Homeಕರ್ನಾಟಕಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಆದರೆ ಈ ಎರಡು ಕಾಲೇಜುಗಳು ಮಾತ್ರ ಹಣ ದೋಚುವ ತಮ್ಮ ನಿತ್ಯಕಾಯಕದಲ್ಲಿ ನಿರತವಾಗಿವೆ. ಆ ಮೂಲಕ ಯಾರೇ ಹೋರಾಡಲಿ, ಯಾರೇ ಕೂಗಾಡಲಿ, ನಮ್ಮ ಹಣ ದೋಚುವುದರಲ್ಲಿ ಸಾಟಿ ಇಲ್ಲ ಎನ್ನುತ್ತಿದ್ದಾರೆ ಬಳ್ಳಾರಿಯ ಈ ಎರಡು ಖಾಸಗಿ ಕಾಲೇಜುಗಳು.

ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನೂ ಆರಂಭವೇ ಆಗಿಲ್ಲ. ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಶಿಕ್ಷಣ ತಜ್ಞರು ಎಚ್ವರಿಕೆ ನೀಡುತ್ತಿದ್ದಾರೆ. ಆದರೆ ಬಳ್ಳಾರಿಯಲ್ಲಿರುವ ಶ್ರೀ ಚೈತನ್ಯ ಎಜುಕೇಷನ್ ಇನ್ಸ್ಟಿಟ್ಯೂಟ್ ಮತ್ತು ನಾರಾಯಣ ಶಿಕ್ಷಣ ಸಂಸ್ಥೆಗಳು ಈಗಾಗಲೇ ಭರ್ಜರಿಯಾಗಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳುತ್ತಿವೆ.

ಅಷ್ಟು ಮಾತ್ರವಲ್ಲದೇ ವಿದ್ಯಾರ್ಥಿಗಳಿಂದ ತಲಾ 70,000 ಹಣ ಪಡೆದು ರಶೀದಿ ನೀಡಲಾಗಿದೆ. ಈ ಕುರಿತ ಎಲ್ಲಾ ದಾಖಲೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈ ಬಗ್ಗೆ ಮೊದಲಿಗೆ ಎನ್‌ಎಸ್‌ಯುಐ ಬಳ್ಳಾರಿ ಜಿಲ್ಲಾಧ್ಯಕ್ಷ ಸಿದ್ದು ಹಳ್ಳೇಗೌಡರವರು ಬಳ್ಳಾರಿ ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐರವರಿಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ರಾಜ್ಯ ಕಾಂಗ್ರೆಸ್‌ ಪಕ್ಷವು ಟ್ವೀಟ್‌ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. “ಸುರೇಶ್‌ ಕುಮಾರ್‌ ಅವರೇ, ಎಲ್ಲಾ ವಿಷಯಗಳಲ್ಲೂ ಬಹಳ ನಾಟಕೀಯವಾಗಿ ವರ್ತಿಸುವ ತಾವು ಅನುಮತಿ ಇಲ್ಲದೇ ಪದವಿ ಪೂರ್ವ ಕಾಲೇಜು ನಡೆಯುತ್ತಿರುವ ಬಗ್ಗೆ, ಎಸ್ಎಸ್ಎಲ್‌ಸಿ ಪರೀಕ್ಷೆಗಳೇ ನಡೆಯದೆ ಪ್ರಥಮ ಪಿಯುಸಿಗೆ ದಾಖಲಾತಿ ನಡೆಸುತ್ತಿರುವ ಬಗ್ಗೆ ಯಾವ ಕ್ರಮ ಜರುಗಿಸುವಿರಿ?
ಅಕ್ರಮ ನಡೆಸುತ್ತಿರುವ ಕಾಲೇಜುಗಳ ಪರವಾನಗಿ ರದ್ದುಪಡಿಸಿ ನಿಮ್ಮ ಬದ್ಧತೆ ತೋರಿಸಿ” ಎಂದು ಸವಾಲೆಸೆದಿದೆ.

1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಕಾರ ಅವಧಿಗೆ ಮುನ್ನವೇ ದಾಖಲಾತಿ ಮಾಡಿಕೊಳ್ಳುವುದು ನಿಯಮಗಳ ಉಲ್ಲಂಘನೆಯಾಗುತ್ತದೆ. ಅದರಲ್ಲಿಯೂ ಕೊರೊನಾದಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಕಾಲೇಜುಗಳು ಹಣ ವಸೂಲಿಗಿಳಿದಿವೆ.

ಒಟ್ಟಾರೆಯಾಗಿ ಶಿಕ್ಷಣ ಎನ್ನುವುದು ಮನುಷ್ಯನ ಸಮಗ್ರ ವಿಕಾಸಕ್ಕೆ ದಾರಿಯಾಗಬೇಕು. ಆದರೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಲು ಆರಂಭಿಸಿದರೋ ಅಂದಿನಿಂದ ಎಲ್ಲಾ ಮೌಲ್ಯಗಳಿಗೂ ಬೆಲೆ ಇಲ್ಲದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...