Homeಕರ್ನಾಟಕಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

- Advertisement -
- Advertisement -

eಶಿವಮೊಗ್ಗ ಬಿಜೆಪಿ ಪಕ್ಷದ ಭದ್ರಕೋಟೆ. ರಾಜ್ಯದ ಅಧಿಕಾರದ ಕೇಂದ್ರ. ಆದರೆ, ಭದ್ರಾವತಿ ತಾಲೂಕು ಮಾತ್ರ ಇದಕ್ಕೆ ಅಪವಾದ. ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಾದರೂ, ಯಡಿಯೂರಪ್ಪನವರೇ ಬಂದು ಭರ್ಜರಿ ಪ್ರಚಾರ ಮಾಡಿದರೂ ಸಹ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಬಿಜೆಪಿ ಅಭ್ಯರ್ಥಿಯ ಮತ ಈವರೆಗೆ 15 ಸಾವಿರವನ್ನೂ ಮೀರಿದ ಇತಿಹಾಸವಿಲ್ಲ. ಆ ಮಟ್ಟಿಗೆ ಭದ್ರಾವತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಇಲ್ಲಿ ಏನಿದ್ದರೂ ಸಂಗಮೇಶ್ ವರ್ಸಸ್ ಅಪ್ಪಾಜಿ ಗೌಡ ನಡುವೆಯೇ ನೇರಾ ನೇರ ಸ್ಫರ್ಧೆಯಿತ್ತು.

ಆದರೆ, ಇದೀಗ ಜೆಡಿಎಸ್ ಪಕ್ಷದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನರಾಗಿದ್ದಾರೆ. ಹೀಗಾಗಿ ಈಗ ಭದ್ರಾವತಿ ಮಟ್ಟಿಗೆ ಜೆಡಿಎಸ್ ನಾವಿಕನಿಲ್ಲದ ಹಡಗಿನಂತಾಗಿದ್ದು, ಜೆಡಿಎಸ್ ಕಾರ್ಯಕರ್ತರು ಕಂಗಾಲಾಗಿದ್ದಾರೆ. ಹಾಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪಾಲಿಗೆ ರಾಜಕೀಯ ಎದುರಾಳಿಯೇ ಇಲ್ಲದಂತಾಗಿದೆ. ಈ ಪರಿಸ್ಥಿಯ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಭದ್ರಾವತಿಯಲ್ಲಿ ತನ್ನ ಮಾಮೂಲಿ ತಂತ್ರಗಾರಿಕೆ ಹೂಡುವ ಮೂಲಕ ಸಂಗಮೇಶ್‌ಗೆ ಪರ್ಯಾಯವಾಗಿ ಬಿಂಬಿಸಿಕೊಳ್ಳುವ ಯತ್ನದಲ್ಲಿದೆ.

ಇಂತಹ ಯತ್ನಗಳಲ್ಲೊಂದೆ ಭದ್ರಾವತಿಯಲ್ಲಿ ಇತ್ತೀಚೆಗೆ ಕಬಡ್ಡಿ ಅಂಗಳದಲ್ಲಿ ನಡೆದ ಗಲಾಟೆ. ಬಿ.ವೈ ವಿಜಯೇಂದ್ರ ಭದ್ರಾವತಿ ಪಕ್ಷ ಸಂಘಟನೆಯ ಕಾರಣಕ್ಕಾಗಿ ಭದ್ರಾವತಿ ನಗರದಲ್ಲಿ ಕಾಲಿಡುತ್ತಿದ್ದಂತೆ, ಇಂತಹದ್ದೊಂದು ಗಲಾಟೆ ನಡೆದಿರುವುದು ಸಹ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ನಡುವೆ ಭದ್ರಾವತಿ ಶಾಸಕ ಇದೇ ವಿಚಾರವಾಗಿ ಸದನದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು, ಸದನದಿಂದ ಅಮಾನತುಗೊಂಡಿದ್ದು ಇಡೀ ರಾಜ್ಯದ ಗಮನ ಸೆಳೆದಿತ್ತು. ಹಾಗಾದರೆ ಏನಿದು ಗಲಾಟೆ?

ಭದ್ರಾವತಿ ಕಬಡ್ಡಿ ಅಂಗಳದಲ್ಲಿ ನಡೆದದ್ದೇನು?

ಭದ್ರಾವತಿಯಲ್ಲಿ ಪ್ರತಿ ವರ್ಷ ಮಾಜಿ ಶಾಸಕ ಅಪ್ಪಾಜಿ ಗೌಡ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದರೆ, ಹಾಲಿ ಶಾಸಕ ಸಂಗಮೇಶ್ ಕಬಡ್ಡಿ ಟೂರ್ನಮೆಂಟ್ ಆಯೋಜನೆ ಮಾಡುವುದು ವಾಡಿಕೆ. ರಾಜ್ಯ ಮಟ್ಟದ ಈ ಟೂರ್ನಿಗಳಲ್ಲಿ ಭಾಗವಹಿಸಲು ರಾಜ್ಯದ ನಾನಾ ಮೂಲೆಗಳಿಂದ ಕ್ರೀಡಾಪಟುಗಳು ಭದ್ರಾವತಿಗೆ ಆಗಮಿಸುತ್ತಾರೆ. ಗೆದ್ದವರಿಗೆ ಆಕರ್ಷಕ ಬಹುಮಾನಗಳೂ ಉಂಟು.

ಅದಂರತೆ ನಗರದ ಕನಕ ಮಂಟಪ ಆಟದ ಮೈದಾನದಲ್ಲಿ ಈ ಭಾರಿ ಫೆಬ್ರವರಿ 28ರಂದು ಶಾಸಕ ಸಂಗಮೇಶ್ ನೇತೃತ್ವದಲ್ಲಿ ಕಬಡ್ಡಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಧರ್ಮಪ್ರಸಾದ್ ಅವರ ತಂಡವೂ ಭಾಗವಹಿಸಿತ್ತು. ಗಲಭೆಗೆ ಇಷ್ಟು ಮಾತ್ರದ ಕಾರಣ ಸಾಕಾಗಿತ್ತು.

ಶಾಸಕ ಸಂಗಮೇಶ್ ಅವರ ತಂಡ ಲೀಗ್ ಹಂತದಲ್ಲೇ ಸೋಲನುಭವಿಸಿ ಕೂಟದಿಂದ ಹೊರನಡೆದಿತ್ತು. ಫೈನಲ್ ಪಂದ್ಯದಲ್ಲಿ ಸ್ಥಳೀಯ ವ್ಯಕ್ತಿ ಉಮೇಶ್ ನೇತೃತ್ವದ ತಂಡ ಹಾಗೂ ಧರ್ಮಪ್ರಸಾದ್ ನೇತೃತ್ವದ ತಂಡ ಸೆಣಸಿದ್ದರೂ ಗೆದ್ದದ್ದು ಮಾತ್ರ ಉಮೇಶ್ ತಂಡ. ಆದರೆ, ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದ ಧರ್ಮಪ್ರಸಾದ್ ತಂಡ ಆಟದ ಮೈದಾನದಲ್ಲೆ ಪಟಾಕಿ ಹಚ್ಚಿ ಸಂಭ್ರಮಿಸಲು ಮುಂದಾಗಿತ್ತು.

ಅಸಲಿಗೆ ಕಬಡ್ಡಿ ಕೂಟಕ್ಕಾಗಿ 10 ಲಕ್ಷ ಖರ್ಚು ಮಾಡಿ ಸಿಂಥೆಟಿಕ್ ಮ್ಯಾಟ್ ಹಾಕಲಾಗಿತ್ತು. ಹೀಗಾಗಿ ಇಲ್ಲಿ ಪಟಾಕಿ ಸಿಡಿಸಬೇಡಿ ಎಂದು ಶಾಸಕ ಸಂಗಮೇಶ್ ಮಗ ಬಸವೇಶ್ ತಾಕೀತು ಮಾಡಿದ್ದಾರೆ. ಆದರೆ, ಗೆದ್ದ ಹುಮ್ಮಸ್ಸಿನಲ್ಲಿದ್ದ ಧರ್ಮಪ್ರಸಾದ್ ತಂಡ ಈ ಮಾತನ್ನು ಕೇಳುವ ಗೋಜಿಗೆ ಹೋಗಿಲ್ಲ. ಪರಿಣಾಮ ಸ್ಥಳದಲ್ಲಿ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ತಾಳ್ಮೆ ಕಳೆದುಕೊಂಡ ಶಾಸಕರ ಮಗ ಬಸವೇಶ್ ಬಿಜೆಪಿ ಬೆಂಬಲಿತರ ಮೇಲೆ ಕೈ ಮಾಡಿದ್ದು ನಿಜ. ಸಂಗಮೇಶ್ ಹಾಗೂ ಧರ್ಮಪ್ರಸಾದ್ ಬಣಗಳ ನಡುವೆ ತಳ್ಳಾಟ ನೂಕಾಟವಾಗಿ, ಅದು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು.

ಈ ವೇಳೆ ಬಿಜೆಪಿ ಬೆಂಬಲಿತರೂ ಸಹ ಪ್ರತಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಗಲಾಟೆಯಾಗುತ್ತಿದ್ದಂತೆ ಸ್ಥಳದಲ್ಲಿ ಜೈ ಶ್ರೀರಾಮ್, ಭಾರತ್ ಮಾತಾಕಿ ಜೈ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ಜಗಳ ಕೊನೆಗೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬಲ್ಲಿಗೆ ಬಂದು ನಿಂತಿದೆ. ಅಥವಾ ವಿಷಯವನ್ನು ತಿರುಚುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದರೆ ತಪ್ಪಾಗಲಾರದು.

ಗಲಾಟೆ ನಡೆಯುತ್ತಿದ್ದಂತೆ ಹಳೆ ನಗರ ಪೊಲೀಸ್ ಠಾಣೆಗೆ ತೆರಳಿದ್ದ ಧರ್ಮಪ್ರಸಾದ್ ಬಣ, ಶಾಸಕರ ಮಗ ಬಸವ ಹಾಗೂ ಆತನ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡದ್ದಾರೆ. ಸಂಗಮೇಶ್ ಬಣದವರೂ ಸಹ ಪ್ರತಿದೂರು ನೀಡಿದ್ದಾರೆ. ಕಾಂಗ್ರೆಸ್ ಮೇಲೆ 3 ಹಾಗೂ ಬಿಜೆಪಿ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ. ಈ ನಡುವೆ ಶಾಸಕರ ಮಗ ಬಸವ ಆಟಗಾರರ ಮೇಲೆ ಕೈ ಮಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಜಿಲ್ಲೆಯಾದ್ಯಂತ ವೈರಲ್ ಆಗಿದೆ. ಇದನ್ನು ಆಧಾರವಾಗಿಟ್ಟುಕೊಂಡು ಆತನ ವಿರುದ್ಧ ಸೆಕ್ಷನ್ 307 ಕೊಲೆ ಯತ್ನ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ಇದಲ್ಲದೆ, 15 ಜನ ಸಂಗಮೇಶ್ ಬೆಂಬಲಿಗರನ್ನು ಬಂಧಿಸಲಾಗಿದೆ.

ಸದನದಲ್ಲಿ ಶಾಸಕ ಸಂಗಮೇಶ್ ಹೈ ಡ್ರಾಮಾ

ತಮ್ಮ ಮಗ ಬಸವನ ಮೇಲೆ ನಾನ್ ಬೇಲಬಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತಿದ್ದಂತೆ ಶಾಸಕ ಸಂಗಮೇಶ್ ವ್ಯಗ್ರರಾಗಿದ್ದಾರೆ. ಮುಂದಿನ 30 ದಿನ ಆತನಿಗೆ ಬೇಲ್ ಸಿಗುವುದು ಅಸಾಧ್ಯವಾಗಿದ್ದು, ಇದೀಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಈ ವಿಚಾರ ಸಾಮಾನ್ಯವಾಗಿ ಸಂಗಮೇಶ್ ಆಕ್ರೋಶಕ್ಕೆ ಕಾರಣವಾಗಿದೆ.

ಏಕೆಂದರೆ ಭದ್ರಾವತಿ ಯಾವಾಗಲೂ ಸೂಕ್ಷ್ಮ ಪ್ರದೇಶಗಳಲ್ಲೊಂದು. ಅಪ್ಪಾಜಿ-ಸಂಗಮೇಶ್ ಬೆಂಬಲಿಗರ ನಡುವೆ ಆಗಾಗ್ಗೆ ಇಂತಹ ಗಲಾಟೆಗಳಾಗುವುದು ಮಾಮೂಲಿ. ಆದರೆ, ಅದಕ್ಕೊಂದು ನಿಯಂತ್ರಣವಿತ್ತು. ಯಾವ ಗಲಾಟೆಯೂ ತೀರಾ ವೀಪರೀತಕ್ಕೆ ಹೋದ ಇತಿಹಾಸವೇ ಇಲ್ಲ. ಇನ್ನು ಧರ್ಮವನ್ನು ಮುಂದಿಟ್ಟು ಜನರನ್ನು ಎತ್ತಿಕಟ್ಟುವ ಕೆಲಸಕ್ಕೆ ಇಬ್ಬರೂ ಮುಂದಾಗಿರಲಿಲ್ಲ. ಏಕೆಂದರೆ ಭದ್ರಾವತಿ ಎಲ್ಲಾ ಧರ್ಮ ಹಾಗೂ ಹಲವು ಜಾತಿಗಳ ಜನ ಒಟ್ಟಿಗೆ ವಾಸಿಸುವ ನಗರ.

ಬಸವೇಶ್

ಆದರೆ, ಇದೇ ಮೊದಲ ಬಾರಿಗೆ ಬಿಜೆಪಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ದೂರಿದೆ. ಅಲ್ಲದೆ, ಶಾಸಕರ ಮಗನನ್ನು ಜೈಲಿಗೆ ಕಳುಹಿಸಲಾಗಿದೆ. ಪರಿಣಾಮ ಈ ವಿಚಾರ ರಾಜಕೀಯವಾಗಿ ದೊಡ್ಡ ತಿರುವು ಪಡೆದುಕೊಳ್ಳುತ್ತಿದೆ. ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯೇತರ ಶಾಸಕ ಇರುವುದು ಭದ್ರಾವತಿಯಲ್ಲೇ. ಹೀಗಾಗಿ ಭದ್ರಾವತಿಯಲ್ಲೂ ಬಿಜೆಪಿ ಜಂಡಾ ಹಾರಿಸಲು ಕುತಂತ್ರ ನಡೆಸಲಾಗುತ್ತಿದೆ, ನಮ್ಮ ಮೇಲೆ ವಿನಾಃಕಾರಣ ಕೇಸು ದಾಖಲಿಸಲಾಗುತ್ತಿದೆ ಎಂಬುದು ಶಾಸಕ ಸಂಗಮೇಶ್ ಆರೋಪ.

ಇದೇ ಕಾರಣಕ್ಕೆ ಅವರು ಇತ್ತೀಚೆಗೆ ಸದನದಲ್ಲೂ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದರು. ಅದೇ ಕಾರಣಕ್ಕೆ ಅವರನ್ನು ಇದೀಗ ಸದನದಿಂದಲೇ ಅಮಾನತು ಮಾಡಲಾಗಿದೆ. ಅಲ್ಲದೆ, ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಶಿವಮೊಗ್ಗಕ್ಕೆ ತೆರಳಿ ಕಾಂಗ್ರೆಸ್ ಚಲೋ ಚಳುವಳಿಯನ್ನೂ ನಡೆಸಿದ್ದರು. ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಆದರೆ, ಈ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಹೀಗಾಗಿ ಈ ಪ್ರಕರಣ ಮುಂದೆ ಯಾವ ತಿರುವನ್ನು ಪಡೆಯಲಿದೆ? ಎಂಬುದನ್ನು ಕಾದು ನೋಡಬೇಕಿದೆ.

ಫೈನಲ್ ಪಂದ್ಯದ ಹಿಂದಿನ ದಿನವೇ ನಡೆದಿತ್ತು ಸಣ್ಣ ಕಿರಿಕ್

ಇದಿಷ್ಟು ಘಟನೆಗೆ ಸಂಬಂಧಿಸಿದ್ದಾದರೆ, ಇನ್ನೂ ಘಟನೆಯ ಹಿಂದಿನ ದಿನವೇ ಕಬ್ಬಡಿ ಆಟದ ಮೈದಾನದಲ್ಲಿ ಎರಡು ಗುಂಪುಗಳ ನಡುವೆ ಸಣ್ಣಪುಟ್ಟ ಗಲಾಟೆಗಳಾಗಿದ್ದವು. ಈ ಮಾಹಿತಿ ಪೊಲೀಸ್ ಇಲಾಖೆಗೂ ಗೊತ್ತು. ಹೀಗಾಗಿ ಭದ್ರಾವತಿ ನ್ಯೂ ಟೌನ್ ಸರ್ಕಲ್ ಇನ್ಸ್ಪೆಕ್ಟರ್ ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಿ ಆಟದ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕಾಗಿತ್ತು. ಆದರೆ, ಅವರು ಸಿಎಂ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರಣ ಈ ವಿಚಾರವನ್ನು ಗಮನಿಸುವಲ್ಲಿ ಎಡವಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...