Homeಕರ್ನಾಟಕನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

ನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

- Advertisement -
- Advertisement -

ಮಠಾಧೀಶರಿಗೂ ಅಸಮಾನತೆಯ ಸೋಂಕು ತಗಲುತ್ತಿದೆ, ಈ ಬಗ್ಗೆ ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ವಿಷಾಧವನ್ನು ವ್ಯಕ್ತಪಡಿಸಿದ್ದು, ಹಲವು ವರ್ಷಗಳ ಹಿಂದೆ ನಾನು ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯ ಪ್ರವೇಶಿಸಿದ್ದಕ್ಕೆ ದೇವಸ್ಥಾನವನ್ನು ತೊಳೆದಿದ್ದರು ಎಂದು ಹೇಳಿದ್ದಾರೆ.

ಸಾಣೇಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿರುವ ಚಿತ್ರದುರ್ಗ-ಚಿಕ್ಕಮಗಳೂರು ಅಂತರ್‌ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶುಕ್ರವಾರ ನಡೆದ ‘ಮಠಗಳ ಧಾರ್ಮಿಕ, ಸಾಹಿತ್ಯಕ, ಸಾಂಸ್ಕೃತಿಕ ಕೊಡುಗೆ’ ಗೋಷ್ಠಿಯಲ್ಲಿ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿದ್ದು, ಹಲವು ವರ್ಷಗಳ ಹಿಂದೆ ನಾನು ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯ ಪ್ರವೇಶಿಸಿದ್ದಕ್ಕೆ ದೇವಸ್ಥಾನವನ್ನು ತೊಳೆದಿದ್ದರು. ಆ ದೇವಾಲಯ ಮುಜುರಾಯಿ ಇಲಾಖೆಗೆ ಸೇರಿದ್ದು ಎಂದು ಮೊದಲೇ ತಿಳಿದಿದ್ದರೆ ಕನಕದಾಸನಂತೆ ಪ್ರತಿಭಟನೆ ನಡೆಸಿ ದೇವಾಲಯ ಪ್ರವೇಶಿಸುತ್ತಿದ್ದೆ. ಆದರೆ ಆ ವಿಷಯ ನಂತರ ತಿಳಿಯಿತು, ದೇವಾಲಯ ತೊಳೆಯುವ ಬದಲು ಮನಸ್ಸಿನ ಕೊಳೆಯನ್ನು ತೊಳೆದುಕೊಳ್ಳಿ ಎಂದು ಸಲಹೆಯನ್ನು ನೀಡಿದ್ದಾರೆ.

ಇತ್ತೀಚೆಗಷ್ಟೇ ವೈಕುಂಠ ಏಕಾದಶಿಯಂದು ದೇವಾಲಯದ ಆಹ್ವಾನದ ಮೇರೆಗೆ ನಾವು ಮತ್ತು ಶಾಂತವೀರ ಸ್ವಾಮೀಜಿ ದೇವಾಲಯದ ಗರ್ಭಗುಡಿಯ ಮುಂದಿನ ಪ್ರಾಂಗಣದಲ್ಲಿ ನಿಂತಿದ್ದೆವು. ಗರ್ಭಗುಡಿಗೆ ನಮ್ಮ ಪ್ರವೇಶವನ್ನು ತಡೆದರು. ಆದರೆ ಪೂಜಾರಿಗಳ ಕುಟುಂಬದ ಹೆಣ್ಣುಮಕ್ಕಳಿಗೆ ಅವಕಾಶ ಕಲ್ಪಿಸಿದರು. ಮಠಾಧೀಶರಿಗೇ ಹೀಗಾದರೆ ಹೇಗೆ? ಮುಂದೆಂದೂ ಬಾಗೂರಿನ ಚೆನ್ನಕೇಶವ ಸ್ವಾಮಿ ದೇವಾಲಯಕ್ಕೆ ಹೋಗುವುದಿಲ್ಲ. ಬಸವಣ್ಣನವರು ಕೊಟ್ಟ ಇಷ್ಟಲಿಂಗ ಪೂಜೆ ಇಂದು ಜಾತಿಯಾಗಿ ಪರಿವರ್ತನೆಯಾಗಿದೆ. ಕೆಲವು ಮಠಗಳಲ್ಲಿ ಇನ್ನೂ ಅಸಮಾನತೆ ಎದ್ದು ಕಾಣುತ್ತಿದೆ. ಬಸವಣ್ಣನವರ ತತ್ವ ಆದರ್ಶ ಮತ್ತು ವಚನಗಳನ್ನು ನಾವು ಪಾಲಿಸಿದಾಗ ಮಾತ್ರ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ, ಕರ್ನಾಟಕದ ಪರಂಪರೆಯಲ್ಲಿ ಮಠಗಳ ಪಾತ್ರ ಬಹಳ ದೊಡ್ಡದಾಗಿದೆ. ಹಿಂದಿನಿಂದಲೂ ವೀರಶೈವ ಲಿಂಗಾಯತ ಮಠಗಳು ತಳ ಸಮುದಾಯಗಳ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಬೆಳೆಸಿವೆ ಎಂದು ಅವರು ಹೇಳಿದ್ದಾರೆ.

ನಾವು ದೇಗುಲಕ್ಕೆ ಹೋಗಿ ಬಂದ ಮೇಲೆ ಕುರುಬರ ಸ್ವಾಮೀಜಿ ಒಳಗೆ ಬಂದರೆಂದು ದೇಗುಲವನ್ನೇ ಸ್ವಚ್ಛಗೊಳಿಸಿದ್ದರು. ಇದರಿಂದ ಅಲ್ಲಿನವರು ನಾವು ಹೋಗಿದ್ದಕ್ಕೆ ಸ್ವಚ್ಛವಾಯಿತು ಎಂದು ವ್ಯಂಗ್ಯವಾಡಿದ್ದರು. ಹಾಗಾಗಿ ನಾವು ಚನ್ನಕೇಶವ ದೇಗುಲಕ್ಕೆ ನಾವು ಹೋಗಲ್ಲ ಎಂದು ನಿರ್ಧಾರ ತೆಗೆದುಕೊಂಡೆವು ಎಂದು ಹೇಳಿದ್ದಾರೆ.

ಇದೇ ವೇಳೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಮೀಸಲಾತಿ ಕೇಳಬೇಕಾದವರು ಸುಮ್ಮನಿದ್ದಾರೆ. ಆದರೆ, ಇಂದು ಉಳ್ಳವರೇ ಮೀಸಲಾತಿ ಕೇಳುತ್ತಿದ್ದಾರೆ. ಮೀಸಲಾತಿಗಾಗಿ ಉಳ್ಳವರು ಮತ್ತು ಬಡವರ ನಡುವೆ ದೊಡ್ಡ ಕಂದಕ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಸಾಹಿತಿ ಚಟ್ನಳ್ಳಿ ಮಹೇಶ್ ಇದ್ದರು.

ಇದನ್ನು ಓದಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...