್ಳುತ್ತಿರೋ ಅದಕ್ಕೆ ನಾನು ಎಸ್‌, ಎಸ್‌ ಎನ್ನಬೇಕು ಅಷ್ಟೇ. ರಮೇಶ್ ಕುಮಾರ್ ಅವರೇ ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್​ದ ಸಿಚುಯೇಷನ್ ಅನ್ನೋ ರೀತಿ ಆಗಿದೆ. ಇದನ್ನು ಕಂಟ್ರೋಲ್ ಮಾಡಿ ನಿಯಂತ್ರಣದಲ್ಲಿಟ್ಟು, ಒಂದು ವ್ಯವಸ್ಥಿತವಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ಬಿಟ್ಟು ಹೀಗೆ ಮಾತಾಡಿ ಎಂದು ಬಿಟ್ಟುಬಿಡುವುದು. ಆ ಸ್ಥಿತಿಗೆ ಬಂದುಬಿಟ್ಟಿದೆ” ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಮೇಶ್​ಕುಮಾರ್, ‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌’ (ಒಂದು ಹೇಳಿಕೆಯಿದೆ. ಅತ್ಯಾಚಾರ ಅನಿವಾರ್ಯವಾದಾಗ, ಮಲಗಿ ಆನಂದಿಸಿ) ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ಪೀಕರ್ ಕಾಗೇರಿ ಸೇರಿದಂತೆ ಹಲವು ಮಂದಿ ನಕ್ಕು, ತಮಾಷೆಯಾಗಿ ತೆಗೆದುಕೊಂಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

NDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು...

0
NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ರಾಜೀನಾಮೆ ಪ್ರಕಟಿಸಿದ ಬೆನ್ನಲ್ಲೆ 'ರವೀಶ್ ಕುಮಾರ್ ಅಫಿಶಿಯಲ್' ಹೆಸರಿನ ಯೂಟ್ಯೂಬ್ ಚಾನೆಲ್‌ ಅನ್ನು ಆರಂಭಿಸಿದ್ದಾರೆ. ತಮ್ಮ ಮೊದಲ ವಿಡಿಯೋದಲ್ಲಿ "ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಿರುವ...