Homeಮುಖಪುಟಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

ಉನ್ನತ ಶಿಕ್ಷಣ ಪಡೆಯುವ ಮುಸ್ಲಿಮರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ವರದಿ

- Advertisement -
- Advertisement -

ಉನ್ನತ ಶಿಕ್ಷಣಕ್ಕೆ ದಾಖಲಾಗುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ಪ್ಲಾನಿಂಗ್ ಆಂಡ್‌ ಅಡ್ಮಿನಿಸ್ಟ್ರೇಷನ್‌ನ ಮಾಜಿ ಪ್ರೊಫೆಸರ್ ಅರುಣ್ ಸಿ.ಮೆಹ್ತಾ ಅವರು ಸಿದ್ದಪಡಿಸಿದ ‘ಭಾರತದಲ್ಲಿ ಮುಸ್ಲಿಮರ ಶಿಕ್ಷಣದ ಸ್ಥಿತಿ’ ವರದಿಯ ಪ್ರಕಾರ 2021ರಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವವರ ಪ್ರಮಾಣ 8.5% ಕಡಿಮೆಯಾಗಿದೆ.

ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (UDISE+) ಮತ್ತು ಉನ್ನತ ಶಿಕ್ಷಣದ ಕುರಿತ ಆಲ್ ಇಂಡಿಯಾ ಸರ್ವೆ (AISHE)ನ ಡೇಟಾವನ್ನು ಆಧರಿಸಿ ವರದಿಯನ್ನು ಸಿದ್ದಪಡಿಸಲಾಗಿದೆ.

2019-20ರಲ್ಲಿ 21 ಲಕ್ಷ ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2020-21ರಲ್ಲಿ ಈ ಸಂಖ್ಯೆ 19.21 ಲಕ್ಷಕ್ಕೆ ಕುಸಿದಿದೆ. 2016-17ರಲ್ಲಿ 17,39,218 ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರೆ, 2019-20ರಲ್ಲಿ 21,00,860 ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಿದ್ದರು. 2020-21ರಲ್ಲಿ 19,21,713ಕ್ಕೆ ಇಳಿಕೆಯಾಗಿದೆ. ಈ ಅಂಕಿ-ಅಂಶಗಳು ವಿದ್ಯಾರ್ಥಿಗಳ ದಾಖಲಾತಿಯಲ್ಲಿ 1,79,147ರಷ್ಟು ಇಳಿಕೆಯಾಗಿರುವುದನ್ನು ಬಹಿರಂಗಪಡಿಸುತ್ತದೆ.

ಇದಲ್ಲದೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ವೆ ವೇಳೆ ಗಮನಿಸಲಾದ ಗಮನಾರ್ಹ ಅಂಶವೆಂದರೆ 11 ಮತ್ತು 12ನೇ ತರಗತಿಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಶೇಕಡಾವಾರು ಇಳಿಕೆಯಾಗಿದೆ.

ಪ್ರಾಥಮಿಕ ಹಂತದ 6-8ನೇ ತರಗತಿವರೆಗೆ ಒಟ್ಟು 6.67 ಕೋಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಮುಸ್ಲಿಮರು ಸುಮಾರು 14.42% ರಷ್ಟಿದ್ದರೆ, ಮಾಧ್ಯಮಿಕ ಹಂತದಲ್ಲಿ 9-10ನೇ ತರಗತಿಗಳಲ್ಲಿ ಇದು 12.62%ಕ್ಕೆ ಇಳಿಕೆಯಾಗಿದೆ ಮತ್ತು 11-12ನೇ ತರಗತಿಗೆ ಬರುವಾಗ ಇದು 10.76%ಕ್ಕೆ ಇಳಿಕೆಯಾಗುತ್ತಿದೆ ಎನ್ನುವುದನ್ನು ವರದಿಯು ಬಹಿರಂಗಪಡಿಸುತ್ತದೆ.

ರಾಜ್ಯವಾರು ಅಂಕಿ ಅಂಶಗಳ ಪ್ರಕಾರ ಅಸ್ಸಾಂನಲ್ಲಿ 29.52% ಮತ್ತು ಪಶ್ಚಿಮ ಬಂಗಾಳದಲ್ಲಿ 23.22% ಮುಸ್ಲಿಂ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಸ್ಥಗಿತಗೊಳಿಸಿದರೆ,  ಜಮ್ಮು ಮತ್ತು ಕಾಶ್ಮೀರದಲ್ಲಿ 5.1% ಮತ್ತು ಕೇರಳ 11.91% ಡ್ರಾಪ್‌ಔಟ್ ತೋರಿಸುತ್ತದೆ. ಇದಲ್ಲದೆ ಬಿಹಾರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಅನೇಕ ಮುಸ್ಲಿಂ ಮಕ್ಕಳು ಇನ್ನೂ ಶಿಕ್ಷಣ ವ್ಯವಸ್ಥೆಯಿಂದ ಹೊರಗುಳಿದಿದ್ದಾರೆ ಮತ್ತು ವಯಸ್ಸಿಗೆ ತಕ್ಕಂತೆ ಅವರನ್ನು ಶಾಲೆಗಳಿಗೆ ಸೇರಿಸುವುದು ಆದ್ಯತೆಯಾಗಬೇಕು ಎಂದು ವರದಿ ಹೇಳಿದೆ.

ಅನೇಕ ಮುಸ್ಲಿಂ ವಿದ್ಯಾರ್ಥಿಗಳು ಕಡಿಮೆ ಆದಾಯದ ಕುಟುಂಬಗಳಿಂದ ಬಂದವರು ಮತ್ತು ಉನ್ನತ ಶಿಕ್ಷಣದ ವೆಚ್ಚವನ್ನು ಭರಿಸಲು ಹೆಣಗಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ಮತ್ತು ಬೆಂಬಲವನ್ನು ಒದಗಿಸುವುದು ಅತ್ಯಗತ್ಯ. ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗಳು, ಅನುದಾನಗಳು ಮತ್ತು ಹಣಕಾಸಿನ ನೆರವು ಅವಕಾಶಗಳ ಸಂಖ್ಯೆಯನ್ನು ಹೆಚ್ಚಿಸುವುದು ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲಿದೆ ಎಂದು ವರದಿಯು ಉಲ್ಲೇಖಿಸಿದೆ.

AISHE ಸಮೀಕ್ಷೆ 2020-21 ಉನ್ನತ ಶಿಕ್ಷಣದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಪ್ರಾತಿನಿಧ್ಯದ ಕುಸಿತವನ್ನು ಸಹ ಸೂಚಿಸಿದೆ. ಇದಲ್ಲದೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗಿಂತ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ ಎಂದು ವರದಿಯು ಬಹಿರಂಗಪಡಿಸಿದೆ.

ಇದನ್ನು ಓದಿ: ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...