Homeಕರ್ನಾಟಕಇಪಿಎಫ್‌ ಹಣ ವಂಚನೆ ಆರೋಪ; ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರಂಟ್ ಜಾರಿ

ಇಪಿಎಫ್‌ ಹಣ ವಂಚನೆ ಆರೋಪ; ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರಂಟ್ ಜಾರಿ

- Advertisement -
- Advertisement -

ಇಪಿಎಫ್‌ಒ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ವರದಿಯಾಗಿದೆ.

ರಾಬಿನ್ ಉತ್ತಪ್ಪ ಅವರು ಸೆಂಚುರಿ ಲೈಫ್‌ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನು ನಿರ್ವಹಿಸುವಾಗ ನೌಕರರ ಸಂಬಳದಿಂದ ₹23 ಲಕ್ಷ ಕಡಿತಗೊಳಿಸಿದ್ದಾರೆ. ಆದರೆ, ಅವರ ಭವಿಷ್ಯ ನಿಧಿ ಕೊಡುಗೆಗಳನ್ನು ಠೇವಣಿ ಮಾಡಲು ವಿಫಲರಾಗಿದ್ದಾರೆ ಎಂದು ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪಿಎಫ್ ಪ್ರಾದೇಶಿಕ ಆಯುಕ್ತ ಷಡಕ್ಷರಿ ಗೋಪಾಲ್ ರೆಡ್ಡಿ ಅವರು ವಾರಂಟ್ ಹೊರಡಿಸಿದ್ದು, ಅವರು ಕರ್ನಾಟಕದ ನ್ಯಾಯವ್ಯಾಪ್ತಿಯ ಪುಲಕೇಶಿನಗರ ಪೊಲೀಸರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

“ಡಿಸೆಂಬರ್ 4 ರಂದು ಕಾರ್ಯಗತಗೊಳಿಸಲಾದ ವಾರಂಟ್ ಅನ್ನು ಉತ್ತಪ್ಪ ಅವರು ಪುಲಕೇಶಿನಗರ ನಿವಾಸದಲ್ಲಿ ಇಲ್ಲದಿರುವುದು ಕಂಡುಬಂದ ನಂತರ ಹಿಂತಿರುಗಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಅವರ ಕುಟುಂಬ ದುಬೈನಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಬಾಕಿಯನ್ನು ಪಾವತಿಸಲು ವಿಫಲವಾದ ಕಾರಣ ಸಂತ್ರಸ್ತ ಕಾರ್ಮಿಕರ ಪಿಎಫ್ ಖಾತೆಗಳನ್ನು ಇತ್ಯರ್ಥಪಡಿಸಲು ಕಚೇರಿಗೆ ಅಡ್ಡಿಯಾಗಿದೆ ಎಂದು ವಾರಂಟ್ ಗಮನಿಸಿದೆ. ರಾಬಿನ್ ಉತ್ತಪ್ಪ ಅವರನ್ನು ಬಂಧಿಸಿ ಡಿಸೆಂಬರ್ 27ರೊಳಗೆ ವಾರೆಂಟ್ ವಾಪಸ್ ನೀಡುವಂತೆ ಪೊಲೀಸರಿಗೆ ಸೂಚಿಸಿದೆ.

ರಾಬಿನ್ ಉತ್ತಪ್ಪ ಹಿನ್ನಲೆ:

59 ಅಂತಾರಾಷ್ಟ್ರೀಯ ಕ್ರಿಕೆಡ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ರಾಬಿನ್ ಉತ್ತಪ್ಪ ಅವರು, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪ್ರಮುಖ ಆಟಗಾರರಾಗಿದ್ದರು. ಅವರ ಕ್ರಿಕೆಟ್ ವೃತ್ತಿಜೀವನದಲ್ಲಿ, 54 ಒಡಿಐ ಇನ್ನಿಂಗ್ಸ್‌ಗಳಲ್ಲಿ ಏಳು ಅರ್ಧ ಶತಕಗಳನ್ನು ಒಳಗೊಂಡಂತೆ 1,183 ರನ್ ಗಳಿಸಿದರು.

ರಾಬಿನ್ ಉತ್ತಪ್ಪ ಐಪಿಎಲ್‌ನಲ್ಲಿ ಪ್ರಮುಖ ಆಟಗಾರರಾಗಿದ್ದರು, ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್‌ನಂತಹ ತಂಡಗಳಿಗಾಗಿ ಆಡುತ್ತಿದ್ದರು. ಅವರು 2014 ರಲ್ಲಿ ಕೆಕೆಆರ್‌ ಗೆಲುವಿನ ತಂಡದ ಭಾಗವಾಗಿದ್ದರು. ಅವರ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದರು.

ಇದನ್ನೂ ಓದಿ; ಪೊಲೀಸರ ಮುಂದೆಯೆ ವ್ಯಾಪಾರಿಯ ಮೇಲೆ ದಾಳಿಗೆ ಯತ್ನ – ಬಿಜೆಪಿಯ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...