Homeಮುಖಪುಟಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ...

ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ

- Advertisement -
- Advertisement -

ತಮಿಳುನಾಡಿನ ಥೇಣಿ ಜಿಲ್ಲಾ ಜೈಲಿನಿಂದ 17 ಕೈದಿಗಳು ಪರಾರಿಯಾದ ಒಂದು ದಿನದೊಳಗೆ, ಮಂಗಳವಾರ ಸಂಜೆಯ ವೇಳೆಗೆ ತಮಿಳುನಾಡು ಪೊಲೀಸರು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಅವರ ಪೈಕಿ 13 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ದಕ್ಷಿಣ ವಲಯದ ಐಜಿ ವಿಜಯೇಂದ್ರ ಬಿದರಿ ಅವರು ಈ ವಿಷಯವನ್ನು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

ಈ 17 ಕೈದಿಗಳು ತೇಕಂಪಟ್ಟಿ ಉಪ-ಜೈಲಿನ ಒಂದೇ ಕೋಣೆಯಲ್ಲಿದ್ದರು. ರಾತ್ರಿ 10.30ರ ಸುಮಾರಿಗೆ, ಕೈದಿಗಳಲ್ಲಿ ಒಬ್ಬರಿಗೆ ಫಿಟ್ಸ್ ಕಾಣಿಸಿಕೊಂಡಿದೆ ಎಂದು ಹೇಳಿ ಅವರು ಜೈಲು ಸಿಬ್ಬಂದಿಯನ್ನು ಸಹಾಯಕ್ಕಾಗಿ ಕರೆದರು.

ಜೈಲು ಸಿಬ್ಬಂದಿಯೊಬ್ಬರು ಕೋಣೆಯೊಳಗೆ ಪ್ರವೇಶಿಸಿದಾಗ, ಕೈದಿಗಳು ಅವರ ಮೇಲೆ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾದರು. ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ತಂಗಪಾಂಡಿ ಅವರ ತಲೆಗೆ ಗಾಯವಾಗಿದ್ದು, ಅವರನ್ನು ಜಿ. ವಿಲಕ್ಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಇಬ್ಬರು ಜೈಲು ಸಿಬ್ಬಂದಿಗೂ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ವಿಶೇಷ ತಂಡಗಳ ರಚನೆ; ಬಹುತೇಕ ಕೈದಿಗಳ ಸೆರೆ

ಪರಾರಿಯಾದ ಕೈದಿಗಳನ್ನು ಪತ್ತೆಹಚ್ಚಿ ಬಂಧಿಸಲು ಪೊಲೀಸರು 17 ವಿಶೇಷ ತಂಡಗಳನ್ನು ರಚಿಸಿದ್ದರು. ಅಧಿಕಾರಿಗಳು ವಾಹನಗಳನ್ನು ತೀವ್ರವಾಗಿ ತಪಾಸಣೆ ಮಾಡಿದ್ದಲ್ಲದೆ, ವಿವಿಧ ಮಾರ್ಗಗಳ ಮೇಲೆ ನಿಗಾ ಇರಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಡ್ರೋನ್ ತಂತ್ರಜ್ಞಾನವು ಅತ್ಯಂತ ಸಹಕಾರಿಯಾಯಿತು; ಡ್ರೋನ್ ಮೂಲಕ ಕೈದಿಗಳು ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಪೊಲೀಸರು, ಅವರನ್ನು ಒಂದು ನಿರ್ದಿಷ್ಟ ಪ್ರದೇಶದಲ್ಲಿ ಸುತ್ತುವರೆದು 13 ಮಂದಿಯನ್ನು ಬಂಧಿಸಿದರು. ನೆರೆಯ ದಿಂಡಿಗಲ್ ಜಿಲ್ಲೆಯ 16 ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸಹ ಸ್ಥಾಪಿಸಲಾಗಿತ್ತು.

ಕಂದಮನೂರು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಜೈಲಿನ ಸುತ್ತಮುತ್ತ ದಟ್ಟವಾದ ಕಾಡು ಮತ್ತು ಪರ್ವತ ಪ್ರದೇಶವಿದ್ದ ಕಾರಣ, ಕೈದಿಗಳು ಸುಲಭವಾಗಿ ಅಡಗಿಕೊಳ್ಳಲು ಯತ್ನಿಸಿದ್ದರು. ತಮಿಳುನಾಡು ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಜೈಲಿನ ಸುತ್ತಲಿನ ಪ್ರದೇಶವನ್ನು ಸೀಲ್ ಮಾಡಿದರು. ಹಗಲಾಗುತ್ತಿದ್ದಂತೆ 3 ವಿಶೇಷ ಡ್ರೋನ್‌ಗಳನ್ನು ಬಳಸಿ ಇಡೀ ಅರಣ್ಯ ಪ್ರದೇಶದಲ್ಲಿ ವೈಮಾನಿಕ ಕಣ್ಗಾವಲು ನಡೆಸಲಾಯಿತು.

ಕಾಡಿನಲ್ಲಿ ಅಡಗಿಕೊಂಡಿದ್ದ ಕೈದಿಗಳು ಮೇಲಿಂದ ಡ್ರೋನ್ ಕಣ್ಣು ತಮ್ಮನ್ನು ಪತ್ತೆಹಚ್ಚಿರುವುದನ್ನು ಕಂಡು ಗಾಬರಿಯಿಂದ ಓಡಲು ಶುರುಮಾಡಿದ್ದಾರೆ. ಡ್ರೋನ್ ದೃಶ್ಯಾವಳಿಗಳ ನೆರವಿನಿಂದ ಪೊಲೀಸರಿಗೆ ಅವರ ನಿಖರವಾದ ಜಾಗ ತಿಳಿಯಿತು.

ಪೊಲೀಸರು ಒಟ್ಟು 17 ವಿಶೇಷ ತಂಡಗಳನ್ನು ಹಾಗೂ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ರಚಿಸಿ ಕಾರ್ಯಾಚರಣೆ ನಡೆಸಿದರು. ಮಂಗಳವಾರ ಸಂಜೆಯ ವೇಳೆಗೆ ಡ್ರೋನ್ ನೆರವಿನಿಂದ ಕಾಡಿನಲ್ಲಿದ್ದ 8 ಕೈದಿಗಳು ಸೇರಿದಂತೆ ಒಟ್ಟು 13 ಕೈದಿಗಳನ್ನು ಮರುಬಂಧಿಸಲಾಯಿತು. ಇದರಲ್ಲಿ ಒಬ್ಬ ಕೈದಿಯನ್ನು ಸ್ಥಳೀಯ ಆಟೋ ಚಾಲಕನೊಬ್ಬ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾನೆ.

ಜೈಲಿನ ಭದ್ರತಾ ಲೋಪ ಮತ್ತು ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳು ಸೇರಿದಂತೆ ಒಟ್ಟು 9 ಜೈಲು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.

ತಪ್ಪಿಸಿಕೊಂಡಿರುವ ಉಳಿದ 4 ಕೈದಿಗಳು ವಿವಿಧ ದಿಕ್ಕುಗಳಲ್ಲಿ ಓಡಿಹೋಗಿದ್ದು, ಅವರಿಗಾಗಿ ತಮಿಳುನಾಡು ಪೊಲೀಸರು ಕೇರಳ ಗಡಿ ಭಾಗಗಳು, ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...

ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರು ಕಟ್‌: ಎಸ್‌ಐಆರ್‌ ಬಳಿಕ ಅರ್ಧದಷ್ಟು ಮತದಾರರು ಪಟ್ಟಿಯಿಂದ ಹೊರಕ್ಕೆ 

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಬರೋಬ್ಬರಿ 46.88 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಂದರೆ, ಎಸ್‌ಐಆರ್‌ ಆರಂಭಕ್ಕೂ ಮುನ್ನ ನಗರದಲ್ಲಿದ್ದ ಒಟ್ಟು...

ಉತ್ತರ ಪ್ರದೇಶ| ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಸಾವು ಪ್ರಕರಣ; ಎಫ್‌ಐಆರ್ ದಾಖಲು

ಅಕ್ಟೋಬರ್ 25 ರಂದು ಪ್ರತಾಪಗಢದ ಡಾ. ಸೋನೆಲಾಲ್ ಪಟೇಲ್ ವೈದ್ಯಕೀಯ ಕಾಲೇಜು ಆವರಣದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಕುಟುಂಬವು, ಸೋಮವಾರ ತಡರಾತ್ರಿ ಆತನ ಮೃತದೇಹವನ್ನು ಹೊತ್ತುಕೊಂಡು ತಮ್ಮ ಊರಾದ...

SIR ಬಳಿಕವೂ ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಬಿಜೆಪಿ ಸದಸ್ಯನ ಹೆಸರು!

ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ಈ ನಡುವೆ ಬಿಜೆಪಿ ಸದಸ್ಯ ಉದಯ್ ಕುಮಾರ್ ಹಾಗೂ ಅವರ ಪತ್ನಿ ಬಿಂದು...

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...