Homeಕರ್ನಾಟಕ2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

- Advertisement -
- Advertisement -

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು ಹಾಗೂ 2024ರ ಚುನಾವಣೆಯಲ್ಲಿ ಕಾರ್ಮಿಕ ವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ನಿರ್ಣಯಿಸಿದೆ. ಕಾರ್ಮಿಕರು, ರೈತರು ಹಾಗೂ ಕೂಲಿಕಾರರ ಬದುಕನ್ನು ಕಸಿಯುತ್ತಿರುವ ಸರ್ಕಾರಗಳನ್ನು ಮತ್ತು ಅವುಗಳ ನೀತಿಗಳನ್ನು ಕಿತ್ತೊಗೆಯಲು ಇಡೀ ದೇಶದ ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಜಾತಿ, ಧರ್ಮ, ವರ್ಣ, ವರ್ಗ ಭೇದಗಳನ್ನು ಮರೆತು ಐಕ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ಕರೆ ನೀಡಿದೆ.

ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ದೇಶದ ಪ್ರಮುಖ ಕಾರ್ಮಿಕ ಸಂಘಟನೆಯಾದ ‘ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌’ (ಸಿಐಟಿಯು) 17ನೇ ಅಖಿಲ ಭಾರತ ಸಮ್ಮೇಳನ ನಡೆದಿದ್ದು, ಭಾನುವಾರ ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಬಹಿರಂಗ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ವೇಳೆ ದುಡಿಯುವ ಜನರ ಸಮಸ್ಯೆಗಳ ಕುರಿತು ಚರ್ಚಿಸಿ ಕೈಗೊಂಡಿರುವ ಹಲವು ನಿರ್ಣಯಗಳನ್ನು ಘೋಷಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಅವರು, “ಆರ್‌ಎಸ್‌ಎಸ್‌ ಅಣತಿಯಂತೆ ಒಕ್ಕೂಟ ಸರ್ಕಾರ ನಡೆಯುತ್ತಿದ್ದು, ಧರ್ಮದ ರಾಜಕಾರಣ ಮಾಡಿ ಜನರನ್ನು ಬೀದಿಗೆ ತಳ್ಳುತ್ತಿದೆ. ಅದಾನಿ, ಅಂಬಾನಿಯಂತಹ ದೇಶದ ಶ್ರೀಮಂತರ ಸಂಪತ್ತನ್ನು ಹೆಚ್ಚುಮಾಡಲು ರೈತರು, ಕಾರ್ಮಿಕರು, ಬಡವರ ಬದುಕನ್ನು ಜರ್ಜರಿತಗೊಳಿಸಿದೆ. ಇಂತಹ ಸರ್ಕಾರಕ್ಕೆ ಮಾತಿನ ಮೂಲಕ ಹೇಳಿದರೆ ತಿಳಿಯಲ್ಲ. ಹಾಗಾಗಿ ದೇಶದ ಜನರು, ರೈತರು ಕಾರ್ಮಿಕರು ಐಕ್ಯತೆ ಸಾಧಿಸಿ ಹೋರಾಟದ ಮೂಲಕವೇ ಅವರನ್ನು ಕಿತ್ತೊಗೆಯಬೇಕು” ಎಂದು ಕರೆ ನೀಡಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ
CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ

 

“ನಾಲ್ಕು ಕಾರ್ಮಿಕ ತಿದ್ದುಪಡಿ ಮಸೂದೆಗಳನ್ನು ಜಾರಿ ತಂದು ಕಾರ್ಮಿಕರು ಸಂಘ ಕಟ್ಟುವ ಹಕ್ಕನ್ನು ಕಸಿಯಲು ಮುಂದಾಗಿದೆ. ಕಾರ್ಮಿಕರ ಹಕ್ಕುಗಳನ್ನು ಕಸಿದು ಮತ್ತೆ ಗುಲಾಮಿ ಸಂಸ್ಕೃತಿಯನ್ನು ಜಾರಿಗೆ ತಂದು ಕೆಲಸದ ಅವಧಿಯನ್ನು ಎಂಟರಿಂದ 12 ಗಂಟೆಗೆ ಏರಿಸಲು ಒಕ್ಕೂಟ ಸರ್ಕಾರ ಮುಂದಾಗಿದ್ದು, ಅದನ್ನು ಕಾರ್ಮಿಕ ವರ್ಗ ಹಾಗೂ ಸಿಐಟಿಯು ಪ್ರಬಲ ಹೋರಾಟದಿಂದ ಹಿಮ್ಮೆಟ್ಟಿಸಿವೆ. ಮುಂದೆಯೂ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳನ್ನು ಹೋರಾಟದ ಮೂಲಕ ಬಗ್ಗು ಬಡಿಯಬೇಕು” ಎಂದು ಅವರು ಹೇಳಿದರು.

40% ಸರ್ಕಾರ ಕಿತ್ತೊಗೆಯೋಣ; ಮೀನಾಕ್ಷಿ ಸುಂದರಂ

ಸಭೆಯಲ್ಲಿ ಮಾತನಾಡಿದ ಸಿಐಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ,“ಧರ್ಮವನ್ನು ತೋರಿಸಿ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿರುವ 40% ಸರ್ಕಾರವನ್ನು ಸಂಪೂರ್ಣವಾಗಿ ಕಿತ್ತು ಬಿಸಾಕಬೇಕು. ಆ ನಿಟ್ಟಿನಲ್ಲಿ 2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು. ದೆಹಲಿ ರೈತ ಹೋರಾಟ ಮೋದಿ ಸರ್ಕಾರಕ್ಕೆ ಯಾವ ಭಾಷೆಯಲ್ಲಿ ಪಾಠ ಕಲಿಸಿತೋ ಅದೇ ಹೋರಾಟದ ಭಾಷೆಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಇಡೀ ದೇಶದ ಜನ ಅನುಸರಿಸಬೇಕು” ಎಂದು ಕರೆ ಹೇಳಿದರು.

CITU ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿದರು

“ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ಜನ ಸಾಮಾನ್ಯರು ಆಯ್ಕೆ ಮಾಡಿರುವುದಲ್ಲ. ಬದಲಾಗಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರವಾಗಿ ಆಯ್ಕೆಯಾಗಿದ್ದವರನ್ನು ಖರೀದಿಸಿ ರೂಪುಗೊಂಡಿರುವುದು. ಹಾಗಂತ ಬಿಜೆಪಿ ತೊಲಗಿಸಿ ಕಾಂಗ್ರೆಸ್, ಜೆಡಿಎಸ್ ಅಥವಾ ಇನ್ಯಾವುದೊ ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಪರಿಸ್ಥಿತಿ ಬದಲಾಗುತ್ತದೆ ಎಂದು ನಂಬಲಾಗಿದೆ. ಆದರೆ, ಸರ್ಕಾರಗಳು ಅಥವಾ ಅದರ ಪ್ರತಿನಿಧಿಗಳು ಮಾತ್ರವಲ್ಲ ಅವುಗಳ ನೀತಿಗಳು ಬದಲಾಗಬೇಕಿದೆ” ಎಂದು ಅವರು ಪ್ರತಿಪಾದಿಸಿದರು.

“ಹಿಂದೆ ಐಟಿಐ ಓದಿದರೆ ಸಾಕಿತ್ತು, ಕಾರ್ಖಾನೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡಿ ನಂತರ ಖಾಯಂ ಉದ್ಯೋಗ ಪಡೆಯುವ ಅವಕಾಶ ಇತ್ತು. ಅದರೆ ಇಂದಿನ ಯುವಜನತೆ ಏನೇ ಶಿಕ್ಷಣ ಪಡೆದರೂ ಯಾವುದೇ ಮಾನ್ಯತೆ ಇಲ್ಲ. ಆದರೆ, ಒಂದು ಕಾರ್ಪೊರೇಟ್ ಕಂಪನಿ ನೀಡುವ ಸರ್ಟಿಫಿಕೇಟ್‌ಗೆ ಮಾನ್ಯತೆ ಪಡೆಯುತ್ತಿದೆ. ಕಾರ್ಮಿಕ ಕಾನೂನುಗಳ ಮೂಲಕ ಪರ್ಮನೆಂಟ್ ಕಾರ್ಮಿಕರನ್ನು ಮನೆಗೆ ಕಳಿಸುತ್ತ ಟ್ರೈನಿಗಳನ್ನು ಕೆಲಸಕ್ಕೆ ತೆಗೆದುಕೊಂಡು ಶೋಷಿಸಲಾಗುತ್ತಿದೆ. ಕೈಗಾರಿಕೆ ಸ್ಥಾಪಿಸಲು ಭೂಮಿ ಕೊಟ್ಟ ರೈತರ ಮಕ್ಕಳಿಗೆ ಉದ್ಯೋಗ ನೀಡದೆ ವಂಚಿಸಲಾಗುತ್ತಿದೆ” ಎಂದು ಮೀನಾಕ್ಷಿ ಸುಂದರಂ ಅಕ್ರೋಶ ವ್ಯಕ್ತಪಡಿಸಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಭಾಗವಹಿಸುತ್ತಿರುವ ಕಾರ್ಮಿಕರು

“ಸದಾ ಮಾಧ್ಯಮಗಳ ಮುಂದೆ ಸೈನಿಕರ ಬಗ್ಗೆ ಮಾತನಾಡುವ ಈ ಸರ್ಕಾರ, ದೇಶದ ರಕ್ಷಣೆ ಮಾಡುವವರನ್ನೂ ಕಡೆಗಣಿಸಲು ಮುಂದಾಗಿದೆ. ಅಲ್ಲಿಯೂ ಅಗ್ನಿವೀರ್ ಎಂಬ ಹೆಸರಿನಲ್ಲಿ ದೇಶದ ರಕ್ಷಣಾ ವಲಯವನ್ನು ಕಡೆಗಣಿಸಿದೆ. ಅದನ್ನೂ ಕೂಡ ಖಾಸಗಿಯವರಿಗೆ ವಹಿಸಲಾಗುತ್ತಿದೆ. ಗಡಿಯಲ್ಲಿ ಜೀವ ಕೊಡುವವರಿಗೂ ಉದ್ಯೋಗ ಭದ್ರತೆಯನ್ನು ಕಸಿಯುವ ಹುನ್ನಾರ ಮಾಡಿದೆ. ದೇಶದಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೂ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿ, ಕಾರ್ಖಾನೆಗಳು ಸೇರಿದಂತೆ ಎಲ್ಲವನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಬಿಇಎಂಎಲ್, ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆಯನ್ನು ಮಾರಾಟ ಮಾಡಲು ಮುಂದಾಗುತ್ತಿದ್ದಾರೆ” ಎಂದು ಅವರು ಹೇಳಿದರು.

ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿದೆ: ಡಾ.ಕೆ. ಹೇಮಲತ

ಸಮ್ಮೇಳನದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಡಾ.ಕೆ. ಹೇಮಲತ, “ಉತ್ತರ ಪ್ರದೇಶ, ಗುಜರಾತ್‌ ಸೇರಿದಂತೆ ಡಬಲ್ ಇಂಜಿನ್ ಸರ್ಕಾರ ಇರುವ ರಾಜ್ಯಗಳ ಕಾರ್ಮಿಕ ನಾಯಕರು ಸಮ್ಮೇಳನದಲ್ಲಿ ನಡೆದ ಚರ್ಚೆಗಳಲ್ಲಿ ಭಾಗವಹಿಸಿದ್ದರು. ಆಗ ಅಲ್ಲಿನ ಬಿಜೆಪಿ ಸರ್ಕಾರದ ನೀತಿಗಳು ಎಷ್ಟು ತೊಂದರೆ ಮಾಡುತ್ತಿವೆ ಎಂದು ಅವರು ವಿವರಿಸಿದ್ದಾರೆ. ಅದೇ ರೀತಿ ಕೇರಳದ ಕಾರ್ಮಿಕ ನಾಯಕರು ಕೂಡಾ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅವರು ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿ ನಿಂತಿದೆ ಎಂದು ವಿವರಿಸಿದ್ದರು” ಎಂದು ಅವರು ಹೇಳಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

“ಕೇರಳದ ಎಡಪಂಥೀಯ ಸರ್ಕಾರ ಖಾಸಗೀಕರನದ ವಿರುದ್ಧ ನಿಂತಿದೆ. ಕೊರೊನಾ ಸಂದರ್ಭದಲ್ಲಿ ಕಾರ್ಮಿಕರು, ರೈತರು ಹಾಗೂ ಬಡವರ ಹಾಗೂ ಆ ರಾಜ್ಯದ ಜನರಿಗಾಗಿ ಕೇರಳ ಸರ್ಕಾರ ಕೆಲಸ ಮಾಡಿದೆ. ಹಾಗಾಗಿ ದೇಶದ ಬೇರೆ ರಾಜ್ಯಗಳಲ್ಲಿ ಕೂಡಾ ಅದೇ ರೀತಿಯ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಅದಕ್ಕಾಗಿ ನಾವು ನಿರ್ಣಯ ಕೈಗೊಂಡಿದ್ದೇವೆ” ಎಂದು ಹೇಮಲತ ಅವರು ಹೇಳಿದರು.

ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ಹಾಗೂ ಕಾರ್ಮಿಕರು, ಕೊಳಗೇರಿ ನಿವಾಸಿಗಳ ಬದುಕು, ಮನೆಗೆಲಸದವರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ನಿರ್ಮಾಣಗೊಂಡ ಕಿರುಚಿತ್ರಗಳನ್ನು ಸಿಐಟಿಯು ಸಮ್ಮೇಳನದಲ್ಲಿ ಪ್ರದರ್ಶನ ನಡೆಸಿ ಬಹುಮಾನ ವಿತರಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಕೇರಳ, ತಮಿಳುನಾಡು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಕಾರ್ಮಿಕ ಪ್ರತಿನಿಧಿಗಳು ಸೇರಿದಂತೆ, ಕರ್ನಾಟಕದ ಎಲ್ಲಾ ಜಿಲ್ಲೆಗಳ ಕಾರ್ಮಿಕರು ಸೇರಿದ್ದರು. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದವು ತುಂಬಿ ತುಳುಕಿತ್ತು. ಸಮಾರಂಭದಲ್ಲಿ ಶ್ರಮಿಕ ವರ್ಗದ ಹೋರಾಟ, ಇತಿಹಾಸ ನೆಪಿಸುವ, ಡೊಳ್ಳು ಕುಣಿತ, ತಮಟೆ ವಾದ್ಯಗಳಂತಹ ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಜರುಗಿತು.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...