Homeಕರ್ನಾಟಕಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಪ್ರಧಾನಿ ಮೋದಿಯವರೇ, ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು "ಮೈ ಬಿ ಖಾವೂಂಗಾ, ತುಮ್ ಬಿ ಖಾವೋ" (ನಾನು ತಿನ್ನುತ್ತೇನೆ, ನೀವು ತಿನ್ನಿ) ಎಂದು ಬದಲಿಸಿ ಬಿಡಿ- ಸಿದ್ದರಾಮಯ್ಯ

- Advertisement -
- Advertisement -

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿಗೆ ಸಂಬಂಧಿಸಿದಂತೆ ಕಾನೂನು ಮೀರಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಗ್ರಾಮೀಣ ಸುಮಾರ್ಗ ಯೋಜನೆಗೆ ಪದೇ ಪದೇ ಮನವಿ ಮಾಡ್ತಿದ್ದೇನೆ‌. ಆದರೆ ಇನ್ನೂ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ. ಯಡಿಯೂರಪ್ಪನವರು 32 ಬಿಜೆಪಿ ಶಾಸಕರಿಗೆ ತಲಾ 20 ರಿಂದ 23 ಕೋಟಿ ರೂಪಾಯಿಗಳನ್ನು,‌ 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂಪಾಯಿಗಳನ್ನು, ಕಾಂಗ್ರೆಸ್‌ನ 30 ಮಂದಿ ಶಾಸಕರಿಗೆ 5 ಕೋಟಿ ರೂಪಾಯಿಗಳನ್ನು ಹಾಗೂ ಜೆಡಿಎಸ್‌‌ನ 18 ಮಂದಿ ಶಾಸಕರಿಗೆ ಸರ್ಕಾರದಿಂದ ತಲಾ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡವಂತೆ ಆದೇಶ ಹೊರಡಿಸಿದ್ದಾರೆ” ಎಂದು ಈಶ್ವರಪ್ಪ ಆರೋಪಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

“ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಬಿಜೆಪಿ ಮುಖಂಡರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

“ರಾಜ್ಯ ಸರ್ಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ  ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ‌ ಮೂಲಕ ಬಹಿರಂಗ ಗೊಳಿಸಿದ್ದಾರೆ. ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ  ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ’ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” (ನಾನು ತಿನ್ನುತ್ತೇನೆ, ನೀವು ತಿನ್ನಿ) ಎಂದು ಬದಲಿಸಿ ಬಿಡಿ ಎಂದು ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

“ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ  ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...