Homeಮುಖಪುಟ'ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?' | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್...

‘ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?’ | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್ ಆಕ್ರೋಶ!

- Advertisement -
- Advertisement -

ದೆಹಲಿಯಲ್ಲಿರುವ ಸುಮಾರು 700 ವರ್ಷಗಳಷ್ಟು ಹಳೆಯ ಲೋಧಿ ಯುಗದ ಸಮಾಧಿಯನ್ನು ಆಕ್ರಮಿಸಿಕೊಂಡಿದ್ದಕ್ಕಾಗಿ ಡಿಫೆನ್ಸ್ ಕಾಲೋನಿ ವೆಲ್ಫೇರ್ ಅಸೋಸಿಯೇಷನ್ ​​(DCWA) ಅನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿದ್ದು, ಸ್ಮಾರಕವನ್ನು ರಕ್ಷಿಸುವಲ್ಲಿ ವಿಫಲವಾದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಅನ್ನು ತರಾಟೆಗೆ ತೆಗೆದುಕೊಂಡಿದೆ. ಸ್ಮಾರಕಕ್ಕೆ ಉಂಟಾದ ಹಾನಿಯ ಪ್ರಮಾಣವನ್ನು ಅಧ್ಯಯನ ಮಾಡಲು ಮತ್ತು ಅದರ ಮರುಸ್ಥಾಪನೆ ಕ್ರಮಗಳನ್ನು ಸೂಚಿಸಲು ಪುರಾತತ್ವ ತಜ್ಞರನ್ನು ನೇಮಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಕಾಲೊನಿ

ಸ್ಮಾರಕವು ಸಮಾಜ ವಿರೋಧಿ ಶಕ್ತಿಗಳಿಂದ ಹಾನಿಗೊಳಗಾಗುತ್ತದೆ ಎಂದು ಹೇಳುವ ಮೂಲಕ 1960 ರ ದಶಕದಲ್ಲಿ ಶೇಖ್ ಅಲಿಯ ಗುಮ್ಮಟವನ್ನು ಕಾಲೊನಿ ಅಸೋಸಿಯೇಷನ್ ಆಕ್ರಮಿಸಿಕೊಂಡಿತ್ತು. 15 ನೇ ಶತಮಾನದ ಈ ರಚನೆಯನ್ನು ಅಸೋಸಿಯೇಷನ್ ತನ್ನ ಕಚೇರಿಯಾಗಿ ಬಳಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ದೆಹಲಿ ಕಾಲೊನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುಮ್ಮಟವನ್ನು ಪ್ರವೇಶಿಸಲು ನಿಮಗೆ ಎಷ್ಟು ಧೈರ್ಯ ಇರಬೇಕು. ಯಾವ ರೀತಿಯ ವಾದಗಳನ್ನು ನೀವು ಮಾಡುತ್ತಿದ್ದೀರಿ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಅಸೋಸಿಯೇಷನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಅಸೋಸಿಯೇಷನ್ ವಸಾಹತುಶಾಹಿ ಆಡಳಿತಗಾರರಂತೆ ಮಾತನಾಡುತ್ತಿದೆ ಎಂದು ನ್ಯಾಯಾಲಯ ಹೇಳಿದ್ದು, “ಅಸೋಸಿಯೇಷನ್ ಸ್ಥಳವನ್ನು ಆಕ್ರಮಿಸಿಕೊಂಡಿದ್ದಲ್ಲದೆ, ಎಸಿ ಅಳವಡಿಸಿದ ಕಚೇರಿಯಲ್ಲಿ ಕುಳಿತು ತನ್ನ ಆಡಳಿತವನ್ನು ನಡೆಸುತ್ತಿದೆ. ಅವರು ಬಾಡಿಗೆಯನ್ನು ಪಾವತಿಸುತ್ತಿದ್ದಾರೆಯೆ?” ನ್ಯಾಯಾಲಯ ಹೇಳಿದೆ.

ಅಸೋಸಿಯೇಷನ್‌ಗೆ ಸ್ಮಾರಕವನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ನ್ಯಾಯಾಲಯವು ಪುರಾತತ್ವ ಇಲಾಖೆಯನ್ನು ದೂಷಿಸಿದ್ದು, “ನೀವು (ಎಎಸ್‌ಐ) ಯಾವ ರೀತಿಯ ಪ್ರಾಧಿಕಾರ? ನಿಮಗೆ ಇರುವ ಕರ್ತವ್ಯವೇನು? ಪುರಾತನ ರಚನೆಗಳನ್ನು ರಕ್ಷಿಸುವ ನಿಮ್ಮ ಕರ್ತವ್ಯದಿಂದ ಹಿಂದೆ ಸರಿದಿದ್ದೀರಿ. ನಿಮ್ಮ ನಿಷ್ಕ್ರಿಯತೆಯನ್ನು ನೋಡಿ ನಾವು ವಿಚಲಿತರಾಗಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗುಮ್ಮಟದಿಂದ ಹೊರಹೋಗುವಂತೆ ಅಸೋಸಿಯೇಷನ್‌ಗೆ ನಿರ್ದೇಶನ ನೀಡುವುದಾಗಿ ನ್ಯಾಯಾಲಯವು ಹೇಳಿದ್ದು, 2025ರ ಜನವರಿ 21ರಂದು ವಿಚಾರಣೆಯನ್ನು ಮುಂದೂಡಿದೆ.

ಸಮಾಧಿಯನ್ನು 500 ವರ್ಷಗಳ ಹಿಂದೆ ಲೋದಿ ರಾಜವಂಶದ ಅವಧಿಯಲ್ಲಿ ನಿರ್ಮಿಸಲಾಗಿತ್ತು. ದೆಹಲಿಯ ಡಿಫೆನ್ಸ್ ಕಾಲೋನಿಯ ನಿವಾಸಿ ರಾಜೀವ್ ಸೂರಿ ಎಂಬುವರು ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕಟುವಾದ ಟೀಕೆಗಳನ್ನು ಮಾಡಿದೆ. ಈ ರಚನೆಯನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೂರಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ನಿರ್ದೇಶನಗಳನ್ನು ನೀಡಲು ದೆಹಲಿ ಹೈಕೋರ್ಟ್ 2019ರಲ್ಲಿ ನಿರಾಕರಿಸಿದ ನಂತರ ಸೂರಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....