Homeಮುಖಪುಟಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

- Advertisement -
- Advertisement -

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ (ಫೆ.19) ಮಾಹಿತಿ ನೀಡಿದೆ.

ಶೃಂಗಸಭೆಯಲ್ಲಿ ಗುರುವಾರ ಬಿಲ್ ಗೇಟ್ಸ್ ಪ್ರಧಾನ ಭಾಷಣ ಮಾಡಬೇಕಿತ್ತು. ಅವರ ಬದಲಾಗಿ ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಗಳ ಅಧ್ಯಕ್ಷ ಅಂಕುರ್ ವೋರಾ ಅವರು ಸಭೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ವರದಿಯಾಗಿದೆ.

“ಎಐ ಶೃಂಗಸಭೆಯ ಪ್ರಮುಖ ಆದ್ಯತೆಗಳ ಮೇಲೆ ಗಮನವನ್ನು ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಎಚ್ಚರಿಕೆಯ ಪರಿಶೀಲನೆಯ ನಂತರ, ಬಿಲ್ ಗೇಟ್ಸ್ ಅವರು ತಮ್ಮ ಪ್ರಧಾನ ಭಾಷಣವನ್ನು ಮಾಡುವುದಿಲ್ಲ. ಗೇಟ್ಸ್ ಫೌಂಡೇಶನ್ ಅನ್ನು ಆಫ್ರಿಕಾ ಮತ್ತು ಭಾರತದ ಕಚೇರಿಗಳ ಅಧ್ಯಕ್ಷರಾದ ಅಂಕುರ್ ವೋರಾ ಪ್ರತಿನಿಧಿಸಲಿದ್ದು, ಅವರು ಇಂದು ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ” ಎಂದು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

“ನಮ್ಮ ಹಂಚಿಕೆಯ ಆರೋಗ್ಯ ಮತ್ತು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ಭಾರತದಲ್ಲಿನ ನಮ್ಮ ಕೆಲಸಕ್ಕೆ ಗೇಟ್ಸ್ ಫೌಂಡೇಶನ್ ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಹೇಳಿದೆ.

ಬಿಲ್ ಗೇಟ್ಸ್ ಸೋಮವಾರ (ಫೆ.16) ಭಾರತಕ್ಕೆ ಆಗಮಿಸಿದ್ದು, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ.

ತೀವ್ರ ವಿರೋಧದದ ನಂತರ ದೂರ ಉಳಿದ ಗೇಟ್ಸ್

ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ ಜೊತೆ ಸಂಪರ್ಕ ಹೊಂದಿದ್ದ ಬಿಲ್‌ಗೇಟ್ಸ್ ಆರೋಪ ಹೊತ್ತಿರುವ ಬಿಲ್‌ ಗೇಟ್ಸ್ ಅನ್ನು ಭಾರತದ ಎಐ ಶೃಂಗಸಭೆಗೆ ಮುಖ್ಯ ಭಾಷಣಕಾರನಾಗಿ ಆಹ್ವಾನಿಸಿರುವುದನ್ನು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರಮುಖವಾಗಿ ವಿರೋಧಿಸಿದ್ದರು.

ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಬಿಲ್ ಗೇಟ್ಸ್ ಹೆಸರು ಇರುವುದನ್ನು ಉಲ್ಲೇಖಿಸಿದ್ದ ಅವರು, ಇಂತಹ ಆರೋಪ ಹೊತ್ತ ವ್ಯಕ್ತಿಗೆ ಭಾರತದ ಪ್ರತಿಷ್ಠಿತ ವೇದಿಕೆಯಲ್ಲಿ ಅವಕಾಶ ನೀಡುವುದು ‘ಅವಮಾನಕರ’ ಎಂದು ಕಿಡಿಕಾರಿದ್ದರು. ‘ಭಾರತವು ಅವರಿಗೆ ನೈತಿಕ ಶುದ್ಧೀಕರಣದ ವೇದಿಕೆಯಾಗಬಾರದು’ ಎಂದು ಪ್ರಿಯಾಂಕಾ ಸರ್ಕಾರವನ್ನು ಒತ್ತಾಯಿಸಿದ್ದರು.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದರು. ಬಿಲ್ ಗೇಟ್ಸ್ ವಿಷಯದಲ್ಲಿ ಸರ್ಕಾರದ ಒಳಗೇ ಗೊಂದಲಗಳಿವೆ ಎಂದು ಟೀಕಿಸಿದ್ದ ಖೇರಾ, ಗೇಟ್ಸ್ ಭಾಗವಹಿಸುವಿಕೆಯ ಬಗ್ಗೆ ಪ್ರಧಾನಿ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದರು.

ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು, ಎಪ್‌ಸ್ಟೀನ್‌ ಲೈಂಗಿಕ ಹಗರಣದ ಸಂತ್ರಸ್ತರ ಪರವಾಗಿ ಭಾರತ ನಿಲ್ಲಬೇಕು. ಬಿಲ್‌ ಗೇಟ್ಸ್‌ನಂತಹ ವ್ಯಕ್ತಿಗಳನ್ನು ‘ಜಾಗತಿಕ ದಾರ್ಶನಿಕ’ ಎಂದು ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದರು.

ಎಕ್ಸ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಅನೇಕ ಬಳಕೆದಾರರು #CancelBillGates ಹ್ಯಾಶ್‌ಟ್ಯಾಗ್ ಬಳಸಿ ಪ್ರತಿಭಟಿಸಿದ್ದರು. ಬಿಲ್ ಗೇಟ್ಸ್ ಭಾರತವನ್ನು ತಮ್ಮ ತಾಂತ್ರಿಕ ಮತ್ತು ವೈದ್ಯಕೀಯ ಉತ್ಪನ್ನಗಳ ಪ್ರಯೋಗಾಲಯವನ್ನಾಗಿ ಬಳಸುತ್ತಿದ್ದಾರೆ ಎಂಬ ಹಳೆಯ ಆರೋಪಗಳನ್ನು ಮತ್ತೆ ಮುನ್ನೆಲೆಗೆ ತಂದಿದ್ದರು.

ಈ ವಿರೋಧಗಳ ಬೆನ್ನಲ್ಲೇ, ಸರ್ಕಾರದ ಮೂಲಗಳು “ನಾವು ಎಫ್‌ಸ್ಟೀನ್‌ ಪ್ರಕರಣದ ಸಂತ್ರಸ್ತರ ಪರವಾಗಿ ನಿಲ್ಲುತ್ತೇವೆ” ಎಂದು ತಿಳಿಸಿದ್ದವು. ಅಂತಿಮವಾಗಿ ಶೃಂಗಸಭೆಯ ವೆಬ್‌ಸೈಟ್‌ನಿಂದ ಗೇಟ್ಸ್ ಹೆಸರು ಕಾಣೆಯಾಯಿತು ಮತ್ತು ಬಿಲ್ ಗೇಟ್ಸ್ ತಮ್ಮ ಭೇಟಿಯನ್ನು ರದ್ದುಗೊಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...